Mysore
19
broken clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ಲಂಚಕ್ಕೆ ಬೇಡಿಕೆಯಿಟ್ಟದ್ದ ಆರೋಪ ದೃಢ: ವೈದ್ಯನಿಗೆ ಜೈಲು ಶಿಕ್ಷೆ ವಿಧಿಸಿ ಕೋರ್ಟ್‌ ಆದೇಶ

ಮೈಸೂರು: ನಗರದ ಕೆ.ಆರ್‌ ಆಸ್ಪತ್ರೆಯ ವೈದ್ಯರೊಬ್ಬರು ಶಸ್ತ್ರ ಚಿಕಿತ್ಸೆ ಮಾಡಲು ಲಂಚಕ್ಕೆ ಬೇಡಿಕೆಯಿಟ್ಟಿದ್ದರು ಎಂದು ಆರೋಪಿಸಲಾಗಿದ್ದು, ಈ ಆರೋಪ ಸಾಬೀತಾದ ಹಿನ್ನಲೆ, ಕೆ.ಆರ್‌ ಆಸ್ಪತ್ರೆಯ ಮೂಳೆ ಶಸ್ತ್ರ ಚಿಕಿತ್ಸಕ ಡಾ. ಪುಟ್ಟಸ್ವಾಮಿ ಅವರಿಗೆ ಜೈಲು ಶಿಕ್ಷೆ ವಿಧಿಸಿ ಮೈಸೂರಿನ ಮೂರನೇ ಅಪರ ಜಿಲ್ಲಾ ವಿಶೇಷ ಲೋಕಾಯುಕ್ತ ನ್ಯಾಯಾಧೀಶರ ನ್ಯಾಯಾಲಯ ತಿರ್ಪು ನೀಡಿದೆ ಎಂದು ವರದಿಯಾಗಿದೆ.

ಬೆಂಗಳೂರಿನ ಕೂಡಿಗೆ ಹಳ್ಳಿ ನಿವಾಸಿ ಎಸ್‌.ಆರ್‌ ದೇವರಾಜು ಎಂಬುವವರು ದೂರು ನೀಡಿದ್ದವರು. ಏಪ್ರಿಲ್‌ 12, 2017 ರಂದು ಶಸ್ತ್ರ ಚಿಕಿತ್ಸೆ ಮಾಡಲು 40 ಸಾವಿರ ರೂಗಳ ಲಂಚ ನೀಡಲು ಬೇಡಿಕೆಯಿಟ್ಟಿದ್ದರು ಎಂದು ದೂರು ನೀಡಿದ್ದರು.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ, ಆರೋಪ ಸಾಬೀತಾದ ಹಿನ್ನಲೆ, ಭ್ರಷ್ಟಾಚಾರ ನಿರ್ಮೂಲನಾ ಕಾಯ್ದೆ 1988 13(1) ಅಡಿಯಲ್ಲ 3 ವರ್ಷ ಜೈಲು, 25 ಸಾವಿರ ದಂಡ, ದಂಡ ತಪ್ಪಿದ್ದಲ್ಲಿ 6 ತಿಂಗಳ ಸಜೆ, 13(2) ಅಡಿಯಲ್ಲಿ 4 ವರ್ಷ ಜೈಲು ಮತ್ತು 50 ಸಾವಿರ ದಂಡ, ದಂಡ ಕಟ್ಟಲು ಆಗದಿದ್ದಲ್ಲಿ 6 ತಿಂಗಳ ಸಾಧಾರಣ ಸಜೆ ವಿಧಿಸಿ ಕೋರ್ಟ್‌ ತೀರ್ಪು ನೀಡಿದೆ.

 

Tags: