ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಅರೋಪಿಯಾಗಿದ್ದು, ಅವರನ್ನು ಕೂಡಲೇ ಬಂಧಿಸಿ ವಿಚಾರಣೆ ನಡೆಸಲು ಬೆಂಗಳೂರು ನಗರ ಪೊಲೀಸ್ ಕಮಿಷನರ್ ಅವರಿಗೆ ಆದೇಶಿಸಬೇಕು ಎಂದು ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಕೆಯಾಗಿದೆ.
ಮಾಜಿ ಸಿಎಂ ಬಿಎಸ್‌ವೈ ವಿರುದ್ಧ ಅವರ ಅಣ್ಣ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಈ ಸಂಬಂಧ ಕೋರ್ಟ್‌ನಿಂದ ವಿಚಾರಣೆಯಷ್ಟೆ ನಿಗದಿಯಾಗಬೇಕಿದೆ.
ಪ್ರಕರಣವಿದು?: 53 ವರ್ಷದ ಮಹಿಳೆಯೊಬ್ಬರು ತನ್ನ ಮಗಳ ಮೇಲೆ ಅತ್ಯಾಚಾರ ನಡೆದಿದೆ ನನಗೆ ನ್ಯಾಯ ಕೊಡಿಸಿ ಎಂದು 2024ರ ಮಾರ್ಚ್ 14 ರಂದು ಸದಾಶಿವ ನಗರ ಪೊಲೀಸ್ ಠಾಣೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ದೂರು ದಾಖಲಿಸಿದ್ದರು. ಈ ಸಂಬಂಧ 354(A) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.
ಈ ಪ್ರಕರಣದಲ್ಲಿ ದೂರು ನೀಡಿದ ಸಂತ್ರಸ್ತೆಯ ತಾಯಿ ಮರಣ ಹೊಂದಿದ ಬಳಿಕ ಸಂತ್ರಸ್ತೆ ಅಣ್ಣ ಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ.
ಇನ್ನು ಈ ಸಂಬಂಧ ಸದಾಶಿವ ನಗರದಲ್ಲಿ ಬಿಎಸ್‌ವೈ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಪ್ರಕರಣ ಸಂಬಂಧ ವಿಚಾರಣೆಗೆ ಬರುವಂತೆ ಸೂಚಿಸಿದ್ದರು. ಸಿಐಡಿ ಅಧಿಕಾರಿಗಳು ಬಿಎಸ್‌ವೈ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಬುಧವಾರ (ಜೂನ್. 12) ನೋಟಿಸ್ ಜಾರಿ ಮಾಡಿದ್ದರು. ಆದರೆ ಬಿಎಸ್‌ವೈ ಅವರು ಜೂನ್.17 ರಂದು ಹಾಜರಾಗುವುದಾಗಿ ವಿಚಾರಣೆಯಿಂದ ಹಿಂದೆ ಸರಿದಿದ್ದರು.
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್…
ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ. ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ…
ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…
ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…
ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…
ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…