ಜಿಲ್ಲೆಗಳು

ಸೋಮನಾಥಪುರ ಕೇಶವ ದೇವಾಲಯಕ್ಕೆ ಯುನೆಸ್ಕೋ ತಜ್ಞರ ತಂಡ ಭೇಟಿ

ತಿ.ನರಸೀಪುರ : ತಾಲೂಕಿನ ಸೋಮನಾಥಪುರದಲ್ಲಿರುವ ಕೇಶವ ದೇವಾಲಯವನ್ನು ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರಿಸುವ ಉದ್ದೇಶದಿಂದ ಟಿಯಾಂಗ್ ಕಿಯಾನ್ ಬೂನ್ ನೇತೃತ್ವದ ಯುನೆಸ್ಕೋ ತಜ್ಞರ ತಂಡ ಭೇಟಿ ನೀಡಿ ಪರಿಶೀಲಿಸಿತು.

ವೇಸರ ಶೈಲಿಯಲ್ಲಿರುವ ದೇವಾಲಯವು ಹೊಯ್ಸಳ ಕಾಲದಲ್ಲಿ ನಿರ್ಮಾಣವಾಗಿದ್ದು,ಶಿಲ್ಪಕಲೆಯಲ್ಲಿ ಅದ್ಭುತ ರಚನೆ ಆಗಿದೆ.ನಾಲ್ಕು ಪುರುಷಾರ್ಥಗಳನ್ನು ಬಳಪದ ಕಲ್ಲಿನಲ್ಲಿ ಕೆತ್ತನೆ ಮಾಡಿ ಶಿಲ್ಪಕಲೆಯಲ್ಲಿ ನೈಪುಣ್ಯ ಮೆರೆಯಲಾಗಿದೆ.
ಗರ್ಭಗುಡಿಪ್ರಾಂಗಣ,ಕೆತ್ತನೆ ಕುಸುರಿ ಮತ್ತು ಅದ್ಭುತ ಕದಳಿ ಹಣ್ಣಿನ ಚಿತ್ರಗಳನ್ನು ತಜ್ಞರ ತಂಡ ವೀಕ್ಷಿಸಿದರು.

ಟಿಯಾಂಗ್ ಕಿಯಾನ್ ಬೂನ್ ಅವರಿಗೆ ಇನ್ಫೋಸಿಸ್ ಫೌಂಡೇಶನ್‌ನ ಸುಧಾಮೂರ್ತಿ ಹಾಗೂ ಭಾರತೀಯ ಪ್ರಾಚ್ಯವಸ್ತು ಸಂಗ್ರಹಾಲಯ ಮತ್ತು ರಾಜ್ಯ ಪ್ರಾಚ್ಯ ವಸ್ತು ಅಧಿಕಾರಿಗಳು ದೇವಾಲಯದ ಶಿಲ್ಪಕಲೆ, ಐತಿಹ್ಯಗಳು ಹಾಗೂ ಹೊಯ್ಸಳರ ಕಾಲದ ಶಿಲ್ಪಕಲೆ,ಕುಸುರಿ ಕೆತ್ತನೆ ಗಳ ಬಗ್ಗೆ ವಿವರಣೆ ನೀಡಿದರು.

ದೇವಾಲದಲ್ಲಿರುವ ಬಳಪದ ಕಲ್ಲಿನಲ್ಲಿ ಅತ್ಯಂತ ಸೂಕ್ಷ್ಮ ಕೆತ್ತನೆಯ ಕಲಾ ನೈಪುಣ್ಯತೆ, ಮದನಿಕೆಯರ ಶಿಲ್ಪಗಳು, ನಾಟ್ಯ ಭಂಗಿಗಳು, ಮದನಿಕಾ ವಿಗ್ರಹಗಳು (ಆಕರ್ಷಕವಾದ ಸೊಗಸಾದ ನಾಟ್ಯ ಭಂಗಿಗಳು)
ಶಿಲ್ಪ ಕಲೆ,ನಾಜೂಕಿನ, ಕುಸುರಿ ಕೆಲಸಗಳನ್ನು ಅತ್ಯಂತ ಆಸಕ್ತಿಯಿಂದ ಗಮನಿಸಿದ ಟಿಯಾಂಗ್ ಕಿಯಾನ್ ಬೂನ್ ಮೆಚ್ಚುಗೆ ವ್ಯಕ್ತಪಡಿಸಿದರು.
ಈ ದೇವಾಲಯವನ್ನು ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರಿಸಲು ಶಿಫಾರಸ್ಸು ಮಾಡಲಾಗುವುದು,ಉನ್ನತಮಟ್ಟದ ಸಮಿತಿಯು ನಿರ್ಧಾರ ಕೈಗೊಳ್ಳಲಿದೆ ಎಂದರು

ನಂತರ ಸ್ಥಳೀಯರೊಂದಿಗೆ ಸಭೆ ನಡೆಸಿ ಸಾರ್ವಜನಿಕ ಅಭಿಪ್ರಾಯವನ್ನು ತಿಳಿದುಕೊಳ್ಳಲಾಯಿತು.ಟಿಯಾಂಗ್ ಕಿಯಾನ್ ಬೂನ್ ರವರು, ದೇವಾಲಯವು ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರುವುದರಿಂದ ಆಗುವ ಸಾಧಕ-ಬಾಧಕಗಳ ಬಗ್ಗೆ ಜನರೊಂದಿಗೆ ಸಂವಾದ ನಡೆಸಿದರು.

ಸಭೆಯಲ್ಲಿ ಮಾತನಾಡಿದ ಇನ್ಫೋಸಿಸ್ ಫೌಂಡೇಶನ್‌ನ ಸುಧಾ ಮೂರ್ತಿ ಮಾತನಾಡಿ,ಈ ದೇವಾಲಯ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರ್ಪಡೆಯಾದಲ್ಲಿ ವಿಶ್ವಮಟ್ಟದಲ್ಲಿ ಹೆಸರುವಾಸಿಯಾಗುತ್ತದೆ. ನಾನಾ ದೇಶಗಳಿಂದ ಹಲವು ಪ್ರವಾಸಿಗರು ಇಲ್ಲಿಗೆ ಆಗಮಿಸುವರು. ಹಾಗಾಗಿ ಇಲ್ಲಿನ ಜನರ ವ್ಯಾಪಾರ ವಹಿವಾಟು ಹೆಚ್ಚಾಗಿ ಸ್ಥಳೀಯರು ಆರ್ಥಿಕ ಸಬಲತೆ ಹೊಂದಬಹುದು ಎಂದು ತಿಳಿಸಿದರು,

andolanait

Recent Posts

ಸಿಲಿಂಡರ್‌ ಸ್ಫೋಟ : ಮೈಸೂರಿಗೆ NIA ತಂಡ ಭೇಟಿ, ಹಲವು ಆಯಾಮಗಳಿಂದ ಪರಿಶೀಲನೆ

ಮೈಸೂರು : ದೇಶ-ವಿದೇಶದ ಪ್ರವಾಸಿಗರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಸ್ಥಳವಾದ ಅರಮನೆಯ ಜಯಮಾರ್ತಾಂಡ ಬಳಿ ಸಂಭವಿಸಿದ ಹೀಲಿಯಂ…

33 mins ago

ಓದುಗರ ಪತ್ರ: ಜಾತಿ ಅಳಿಯಲಿ ಜೀವ ಉಳಿಯಲಿ

ಓದುಗರ ಪತ್ರ: ಜಾತಿ ಅಳಿಯಲಿ ಜೀವ ಉಳಿಯಲಿ ಈ ಅಮಾನವೀಯ ಕ್ರೂರ ಕೃತ್ಯಕ್ಕೆ ಇಡೀ ನಾಗರಿಕ ಸಮಾಜವೇ ತಲೆ ತಗ್ಗಿಸುತ್ತಿದೆ…

3 hours ago

ಓದುಗರ ಪತ್ರ: ರಸ್ತೆ ಕಾಮಗಾರಿ ಪೂರ್ಣಗೊಳಿಸಿ

ಚಾಮರಾಜನಗರದ ಗುಂಡ್ಲುಪೇಟೆ ಪಟ್ಟಣದ ವಾರ್ಡ್ ೨೩ ರ ಹೊಸೂರು ಜನನಿಬಿಡ ಪ್ರದೇಶವಾಗಿದ್ದು, ಅಕ್ಕ ಪಕ್ಕದಲ್ಲಿ ಶಾಲೆ ಇದ್ದು, ಪೋಷಕರು ತಮ್ಮ…

3 hours ago

ಓದುಗರ ಪತ್ರ: ಬಿಸಿಎಂ ವಿದ್ಯಾರ್ಥಿನಿಲಯಕ್ಕೆ ಮೂಲ ಸೌಕರ್ಯ ಕಲ್ಪಿಸಿ

ಮೈಸೂರಿನ ಬೋಗಾದಿ ರಸ್ತೆಯಲ್ಲಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯದ (ಬಿಸಿಡಬ್ಲ್ಯೂಡಿ ೨೨೫೦)ಲ್ಲಿ ಶೌಚಾಲಯವು ಅಶುಚಿತ್ವದಿಂದ ಕೂಡಿದೆ. ಶೌಚಾಲಯ ಸ್ವಚ್ಛಗೊಳಿಸುವಂತೆ ವಾರ್ಡನ್…

3 hours ago

ಅರಮನೆ ಮುಂಭಾಗ ಸಿಲಿಂಡರ್ ಸ್ಪೋಟ : ಮೃತ ವ್ಯಕ್ತಿ ಸಲೀಂ ವಿರುದ್ಧ ಎಫ್ಐಆರ್ ; ಗುರುತು ಪತ್ತೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಿನ್ನೆ(ಡಿ.25) ಸಂಜೆ ಅರಮನೆ ಮುಂಭಾಗ ಬಲೂನ್​ಗೆ ಗ್ಯಾಸ್​ ತುಂಬುವಾಗ ಹೀಲಿಯಂ ಸಿಲಿಂಡರ್​ ಸ್ಫೋಟಗೊಂಡು…

3 hours ago

ಓದುಗರ ಪತ್ರ: ಕಸದ ರಾಶಿ ತೆರವುಗೊಳಿಸಿ

ಮೈಸೂರಿನ ಜಯನಗರದ ಇಸ್ಕಾನ್ ಕೃಷ್ಣ ದೇವಾಲಯ ರಸ್ತೆಯ ಪಕ್ಕದಲ್ಲಿ ತ್ಯಾಜ್ಯ ವಸ್ತುಗಳ ರಾಶಿ ಬಿದ್ದಿದೆ. ಕೆಲವರು ರಸ್ತೆಯಲ್ಲೇ ಮೂತ್ರ ವಿಸರ್ಜನೆ…

3 hours ago