Mysore
25
broken clouds

Social Media

ಶುಕ್ರವಾರ, 25 ಏಪ್ರಿಲ 2025
Light
Dark

ಪೋಕ್ಸೋ ಪ್ರಕರಣ: ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ವಿರುದ್ಧ ಹೈಕೋರ್ಟ್‌ಗೆ ರಿಟ್‌ ಸಲ್ಲಿಕೆ

ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರು ಅರೋಪಿಯಾಗಿದ್ದು, ಅವರನ್ನು ಕೂಡಲೇ ಬಂಧಿಸಿ ವಿಚಾರಣೆ ನಡೆಸಲು ಬೆಂಗಳೂರು ನಗರ ಪೊಲೀಸ್‌ ಕಮಿಷನರ್‌ ಅವರಿಗೆ ಆದೇಶಿಸಬೇಕು ಎಂದು ಹೈಕೋರ್ಟ್‌ಗೆ ರಿಟ್‌ ಅರ್ಜಿ ಸಲ್ಲಿಕೆಯಾಗಿದೆ.

ಮಾಜಿ ಸಿಎಂ ಬಿಎಸ್‌ವೈ ವಿರುದ್ಧ ಅವರ ಅಣ್ಣ ರಿಟ್‌ ಅರ್ಜಿ ಸಲ್ಲಿಸಿದ್ದಾರೆ. ಈ ಸಂಬಂಧ ಕೋರ್ಟ್‌ನಿಂದ ವಿಚಾರಣೆಯಷ್ಟೆ ನಿಗದಿಯಾಗಬೇಕಿದೆ.

ಪ್ರಕರಣವಿದು?: 53 ವರ್ಷದ ಮಹಿಳೆಯೊಬ್ಬರು ತನ್ನ ಮಗಳ ಮೇಲೆ ಅತ್ಯಾಚಾರ ನಡೆದಿದೆ ನನಗೆ ನ್ಯಾಯ ಕೊಡಿಸಿ ಎಂದು 2024ರ ಮಾರ್ಚ್‌ 14 ರಂದು ಸದಾಶಿವ ನಗರ ಪೊಲೀಸ್‌ ಠಾಣೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ವಿರುದ್ಧ ದೂರು ದಾಖಲಿಸಿದ್ದರು. ಈ ಸಂಬಂಧ 354(A) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಈ ಪ್ರಕರಣದಲ್ಲಿ ದೂರು ನೀಡಿದ ಸಂತ್ರಸ್ತೆಯ ತಾಯಿ ಮರಣ ಹೊಂದಿದ ಬಳಿಕ ಸಂತ್ರಸ್ತೆ ಅಣ್ಣ ಕೋರ್ಟ್‌ಗೆ ರಿಟ್‌ ಅರ್ಜಿ ಸಲ್ಲಿಸಿದ್ದಾರೆ.

ಇನ್ನು ಈ ಸಂಬಂಧ ಸದಾಶಿವ ನಗರದಲ್ಲಿ ಬಿಎಸ್‌ವೈ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಪ್ರಕರಣ ಸಂಬಂಧ ವಿಚಾರಣೆಗೆ ಬರುವಂತೆ ಸೂಚಿಸಿದ್ದರು. ಸಿಐಡಿ ಅಧಿಕಾರಿಗಳು ಬಿಎಸ್‌ವೈ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಬುಧವಾರ (ಜೂನ್‌. 12) ನೋಟಿಸ್‌ ಜಾರಿ ಮಾಡಿದ್ದರು. ಆದರೆ ಬಿಎಸ್‌ವೈ ಅವರು ಜೂನ್‌.17 ರಂದು ಹಾಜರಾಗುವುದಾಗಿ ವಿಚಾರಣೆಯಿಂದ ಹಿಂದೆ ಸರಿದಿದ್ದರು.

Tags: