ಮೈಸೂರು : ಮೈಸೂರು-ನಂಜನಗೂಡು ರಸ್ತೆಯಲ್ಲಿ ನೀರಿನ ಟ್ಯಾಂಕ್‌ರ್‌ನೊಂದಿಗೆ ಚಲಿಸುತ್ತಿದ್ದ ಟ್ರ್ಯಾಕ್ಟರ್, ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ 21 ವರ್ಷದ ಯುವಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಗರದಲ್ಲಿ ನಡೆದಿದೆ.
ಸೋಮವಾರ ಬೆಳಿಗ್ಗೆ 9.15 ರ ಸುಮಾರಿಗೆ ಅಪಘಾತ ಸಂಭವಿಸಿದೆ. ಟಿ. ನರಸೀಪುರ ತಾಲ್ಲೂಕಿನ ಗರ್ಗೇಶ್ವರಿ ಗ್ರಾಮದ ನಿವಾಸಿ ಪುಟ್ಟಸ್ವಾಮಿ ಅವರ ಪುತ್ರ ನಿತಿನ್ ಎಂಬವರೇ ಅಪಘಾತದಲ್ಲಿ ಮೃತಪಟ್ಟವರು.
ಇದನ್ನೂ ಓದಿ:-ಮೈ-ಬೆಂ ಹೆದ್ದಾರಿಯ ಸರ್ವಿಸ್ ರಸ್ತೆ ಸಮಸ್ಯೆ ಪರಿಶೀಲಿಸಿದ ಶಾಸಕ : ಅಭಿವೃದ್ಧಿ ಕೆಲಸಕ್ಕೆ ಸೂಚನೆ
ನಿತಿನ್ ಅವರು ಕಚೇರಿಗೆ ಹೋಗುವ ಸಲುವಾಗಿ ಸೇಂಟ್ ಮೇರಿ ಶಾಲೆಯ(ಜೆಎಸ್‌ಎಸ್ ಜಂಕ್ಷನ್ ಸಿಗ್ನಲ್) ಬಳಿ ತನ್ನ ಬೈಕನ್ನು ನಿಲ್ಲಿಸಿಕೊಂಡು ಟ್ರಾಫಿಕ್ ಲೈಟ್‌ನಲ್ಲಿ ಹಸಿರು ಸಿಗ್ನಲ್‌ಗಾಗಿ ಕಾಯುತ್ತಿದ್ದಾಗ, ವೇಗವಾಗಿ ಬಂದ ಟ್ರ್ಯಾಕ್ಟರ್ ಬೈಕ್‌ಗೆ ಢಿಕ್ಕಿ ಹೊಡೆದಿದೆ.
ಈ ವೇಳೆ ನಿತಿನ್ ಅವರು ಬೈಕ್‌ನಿಂದ ಕೆಳಗೆ ಬಿದ್ದಿದ್ದಾರೆ. ಇದೇ ವೇಳೆ ಟ್ರ್ಯಾಕ್ಟರ್ ಅವರ ಮೇಲೆ ಹರಿದ ಪರಿಣಾಮ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹೆಲ್ಮೆಟ್ ಧರಿಸಿದ್ದರೂ ನಿತಿನ್ ತಲೆಗೆ ಗಂಭೀರ ಗಾಯಗಳಾಗಿದೆ.
ಅಪಘಾತದ ತೀವ್ರತೆ ಎಷ್ಟಿತ್ತೆದ್ದರೆ, ನೀರಿನ ಟ್ಯಾಂಕ್ ಜೊತೆಗೆ ಟ್ರ್ಯಾಕ್ಟರ್ ರಸ್ತೆ ಬದಿಯ ಕಂದಕಕ್ಕೆ ಉರುಳಿಬಿದ್ದಿದೆ. ಈ ಸಂಬಂದ ಕೆ.ಆರ್ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.





