ಮಂಗಳೂರು : ಕಳೆದ ಗುರುವಾರ ಜಿಲ್ಲೆಯ ಹೊರವಲಯದಲ್ಲಿರುವ ಸುರತ್ಕಲ್ ಬಳಿ ಘಾಜೀಲ್ ಎಂಬ ಯುವಕನ ಬರ್ಬರವಾಗಿ ಹತ್ಯೆ ಮಾಡಿದ
ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಳಿಗೆ ಸಹಕರಿಸಿದ ಕಾರು ಮಾಲೀಕನನ್ನು ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕಾರು ಮಾಲೀಕಾ ಅಜಿತ್ ಡಿಸೋಜಾರನ್ನು ಕೃತ್ಯದಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ ವಶಕ್ಕೆ ಪಡೆಯಲಾಗಿದೆ ಎಂದು ಮಂಗಳೂರು ನಗರ
ಪೊಲೀಸ್ ಆಯುಕ್ತ ಶಶಿಕುಮಾರ್ ಹೇಳಿದ್ದಾರೆ.
ಅಜಿತ್ ವೈಟ್ ಬೋರ್ಡ್ ಕಾರ್ ಗಳನ್ನು ಬಾಡಿಗೆ ನೀಡುವ ಕೆಲಸ ಮಾಡಿಕೊಂಡಿದ್ದು, ಇವರ ಬಳಿಯೇ ಹಂತಕರು ಕಾರ್ ಬಾಡಿಗೆಗೆ ಪಡೆದುಕೊಂಡಿದ್ದರು. ಈ ಹಿನ್ನೆಲೆ ಪೊಲೀಸರು ಅಜಿತ್ ಡಿಸೋಜಾರನ್ನು ವಿಚಾರಣೆಗೆ ಒಳಪಡಿಸಿದ್ದಾರೆ.
ಪೊಲೀಸರು ಮೊದಲು ಘಟನಾ ಸ್ಥಳಕ್ಕೆ ಬಂದಿದ್ದ ಕಾರನ್ನು ಗುರುತಿಸಿದ್ದು, ಈ ವೇಳೆ ಹ್ಯುಂಡೈ ಇಯಾನ್ ಕಾರು ಅನ್ನೋದು ಗೊತ್ತಾಗಿತ್ತು. ನಂತರ ಮಂಗಳೂರಲ್ಲಿದ್ದ ಎಲ್ಲಾ ಇಯಾನ್ ಕಾರುಗಳ ಬಗ್ಗೆ ಮಾಹಿತಿ ಪಡೆದಿದ್ದಾರೆ. ಅದರಲ್ಲಿ ಬಿಳಿ ಬಣ್ಣದ ಕಾರುಗಳ ಮಾಹಿತಿ ಕಲೆ ಹಾಕಲು ಪೊಲೀಸರು ಮುಂದಾಗಿದ್ದರು. ಈ ವೇಳೆ ಇಯಾನ್ ಕಾರು ಮಾಲೀಕರನ್ನು ಕರೆಸಿ ವಿಚಾರಣೆ ನಡೆಸಿದ್ದರು.
ಆರೋಪಿಗಳು ಕೊಲೆ ನಡೆದ 500 ಮೀಟರ್ ದೂರದಲ್ಲಿ ಕಾರು ಪಾರ್ಕ್ ಮಾಡಿದ್ದರು. ಪಾರ್ಕ್ ಮಾಡಿ ಕಾರಿನಲ್ಲಿ ಮಂಕಿ ಕ್ಯಾಪ್ ಧರಿಸಿ ಕುಳಿತಿದ್ದರು. ಈ ಎಲ್ಲಾ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಪ್ರಕರಣದ ಮತ್ತೋರ್ವ ಪ್ರಮುಖ ಆರೋಪಿಗಳು ಪರಾರಿಯಾಗಿದ್ದು, ಬಂಧನಕ್ಕೆ ಪೊಲೀಸರು ಶೋಧ ಮುಂದುವೆಸಿದ್ದಾರೆ.
ಗುರುವಾರ ರಾತ್ರಿ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಯುವಕನನ್ನು ಮಾರಕಾಸ್ತ್ರದಿಂದ ಕೊಚ್ಚಿ ಹತ್ಯೆ ಮಾಡಿದ್ದರು. ಈ ಕೃತ್ಯಕ್ಕೆ ಬಳಸಿದ ಕಾರನ್ನು ಪತ್ತೆ ಹಚ್ಚಿರುವ ಪೊಲೀಸರು ಇದೀಗ ಮಾಲೀಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಆರೋಪಿ ಅಜಿತ್ ಎಂಬಾತ ಹತ್ಯೆ ಬಳಿಕ ಆರೋಪಿಗಳನ್ನು ಕಾರ್‌ನಲ್ಲಿ ಕರೆದೊಯ್ದಿದ್ದ. ಕಾರ್ ಚಾಲಕನಾಗಿದ್ದ ಕಾರಣಕ್ಕೆ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.
ಕೊಲೆಗೆ ಆರೋಪಿಗಳನ್ನ ಕರೆತಂದಿದ್ದ ಕಾರು ಚಾಲಕನನ್ನೂ ವಶಕ್ಕೆ ಪಡೆದಿರುವ ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಪೊಲೀಸರು ಮೊದಲು ಘಟನಾ ಸ್ಥಳಕ್ಕೆ ಬಂದಿದ್ದ ಕಾರನ್ನು ಗುರುತಿಸಿದ್ದು, ಈ ವೇಳೆ ಹ್ಯುಂಡೈ ಇಯಾನ್ ಕಾರು ಎನ್ನುವುದು ಗೊತ್ತಾಗಿತ್ತು. ನಂತರ ಮಂಗಳೂರಲ್ಲಿದ್ದ ಎಲ್ಲಾ ಇಯಾನ್ ಕಾರುಗಳ ಬಗ್ಗೆ ಮಾಹಿತಿ ಪಡೆದಿದ್ದಾರೆ. ಅದರಲ್ಲಿ ಬಿಳಿ ಬಣ್ಣದ ಕಾರುಗಳ ಮಾಹಿತಿ ಕಲೆ ಹಾಕಲು ಪೊಲೀಸರು ಮುಂದಾಗಿದ್ದರು. ಈ ವೇಳೆ ಇಯಾನ್ ಕಾರು ಮಾಲೀಕರನ್ನು ಕರೆಸಿ ವಿಚಾರಣೆ ನಡೆಸಿದ್ದರು.
ಈ ಬಗ್ಗೆ ಮಾಹಿತಿ ನೀಡಿರುವ ಪೊಲೀಸ್ ಆಯುಕ್ತ ಶಶಿಕುಮಾರ್ ಅವರು, ಪ್ರಕರಣ ಸಂಬಂಧ ಈ ವರೆಗೂ 51 ಜನರನ್ನು ವಿಚಾರಣೆ ಮಾಡಿದ್ದೇವೆ. 10-12ಕ್ಕೂ ಹೆಚ್ಚು ಕಾರು ವಶಕ್ಕೆ ಪಡೆದು ತನಿಖೆ ಮಾಡಿದ್ದೇವೆ. ಸುರತ್ಕಲ್ ಹೊರವಲಯದಲ್ಲಿ ಅಜಿತ್ ವಶಕ್ಕೆ ಪಡೆದಿದ್ದೇವೆ. ಅಜಿತ್ ಒಂದಷ್ಟು ಮಾಹಿತಿ ಕೊಟ್ಟಿದ್ದಾನೆ. ಅಜಿತ್ ಜೊತೆ ಓರ್ವ ಆರೋಪಿ ಒಡನಾಟ ಹೊಂದಿದ್ದ. ಆರೋಪಿ ಹಲವು ಬಾರಿ ಕಾರು ತೆಗೆದುಕೊಂಡು ಹೋಗುತ್ತಿದ್ದ. ಅದಕ್ಕಾಗಿ 10-12 ಕಾರು ವಶಕ್ಕೆ ಪಡೆದು ಪರಿಶೀಲಿಸಿದ್ದೇವೆ. ಹೀಗಾಗಿ ಪ್ರಕರಣಕ್ಕೆ ಹತ್ತಿರವಾದ ಎಲ್ಲ ಸಾಕ್ಷಿಗಳ ವಿಚಾರಣೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.
ಜುಲೈ 28 ರಂದು ಮಂಗಳೂರು ಬಳಿಯ ಸುರತ್ಕಲ್‍ನಲ್ಲಿ ಕಾರ್‌ನಲ್ಲಿ ಬಂದಿದ್ದ ನಾಲ್ವರು ಮುಸುಕುಧಾರಿ ದುಷ್ಕರ್ಮಿಗಳು ಬಟ್ಟೆ ಅಂಗಡಿಗೆ ನುಗ್ಗಿ ಮಹಮ್ಮದ್ ಫಾಜಿಲ್ (23)ನನ್ನು ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದರು. ಗ್ಯಾಸ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಫಾಸಿಲ್ ಹಲ್ಲೆಯಿಂದ ತೀವ್ರವಾಗಿ ಗಾಯಗೊಂಡಿದ್ದ. ಬಳಿಕ ಚಿಕಿತ್ಸೆ ಫಲಕಾರಿಯಾಗದೇ ಫಾಜಿಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದ.
ಫಾಜಿಲ್ ಕೊಲೆ ಪ್ರಕರಣದ ತನಿಖೆಯನ್ನು ಮಂಗಳೂರು ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ನೇತೃತ್ವದ 5 ತಂಡಗಳು ನಡೆಸುತ್ತಿದ್ದು, ತನಿಖಾ ತಂಡಕ್ಕೆ ಆರೋಪಿಗಳ ಬಗ್ಗೆ ಮಹತ್ವದ ಸುಳಿವು ಲಭಿಸಿದೆ.
ಕ್ರಿಮಿನಲ್ ಹಿನ್ನೆಲೆಯುಳ್ಳ ವ್ಯಕ್ತಿಗಳೇ ಈ ಕೃತ್ಯ ಎಸಗಿರುವ ಮಾಹಿತಿ ಪೊಲೀಸರಿಗೆ ಲಭಿಸಿದೆ. ಈ ಕೃತ್ಯದಲ್ಲಿ6 ಮಂದಿ ಭಾಗಿಯಾಗಿದ್ದು, ಈ ಪ್ರಕರಣ ಬೇಧಿಸಲು 21 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಇವರಲ್ಲಿ 6 ಮಂದಿಯನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ. ಈ ಮೂಲಕ ಇಡೀ ಪ್ರಕರಣವನ್ನು ಬೇಧಿಸುವ ಅಂತಿಮ ಹಂತಕ್ಕೆ ಪೊಲೀಸರು ಬಂದಿದ್ದಾರೆಂದು ಮೂಲಗಳಿಂದ ತಿಳಿದು ಬಂದಿದೆ.
ಸುರತ್ಕಲ್‌ನಲ್ಲಿ ನಡೆದ ಫಾಜಿಲ್ ಕೃತ್ಯವನ್ನು ದ.ಕ. ಜಿಲ್ಲಾ ವ್ಯಾಪ್ತಿಯಲ್ಲೇ ವಾಸ್ತವ್ಯವಿರುವ ದುಷ್ಕರ್ಮಿಗಳು ಎಸಗಿರುವ ಬಗ್ಗೆ ಪೊಲೀಸರು ಒಂದು ಹಂತಕ್ಕೆ ಯಶಸ್ಸು ಕಂಡಿದ್ದಾರೆ. ಆದರೆ ಪ್ರವೀಣ್ ಬೆಳ್ಳಾರೆ ಕೊಲೆ ಪ್ರಕರಣವನ್ನು ಬೇಧಿಸಿ, ಆರೋಪಿಗಳನ್ನು ಬಂಧಿಸುವುದು ತನಿಖಾ ತಂಡಕ್ಕೆ ಕಬ್ಬಿಣದ ಕಡಲೆಯಾಗಿದೆ. ಪ್ರವೀಣ್ ಕೊಲೆಯಲ್ಲಿ ಸವಣೂರಿನ ಝಾಕಿರ್ (29) ಮತ್ತು ಬೆಳ್ಳಾರೆಯ ಶಫೀಕ್ (27) ಎಂಬವರನ್ನು ಬಂಧಿಸಲಾಗಿದ್ದು, ಅವರು ಪೊಲೀಸ್ ಕಸ್ಟಡಿಯಲ್ಲಿದ್ದು ವಿಚಾರಣೆ ನಡೆಸಲಾಗುತ್ತಿದೆ. ಆದರೆ ಕೊಲೆಯಲ್ಲಿ ನೇರ ಭಾಗಿಯಾದ ಆರೋಪಿಗಳು ಕೇರಳದವರಾಗಿರುವ ಸಾಧ್ಯತೆಯಿದ್ದು, ಆರೋಪಿಗಳ ಪತ್ತೆ ಹಚ್ಚುವುದು ಪೊಲೀಸರಿಗೆ ಸವಾಲಾಗಿದೆ. ಆದರೆ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ತನಿಖಾ ತಂಡ ತಮ್ಮ ಸಂಪರ್ಕವನ್ನು ಬಳಸಿಕೊಂಡು ಆರೋಪಿಗಳ ಬಂಧನಕ್ಕೆ ಬಲೆ ಬೀಸಿದೆ.
ಇನ್ನು ಮುಂಜಾಗ್ರತ ಕ್ರಮವಾಗಿ ಸುರತ್ಕಲ್ ಚೊಕ್ಕಬೆಟ್ಟುವಿನಲ್ಲಿರುವ ಅಜಿತ್ ಡಿಸೋಜಾ ನಿವಾಸಕ್ಕೆ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ.
ಫಾಜಿಲ್ ಕೊಲೆ ಪ್ರಕರಣ ಸಂಬಂಧ ಯಾರ ಬಂಧನವೂ ಆಗಿಲ್ಲ. ಯಾರೂ ಸುಳ್ಳು ಸುದ್ದಿಯನ್ನು ಹಬ್ಬಿಸಬೇಡಿ. ಸಂಶಯದ ಹಿನ್ನಲೆಯಲ್ಲಿ ಕೆಲವರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
ಕೇರಳ-ಕರ್ನಾಟಕ ಗಡಿಯಲ್ಲಿ ಭದ್ರತೆ
ಕರವಾಳಿಯಲ್ಲಿ ನಡೆದಿರುವ ಕೊಲೆಗಳಿಗೆ ಕೇರಳ ಲಿಂಕ್ ಹಿನ್ನೆಲೆ ದಕ್ಷಿಣ ಕನ್ನಡ ಗಡಿ ಭಾಗದಲ್ಲಿ ತಪಾಸಣೆ ಹೆಚ್ಚಳ ಮಾಡಲಾಗಿದೆ. ದ.ಕ ಮತ್ತು ಕೇರಳ ಗಡಿಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ತಲಪಾಡಿ, ಉಳ್ಳಾಲ, ವಿಟ್ಲ, ಈಶ್ಚರಮಂಗಲ, ಸುಳ್ಯ, ಪಾಣಾಜೆ ಗಡಿಭಾಗದಲ್ಲಿ ತಪಾಸಣೆ ಹೆಚ್ಚಳ ಮಾಡಲಾಗಿದೆ.
ಪ್ರತಿ ವಾಹನ ಸವಾರರನ್ನು ತಡೆಯುತ್ತಿರುವ ಪೊಲೀಸರು ಪರಿಶೀಲಿನೆ ಗಡಿ ಪ್ರವೇಶಕ್ಕೆ ಅನುಮತಿ ನೀಡಲಾಗುತ್ತಿದೆ. ಗಡಿ ಭಾಗದಲ್ಲಿ ಚೆಕ್ ಪೋಸ್ಟ್ ಸಿಸಿಟಿವಿ ಅಳವಡಿಸಲಾಗಿದೆ.