ಬೆಂಗಳೂರು – ಪಿಎಸ್ಐ ನೇಮಕಾತಿ ಹಗರಣದಲ್ಲಿ ಭಾಗಿಯಾದ ಆರೋಪ ಎದುರಿಸುತಿದ್ದ ಪೊಲೀಸ್ ಸಬ್
ಇನ್ಸ್ಪೆಕ್ಟರ್ ಅವರನ್ನು ಸಿಐಡಿ ಬಂಧಿಸಿದೆ.
ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಸಬ್ಇನ್ಸ್ಪೆಕ್ಟರ್ ಆಗಿದ್ದ ನವೀನ್ ಪ್ರಸಾದ್ ಬಂಧಿತ ಆರೋಪಿ.
ನೇಮಕಾತಿ ಹಗರಣದಲ್ಲಿ ನವೀನ್ ಪ್ರಸಾದ್ ಹಾಗೂ ಅದೇ ಠಾಣೆಯ ಮತ್ತೋರ್ವ ಪಿಎಸ್ಐ ಹರೀಶ್ ನೇಮಕಾತಿ ಅಭ್ಯರ್ಥಿಗಳೊಂದಿಗೆ ಹಣದ ವ್ಯವಹಾರ ನಡೆಸಿದ್ದರು ಎಂದು ಹೇಳಲಾಗಿದೆ. ಈಗಾಗಲೇ ಬಂಧಿತನಾಗಿರುವ ಪಿಎಸ್ಐ ಹರೀಶ್ ಎಂಬವರನ್ನು ಸಿಐಡಿ ವಿಚಾರಣೆ ನಡೆಸಿದ ಸಂದರ್ಭದಲ್ಲಿ ನವೀನ್ ಪ್ರಸಾದ್ ಕೂಡ ಹಗರಣದಲ್ಲಿ ಭಾಗಿಯಾಗಿರುವ ಬಗ್ಗೆ ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ನವೀನ್ ಪ್ರಸಾದ್ಗಾಗಿ ತನಿಖಾಧಿಕಾರಿಗಳು ನಿರಂತರ ಹುಡುಕಾಟ ನಡೆಸುತ್ತಿದ್ದರು. ಆರೋಪಿ ಹರೀಶ್, 14ನೇ ಆರೋಪಿ ಆರ್.ಮಧು ಹಾಗೂ 16ನೇ ಆರೋಪಿ ದಿಲೀಪ್ ಕುಮಾರ್ (ಅಭ್ಯರ್ಥಿಗಳು) ಎಂಬವರಿಗೆ ಪರೀಕ್ಷೆಯಲ್ಲಿ ಸಹಾಯ ಮಾಡುವ ಬಗ್ಗೆ ಭರವಸೆ ನೀಡಿದ್ದರು. ಈ ಸಂಬಂಧ 33ನೇ ಆರೋಪಿಯಾದ ಮೀಸಲು ಪೊಲೀಸ್ ಇನ್ಸ್ಪೆಕ್ಟರ್ ಮಧು ಜತೆ ಒಳಸಂಚು ರೂಪಿಸಿದ್ದ ಹರೀಶ್, ಇಬ್ಬರು ಅಭ್ಯರ್ಥಿಗಳಿಂದಲೂ ತಲಾ 30 ಲಕ್ಷ ರೂ.ಗಳಂತೆ ಒಟ್ಟು 60 ಲಕ್ಷ ರೂ. ಪಡೆದಿದ್ದರು.
ಇದಾದ ಬಳಿಕ 33ನೇ ಆರೋಪಿಯ ಮೂಲಕ 29ನೇ ಆರೋಪಿಯಾದ ನೇಮಕಾತಿ ವಿಭಾಗದ ಪ್ರಥಮ ದರ್ಜೆ ಸಹಾಯಕ ಡಿ.ಹರ್ಷ ಎಂಬವರಿಗೆ ಹಣ ಹಾಗೂ ಕಾರ್ಬನ್ ಒಎಂಆರ್ ಶೀಟ್ಗಳನ್ನು ತಲುಪಿಸಿದ್ದರು. ಎಎಸ್ಎಲ್ ವರದಿಯಲ್ಲೂ 14 ಹಾಗೂ 16ನೇ ಆರೋಪಿಗಳ ಒಎಂಆರ್ ಶೀಟ್ ತಿದ್ದಿರುವುದು ಸಾಬೀತಾಗಿದೆ ಎಂದು ಸಿಐಡಿಯ ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖಿಸಿತ್ತು.
2022ರ ಸೆಪ್ಟೆಂಬರ್ ತಿಂಗಳಲ್ಲಿ ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಬಿಜೆಪಿ ಮುಖಂಡ ರಾಜೇಶ್ ಗೆ ಐದೂವರೆ ತಿಂಗಳ ನಂತರ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು. ಅಕ್ರಮದ ಕೇಂದ್ರ ಬಿಂದುವಾದ ಜ್ಞಾನಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯ ಅಧ್ಯಕ್ಷ ಹಾಗೂ ಅಕ್ರಮದ ಕಿಂಗ್ಪಿನ್ಗಳಲ್ಲಿ ಒಬ್ಬರಾದ ದಿವ್ಯಾ ಹಾಗರಗಿ ಅವರ ಪತಿ ರಾಜೇಶ್ ಹಾಗರಗಿಗೆ ಹಲವು ಷರತ್ತು ವಿಧಿಸಿ ಕೋರ್ಟ್ ಜಾಮೀನು ನೀಡಿತ್ತು.
ನವೆಂಬರ್ ವೇಳೆಗೆ ಮಾಗಡಿಯಲ್ಲಿದ್ದ ಹೆಂಡತಿ ಮಕ್ಕಳನ್ನು ನವೀನ್ ತವರಿಗೆ ಕಳಿಸಿದ್ದ, ಬಳಿಕ ಹಾಸನ ಯುವತಿಯ ಜೊತೆ ಸುತ್ತಾಟ ನಡೆಸುತ್ತಿದ್ದನು. ಇವರಿಬ್ಬರೂ ಬ್ಯಾಡರಹಳ್ಳಿ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿನ ಅಪಾರ್ಟ್ಮೆಂಟ್ ಒಂದರಲ್ಲಿ ವಾಸವಿದ್ದರು. ಯಾರಿಗೂ ತಿಳಿಯದಂತೆ ತೆಲಂಗಾಣ ರಿಜಿಸ್ಟ್ರೇಷನ್ ಕಾರಿನಲ್ಲಿ ಓಡಾಡುತ್ತಿದ್ದರು. ಆ ಯುವತಿಯೇ ಈತನಿಗೆ ಶ್ರೀರಕ್ಷೆಯಾಗಿದ್ದಳು.
ಅಪಾರ್ಟ್ಮೆಂಟ್ ನಲ್ಲಿ ಪ್ರತಿಯೊಂದು ಚಲನ ವಲನಗಳನ್ನು ಗಮನಿಸುತ್ತಿದ್ದಳು. ಈತ ಸಿಸಿ ಕ್ಯಾಮಾರಗಳನ್ನು ಗಮನಿಸಿಕೊಂಡು ಓಡಾಡುತ್ತಿದ್ದ. ಯಾರು ಒಳ ಬರ್ತಾರೆ ಯಾರು ಹೊರ ಹೋಗುತ್ತಾರೆ ಎನ್ನುವ ಎಲ್ಲಾ ಮಾಹಿತಿ ಪಡೆಯುತ್ತಿದ್ದ. ಸಿಸಿಟಿವಿಗಳನ್ನು ಸಹ ಮಾನಿಟರ್ ಮಾಡುತ್ತಿದ್ದ.
ಯಾರಿಗೂ ಗುರುತು ಸಿಗಬಾರದೆಂದು ಈ ಆಸಾಮಿ ಪ್ರತಿದಿನ ತಲೆಗೆ ಕ್ಯಾಪ್ ಧರಿಸಿಕೊಂಡು ಓಡಾಡುತ್ತಿದ್ದ.
ಬೇರೆ ಕಡೆಗೆ ಹೋದರೆ ಪೊಲೀಸರು ಹುಡುಕಾಟ ಮಾಡುತ್ತಾರೆಂದು ತಾನು ವಾಸವಿದ್ದ ಅಪಾರ್ಟ್ಮೆಂಟ್ನಲ್ಲಿಯೇ ನವೀನ್ ಬೀಡುಬಿಟ್ಟಿದ್ದ ಎನ್ನಲಾಗಿದೆ. ಇದೀಗ ಈತನಿಗೆ ಸಹಾಯ ಮಾಡಿದ್ದ ಯುವತಿಯನ್ನು ಕೂಡ ವಿಚಾರಣೆಗೆ ಕರೆಯುವ ಸಾಧ್ಯತೆ ಇದೆ.
- ಮುಖಪುಟ
- ಮೈಸೂರು
- ಜಿಲ್ಲೆಗಳು
- ರಾಜ್ಯ
- ದೇಶ- ವಿದೇಶ
- ರಾಜಕೀಯ
- ಅಪರಾಧ
- ಮಹಿಳೆ
- ಕೃಷಿ
- ವಿಜ್ಞಾನ ತಂತ್ರಜ್ಞಾನ
- ಕ್ರೀಡೆ
- ವಾಣಿಜ್ಯ
- ಚಿತ್ರಸಂತೆ
- ವಿಶೇಷ
- ಆಂದೋಲನ ಪುರವಣಿ
- ಎಡಿಟೋರಿಯಲ್
- ಆಂದೋಲನ 50
- ಜಾಹೀರಾತು
- Cricket
Subscribe to Updates
Get the latest creative news from FooBar about art, design and business.