Mysore
21
overcast clouds

Social Media

ಗುರುವಾರ, 13 ಆಗಸ್ಟ್ 2026
Light
Dark

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ : ಯುವಕ ಸಾವು

accident (1)

ಮೈಸೂರು : ವಿದ್ಯುತ್ ಕಂಬಕ್ಕೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ವಾಹನ ಚಾಲನೆ ಮಾಡುತ್ತಿದ್ದ ಯುವಕ ಸಾವನ್ನಪ್ಪಿರುವ ಘಟನೆ ನಗರದ ವರ್ತುಲ ರಸ್ತೆಯಲ್ಲಿ ನಡೆದಿದೆ.

ಹೆಬ್ಬಾಳು ನಿವಾಸಿ ಸಿದ್ದಪ್ಪ ಅವರ ಪುತ್ರ ಯೋಗೇಶ್(೨೩) ಎಂಬವರೇ ಅಪಘಾತದಲ್ಲಿ ಮೃತಪಟ್ಟವರು. ಶನಿವಾರ ತಡರಾತ್ರಿ ಕೆಸರೆಯಿಂದ ಮನೆಗೆ ಹೋಗುವಾಗ ಉನ್ನತಿನಗರದ ಬಳಿ ರಿಂಗ್‌ರಸ್ತೆಯ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದಿದೆ.

ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದ ಯೋಗೇಶ್‌ನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಬೆಳಗ್ಗೆ ಸಾವನ್ನಪ್ಪಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಎನ್.ಆರ್.ಸಂಚಾರ ಠಾಣಾ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Tags:
error: Content is protected !!