ಸಿದ್ದರಾಮಯ್ಯಗೆ ಟಕ್ಕರ್ ಕೊಡಲು ಡಿಕೆಶಿಯಿಂದ ಪಾದಯಾತ್ರೆ: ಸಚಿವ ಅಶ್ವತ್ಥ್ ನಾರಾಯಣ

ಬೆಂಗಳೂರು: ರಾಜಕೀಯ ಸ್ವಾರ್ಥಕ್ಕಾಗಿ ಕಾಂಗ್ರೆಸ್‌ ಪಾದಯಾತ್ರೆ ಮಾಡುತ್ತಿದೆ. ಮೇಕೆದಾಟು ಯೋಜನೆ  ವಿಚಾರ ಕೋರ್ಟ್‌ನಲ್ಲಿರುವ ಹಿನ್ನೆಲೆ ಕಾಂಗ್ರೆಸ್ ಮೇಕೆದಾಟು ಯೋಜನೆಯ ಬಗ್ಗೆ ಕಾಳಜಿಯೇ ಇಲ್ಲ. ಇಂತಹ ಸಂದರ್ಭದಲ್ಲಿ ರಾಜಕೀಯ ಮಾಡಬಾರದು. ಸಿದ್ದರಾಮಯ್ಯಗೆ ಟಕ್ಕರ್ ಕೊಡಲು ಡಿ.ಕೆ.ಶಿವಕುಮಾರ್ ಪಾದಯಾತ್ರೆ ಮಾಡುತ್ತಿದ್ದಾರೆ. ಸಮಾಜದಲ್ಲಿ ಡಿಕೆಶಿ ಇಮೇಜ್ ಹೆಚ್ಚಿಸಿಕೊಳ್ಳಲು ಪಾದಯಾತ್ರೆ ಮಾಡುತ್ತಿದ್ದಾರೆ ಅಷ್ಟೇ. ಕಾಂಗ್ರೆಸ್‌ ​ನವರ ಕೈಲಿ ಮೇಕೆದಾಟು ಯೋಜನೆ ಮಾಡುವುದಕ್ಕೆ ಸಾಧ್ಯವಿಲ್ಲ. ನೂರು ಬಾರಿ ಬೇಕಾದರೂ ಸವಾಲು ಹಾಕುತ್ತೇನೆ. ಬಿಜೆಪಿ ಮಾತ್ರ ಮೇಕೆದಾಟು ಯೋಜನೆಯನ್ನು ಮಾಡುತ್ತದೆ ಎಂದು ಬೆಂಗಳೂರಿನಲ್ಲಿ ಸಚಿವ ಡಾ.ಅಶ್ವತ್ಥ್ ನಾರಾಯಣ ಹೇಳಿಕೆ ನೀಡಿದ್ದಾರೆ.

ಡಿ.ಕೆ. ಶಿವಕುಮಾರ್​ಗೆ ಎಲ್ಲಾ ರೀತಿಯ ದೌರ್ಬ್ಯಲ್ಯಗಳಿದ್ದಾವೆ. ಅವರ ಹೇಳಿಕೆ ಅವರ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಸೂಕ್ತವಲ್ಲ. ರಾಮನಗರದಲ್ಲಿ ಕೆಲಸ ಮಾಡಿ ತೋರಿಸಿ. ಕೆಲಸದಿಂದ ಮಾಡಿ ತೋರಿಸಬೇಕು. ನಾನು ಬಹಳ ಕಡಿಮೆ ಸಮಯದಲ್ಲಿ ಮಾತ್ರ ಅಧಿಕಾರದಲ್ಲಿದ್ದೇನೆ. ಇವರು ಬಹಳ ವರ್ಷಗಳಿಂದ ಅಧಿಕಾರದಲ್ಲಿದ್ದಾರೆ. ಆದರೆ 2013 ರಿಂದ 2018 ರವರೆಗೆ ಕಾಂಗ್ರೆಸ್ ಕೈಯ್ಯಲ್ಲಿ ಡಿಪಿಆರ್ ಮಾಡುವುದಕ್ಕೆ ಆಗಿಲ್ಲ. ಈ ಮಾತಿಗೆ ಈಗಲೂ ನಾನು ಬದ್ಧ ಎಂದು ಸಚಿವ ಡಾ.ಅಶ್ವತ್ಥ್ ನಾರಾಯಣ ತಿಳಿಸಿದ್ದಾರೆ.