ಮೈಸೂರು : ಗುಂಡ್ಲುಪೇಟೆ ಮೂಲದ ಯುವಕನನ್ನು ದುಷ್ಕರ್ಮಿಗಳಿಬ್ಬರು ಕತ್ತು ಕೊಯ್ದು ಕೊಲೆಗೆ ಯತ್ನಿಸಿರುವ ಘಟನೆ ನಂಜನಗೂಡು ತಾಲ್ಲೂಕ್ಕಿನ ಹೆಡಿಯಾಲ ಸಮೀಪದ ಈರೇಗೌಡನಹುಂಡಿ ಗ್ರಾಮದ ಬಳಿ ನಡೆದಿದೆ.
ಹೌದು, ದುಷ್ಕರ್ಮಿಗಳಿಂದ ತೀವ್ರವಾಗಿ ಗಾಯಗೊಂಡ ಯುವಕ ತೆವಳಿಕೊಂಡು ನಾಗಣಾಪುರ ಮುಖ್ಯರಸ್ತೆಗೆ ಬಂದಿದ್ದಾನೆ. ಈತನನ್ನು ಗಮನಿಸಿದ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಸ್ಥಳೀಯರು ಹುಲ್ಲಹಳ್ಳಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಸ್ಥಳಕ್ಕೆ ಬಂದ ಪಿಎಸ್ಐ ಮಹೇಶ್ಕುಮಾರ್ ಗಾಯಗೊಂಡ ಯುವಕನನ್ನು ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಿ ಪ್ರಕರಣ ದಾಖಲಿಸಿ ಆರೋಪಿಗಳ ಪತ್ತೆಗಾಗಿ ಮುಂದಾಗಿದ್ದಾರೆ.