Ashburn
31
scattered clouds
Light
Dark

ತುಮಕೂರು: ತಂದೆಯಿಂದಲೇ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ

ತುಮಕೂರು/ತಿಪಟೂರು: ತನ್ನ ತಂದೆಯಿಂದಲೇ ಮಗಳ ಮೇಲೆ ಅತ್ಯಾಚಾರ ನಡೆದಿದೆ ಎಂದು ತಾಯಿಯೊಬ್ಬರು ದೂರು ನೀಡಿರುವ ಘಟನೆ ಜಿಲ್ಲೆಯ ತಿಪಟೂರು ನಗರದ ಹಿಪ್ಪೇತೋಪು ಎಂಬಲ್ಲಿ ನಡೆದಿದೆ.

ತನ್ನ ಮಗಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದರು ಎಂದು ಮೇ.6 ರಂದೇ ತಿಪಟೂರು ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಪತಿ-ಪತ್ನಿ ಬಡ ಕುಟುಂಬದವರಾಗಿದ್ದು, ಕೂಲಿ ಮಾಡಿ ಜೀವನ ಸಾಗಿಸುತ್ತಿದ್ದರು. ಪತ್ನಿ ಕೂಲಿಗೆಂದು ಹೋದಾಗ ಮನೆಯಲ್ಲಿಯೇ ಉಳಿದಿದ್ದ ತಂದೆ ತನ್ನ ಅಪ್ರಾಪ್ತ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ದೂರಿನಲ್ಲಿ ದಾಖಲಿಸಲಾಗಿದೆ.

ಈ ಸಂಬಂಧ ಅಪ್ರಾಪ್ತ ಬಾಲಕಿಯ ತಂದೆಯ ಮೇಲೆ ಮಕ್ಕಳ ಮೇಲಿನ ಲೈಂಗಿಕ ಕಿರುಕುಳ ನಿಗ್ರಹ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಈ ವಿಚಾರ ತಿಳಿಯುತ್ತಿದ್ದಂತೆ ಬಾಲಕಿಯ ತಂದೆ ಪರಾರಿಯಾಗಿದ್ದಾನೆ. ಇನ್ನು ಆರೋಪಿಯ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದಾರೆ.

Tags: