theft
ಮಡಿಕೇರಿ : ಮೊಬೈಲ್ ಅಂಗಡಿಯ ರೋಲಿಂಗ್ ಶೆಟ್ರಸ್ ಮುರಿದು ೩೨ ಹೊಸ ಮೊಬೈಲ್ ಕಳ್ಳತನ ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಕೊಡಗು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ.
ಅಸ್ಸಾಂ ರಾಜ್ಯ ಮೂಲದ ಚಿಕ್ಕಮಗಳೂರು ಜಿಲ್ಲೆ ತೇಗೂರು ಗಾದ ನಿವಾಸಿಯಾದ ಜೋಹುರ್ ಆಲಿ(೨೮) ಬಂಧಿತ ಆರೋಪಿ. ಕಳೆದ ಸೆ.೨೪ರಂದು ಗೋಣಿಕೊಪ್ಪ ಮುಖ್ಯ ರಸ್ತೆಯಲ್ಲಿರುವ ಫಲೀಲ್ ಎಂಬವರಿಗೆ ಸೇರಿದ ಮೊಬೈಲ್ ಅಂಗಡಿಯ ರೋಲಿಂಗ್ ಶೆಟ್ರಸ್ ಮುರಿದು ವಿವಿಧ ಕಂಪನಿಯ ಅಂದಾಜು ೩೨ ಹೊಸ ಮೊಬೈಲ್ ಫೋನ್‌ಗಳು ಮತ್ತು ೩೦೦೦ ನಗದು ರೂ. ಕಳವು ಮಾಡಿರುವ ಕುರಿತು ದೂರು ಸ್ವೀಕರಿಸಲಾಗಿತ್ತು. ಈ ಸಂಬಂಧ ಗೋಣಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಆರೋಪಿ ಪತ್ತೆಗೆ ವಿಶೇಷ ತನಿಖಾ ತಂಡವನ್ನು ರಚಿಸಿ ತನಿಖೆ ಕೈಗೊಳ್ಳಲಾಗಿತ್ತು. ತನಿಖೆ ನಡೆಸಿದ ತಂಡ ಮಾಹಿತಿ ಸಂಗ್ರಹಿಸಿ ಗುರುವಾರ ಚಿಕ್ಕಮಗಳೂರು ಜಿಲ್ಲೆ ತೇಗೂರು ಗ್ರಾಮದ ನಿವಾಸಿ ಜೋಹುರ್ ಆಲಿ ಎಂಬಾತನನ್ನು ಬಂಧಿಸಿ ೩೨ ಮೊಬೈಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.
ವಿರಾಜಪೇಟೆ ಉಪವಿಭಾಗ ಡಿಎಸ್‌ಪಿ ಮಹೇಶ್‌ಕುಮಾರ್, ಗೋಣಿಕೊಪ್ಪ ಸಿಪಿಐ ಶಿವರಾಜ ಆರ್ ಮುಧೋಳ್, ಪಿಎಸ್‌ಐ ಪ್ರದೀಪ್ ಕುಮಾರ್.ಬಿ.ಕೆ ಮತ್ತು ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಸುತ್ತೂರು : ಕೇವಲ 1 ಎಕರೆ ಪ್ರದೇಶದಲ್ಲಿ ಸುಮಾರು 102 ಮಾದರಿಯ ವಿವಿಧ ತಳಿಯ ಬೆಳೆಗಳನ್ನು ಬೆಳೆಯಬಹುದೆಂಬುದನ್ನು ಸಾಬೀತು ಪಡಿಸಲಾಗಿದೆ.…
ದಕ್ಷಿಣ ಕನ್ನಡ: ದಕ್ಷಿಣ ಭಾರತದ ನಾಗರಾಧನೆಯ ಹೆಸರಾಂತ ಪುಣ್ಯಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣು ದೇವಸ್ಥಾನದ ಆದಾಯ 2025ರ ನವೆಂಬರ್ ಹಾಗೂ…
ಬೆಂಗಳೂರು: ಕಾಂಗ್ರೆಸ್ ಸರ್ಕಾರ ತನ್ನ ವೈಫಲ್ಯಗಳನ್ನು ಮುಚ್ಚಿಹಾಕಲು ಹಾಗೂ ದ್ವೇಷ ರಾಜಕಾರಣ ಮಾಡಲು ಸದನವನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ರಾಜ್ಯ…
ಜಾರ್ಖಂಡ್: ಜಾರ್ಖಂಡ್‌ನ ಸಾರಂಡಾ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ಹಾಗೂ ಮಾವೋವಾದಿಗಳ ನಡುವಿನ ಗುಂಡಿನ ಚಕಮಕಿಯಲ್ಲಿ 10 ಮಂದಿ ನಕ್ಸಲರು…
ಮೈಸೂರು: ಚಾಮುಂಡಿ ಬೆಟ್ಟದಲ್ಲಿ ನಡೆಯುತ್ತಿರುವ ಅವೈಜ್ಞಾನಿಕ ತೋಡಿಕೆ ಮತ್ತು ನಿರ್ಮಾಣ ಕಾರ್ಯಗಳ ವಿರುದ್ಧ ಮೈಸೂರಿನ ಹಲವು ನಾಯಕರು, ಚಿಂತಿತ ನಾಗರಿಕರು…
ಬೆಂಗಳೂರು: ಇಂದು ಕರಾಳ ದಿನ. ಕರಾಳ ರೀತಿಯಲ್ಲಿ ಈ ಅಧಿವೇಶನವನ್ನು ಕಾಂಗ್ರೆಸ್ ನಡೆಸಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ.…