ಬೆಂಗಳೂರು : ಚಾಕುವಿನಿಂದ ಇರಿದು ಯುವಕನನ್ನು ಕೊಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ಕೆಆರ್ ಪುರ ಬಳಿಯ ಟಿನ್ ಫ್ಯಾಕ್ಟರಿ ಬಳಿ ಘಟನೆ ನಡೆದಿದೆ. ರಫೀಕ್ ಅಹಮದ್ (28) ಕೊಲೆಯಾದ ಯುವಕ. ಮಹದೇವಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕೊಲೆ ಮಾಡಿದ ಆರೋಪಿ ಈತನಿಗೆ ಪರಿಚಿತ ಎಂದು ವೈಟ್ಫೀಲ್ಡ್ ಡಿಸಿಪಿ ಡಾ. ಸಂಜೀವ್ ಎಂ. ಪಾಟೀಲ್ ತಿಳಿಸಿದ್ದಾರೆ.