ಮೈಸೂರು: ನಗರದ ಕೆ.ಆರ್ ಆಸ್ಪತ್ರೆಯ ವೈದ್ಯರೊಬ್ಬರು ಶಸ್ತ್ರ ಚಿಕಿತ್ಸೆ ಮಾಡಲು ಲಂಚಕ್ಕೆ ಬೇಡಿಕೆಯಿಟ್ಟಿದ್ದರು ಎಂದು ಆರೋಪಿಸಲಾಗಿದ್ದು, ಈ ಆರೋಪ ಸಾಬೀತಾದ ಹಿನ್ನಲೆ, ಕೆ.ಆರ್ ಆಸ್ಪತ್ರೆಯ ಮೂಳೆ ಶಸ್ತ್ರ ಚಿಕಿತ್ಸಕ ಡಾ. ಪುಟ್ಟಸ್ವಾಮಿ ಅವರಿಗೆ ಜೈಲು ಶಿಕ್ಷೆ ವಿಧಿಸಿ ಮೈಸೂರಿನ ಮೂರನೇ ಅಪರ ಜಿಲ್ಲಾ ವಿಶೇಷ ಲೋಕಾಯುಕ್ತ ನ್ಯಾಯಾಧೀಶರ ನ್ಯಾಯಾಲಯ ತಿರ್ಪು ನೀಡಿದೆ ಎಂದು ವರದಿಯಾಗಿದೆ.
ಬೆಂಗಳೂರಿನ ಕೂಡಿಗೆ ಹಳ್ಳಿ ನಿವಾಸಿ ಎಸ್.ಆರ್ ದೇವರಾಜು ಎಂಬುವವರು ದೂರು ನೀಡಿದ್ದವರು. ಏಪ್ರಿಲ್ 12, 2017 ರಂದು ಶಸ್ತ್ರ ಚಿಕಿತ್ಸೆ ಮಾಡಲು 40 ಸಾವಿರ ರೂಗಳ ಲಂಚ ನೀಡಲು ಬೇಡಿಕೆಯಿಟ್ಟಿದ್ದರು ಎಂದು ದೂರು ನೀಡಿದ್ದರು.
ಪ್ರಕರಣ ದಾಖಲಿಸಿಕೊಂಡ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ, ಆರೋಪ ಸಾಬೀತಾದ ಹಿನ್ನಲೆ, ಭ್ರಷ್ಟಾಚಾರ ನಿರ್ಮೂಲನಾ ಕಾಯ್ದೆ 1988 13(1) ಅಡಿಯಲ್ಲ 3 ವರ್ಷ ಜೈಲು, 25 ಸಾವಿರ ದಂಡ, ದಂಡ ತಪ್ಪಿದ್ದಲ್ಲಿ 6 ತಿಂಗಳ ಸಜೆ, 13(2) ಅಡಿಯಲ್ಲಿ 4 ವರ್ಷ ಜೈಲು ಮತ್ತು 50 ಸಾವಿರ ದಂಡ, ದಂಡ ಕಟ್ಟಲು ಆಗದಿದ್ದಲ್ಲಿ 6 ತಿಂಗಳ ಸಾಧಾರಣ ಸಜೆ ವಿಧಿಸಿ ಕೋರ್ಟ್ ತೀರ್ಪು ನೀಡಿದೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…