ಬೆಂಗಳೂರು : ಅನುಮಾನಂ ಪೆದ್ದ ರೋಗಂ ಎಂಬ ಮಾತಿನಂತೆ ಒಮ್ಮೆ ಮನುಷ್ಯನಲ್ಲಿ ಅನುಮಾನ ಹುಟ್ಟಿಕೊಂಡರೆ ಅದು ಜೀವನವನ್ನು ನಾಶ ಮಾಡದೆ ಬಿಡದು. ಅದರಂತೆ ಅನೈತಿಕ ಸಂಬಂಧ ಆರೋಪ ಹಿನ್ನೆಲೆ ಪತಿಯಿಂದಲೇ ಪತ್ನಿಯ ಹತ್ಯೆ ನಡೆದಿರುವ ಭಯಾನಕ ಘಟನೆ ಬೆಂಗಳೂರಿನ ಬಸವೇಶ್ವರ ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಚಾಕುವಿನಿಂದ ಇರಿದು ಪತಿ ಅಯ್ಯಪ್ಪ ತನ್ನ ಪತ್ನಿ ನಾಗರತ್ನ(32) ಹತ್ಯೆಗೈದಿದ್ದಾರೆ. ಚಾಕುವಿನಿಂದ ಮನಸೋ ಇಚ್ಚೆ ಹಲ್ಲೆ ನಡೆಸಿ, ಮಹಿಳೆಯ ಗುಪ್ತಾಂಗಕ್ಕೂ ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ.
ಅಪ್ಪ-ಅಮ್ಮ ಇಲ್ಲದೆ ಅನಾಥಾಶ್ರಮದಲ್ಲಿ ಬೆಳೆದ ನಾಗರತ್ನಳನ್ನು 12 ವರ್ಷಗಳ ಹಿಂದೆ ಅಯ್ಯಪ್ಪ ಮದುವೆಯಾಗಿದ್ದ. ದಂಪತಿಗೆ 11 ವರ್ಷದ ಮಗ ಹಾಗೂ 7 ವರ್ಷದ ಮಗಳು ಇದ್ದಾಳೆ. ಅಯ್ಯಪ್ಪ ತನ್ನ ಅಕ್ಕನ ಮನೆಯಲ್ಲಿ ಮಕ್ಕಳನ್ನು ಬಿಟ್ಟಿದ್ದ. ಇತ್ತೀಚೆಗೆ ಹೆಂಡತಿ ಮೇಲೆ ಅನುಮಾನ ಪಡುತ್ತಾ ಇದ್ದ. ಈ ವಿಚಾರಕ್ಕೆ ಮೂರು ದಿನಗಳಿಂದ ದಂಪತಿ ಮಧ್ಯೆ ಗಲಾಟೆ ನಡೀತಾ ಇತ್ತು. ಸದ್ಯ ಪತ್ನಿ ನಾಗರತ್ನ ಕೊಲೆಗೈದ ಪತಿ ಅಯ್ಯಪ್ಪನನ್ನು ಪೊಲೀಸರು ಬಂಧಿಸಿದ್ದಾರೆ. ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಬಸವೇಶ್ವರ ನಗರ ಪೊಲೀಸರು ಘಟನಾ ಸ್ಥಳದ ಪರಿಶೀಲನೆ ನಡೆಸಿದ್ದಾರೆ.