ಬಳ್ಳಾರಿ: ಜಿಂದಾಲ್ ಉಕ್ಕಿನ ಕಾರ್ಖಾನೆಯ ನೀರಿನ ಹೊಂಡದಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಜಿಲ್ಲೆಯ ಸಂಡೂರು ತಾಲೂಕಿನ ತೋರಣಗಲ್ಲು ಬಳಿ ನಡೆದಿದೆ.
ಬೆಂಗಳೂರು ಮೂಲದ ಸುಶಾಂತ್, ಭುವನ ಹಳ್ಳಿಯ ಜೇಡಪ್ಪ, ಚೆನ್ನೈ ಮೂಲದ ಮಹದೇವನ್ ಮೃತರಾಗಿದ್ದಾರೆ.
ನೀರಿನ ಹೊಂಡದ ಪೈಪ್‌ಲೈನ್‌ಲ್ಲಿ ಸಮಸ್ಯೆ ಕಂಡುಬಂದ ಹಿನ್ನಲೆ ದುರಸ್ತಿಗಾಗಿ ಈ ಮೂವರು ಹೋಗಿದ್ದಾರೆ. ಆದರೆ ನೀರನ್ನು ನಿಲ್ಲಿಸದೇ ಪೈಪ್ ಲೈನ್ ದುರಸ್ತಿ ಮಾಡಲು ಮುಂದಾಗಿದ್ದಾರೆ. ಆದರೆ ನೀರಿನ ರಭಸಕ್ಕೆ ಮಹದೇವನ್ ಹೊಂಡಕ್ಕೆ ಬಿದಿದ್ದಾರೆ. ಮಹದೇವನ್ ಅವರನ್ನು ರಕ್ಷಿಸಲು ಇನ್ನಿಬ್ಬರು ಮುಂದಾಗಿ ಅವರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಈ ಸಂಬಂಧ ತೋರಣಗಲ್ಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು: ನವೆಂಬರ್ 1ರಂದು ಭಾನುವಾರ ಬಂದರೂ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯ ಎಂದು ರಾಜ್ಯ ಸರ್ಕಾರ…
ಗುಂಡ್ಲುಪೇಟೆ: ತಾಲ್ಲೂಕಿನ ವಡಯ್ಯನಪುರ ಹಾಗೂ ಬೊಮ್ಮಲಾಪುರ ಗ್ರಾಮಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಕೊನೆಗೂ ಬೋನಿಗೆ ಬಿದ್ದಿದೆ. ಬೊಮ್ಮಲಾಪುರ…
ಹನೂರು: ತಾಲ್ಲೂಕಿನ ಗುಂಡಾಪುರ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ದನ-ಕುರಿ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ನಡೆಸಿರುವ…
ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…
ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…
ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್ಗಳ ವಿಚಾರ…