ತುಮಕೂರು/ತಿಪಟೂರು: ತನ್ನ ತಂದೆಯಿಂದಲೇ ಮಗಳ ಮೇಲೆ ಅತ್ಯಾಚಾರ ನಡೆದಿದೆ ಎಂದು ತಾಯಿಯೊಬ್ಬರು ದೂರು ನೀಡಿರುವ ಘಟನೆ ಜಿಲ್ಲೆಯ ತಿಪಟೂರು ನಗರದ ಹಿಪ್ಪೇತೋಪು ಎಂಬಲ್ಲಿ ನಡೆದಿದೆ.
ತನ್ನ ಮಗಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದರು ಎಂದು ಮೇ.6 ರಂದೇ ತಿಪಟೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಪತಿ-ಪತ್ನಿ ಬಡ ಕುಟುಂಬದವರಾಗಿದ್ದು, ಕೂಲಿ ಮಾಡಿ ಜೀವನ ಸಾಗಿಸುತ್ತಿದ್ದರು. ಪತ್ನಿ ಕೂಲಿಗೆಂದು ಹೋದಾಗ ಮನೆಯಲ್ಲಿಯೇ ಉಳಿದಿದ್ದ ತಂದೆ ತನ್ನ ಅಪ್ರಾಪ್ತ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ದೂರಿನಲ್ಲಿ ದಾಖಲಿಸಲಾಗಿದೆ.
ಈ ಸಂಬಂಧ ಅಪ್ರಾಪ್ತ ಬಾಲಕಿಯ ತಂದೆಯ ಮೇಲೆ ಮಕ್ಕಳ ಮೇಲಿನ ಲೈಂಗಿಕ ಕಿರುಕುಳ ನಿಗ್ರಹ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಈ ವಿಚಾರ ತಿಳಿಯುತ್ತಿದ್ದಂತೆ ಬಾಲಕಿಯ ತಂದೆ ಪರಾರಿಯಾಗಿದ್ದಾನೆ. ಇನ್ನು ಆರೋಪಿಯ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದಾರೆ.
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…
ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…
ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…
ಹೇಮಂತ್‌ಕುಮಾರ್ ಎಚ್ಚರ ತಪ್ಪಿದರೆ ಬಿದ್ದು ಕೈಕಾಲು ಮುರಿದುಕೊಳ್ಳುವುದು ಖಚಿತ ಮಂಡ್ಯ: ನಗರದ ಜಯಚಾಮರಾಜ ವೃತ್ತ(ಸಂಜಯ ಸರ್ಕಲ್)ದಿಂದ ಹೊಳಲು ವೃತ್ತ, ಪೇಟೆ…