ಚಾಮರಾಜನಗರ: ಸೇವೆನೆಗೆ ಯೋಗ್ಯವಲ್ಲದ ಹಾಗೂ ಅವಧಿ ಮೀರಿದ ಸುಮಾರು 1.26 ಲಕ್ಷ ರೂ. ಮೌಲ್ಯದ ಮದ್ಯವನ್ನು ನಾಶಪಡಿಸಲಾಯಿತು.
ಸಮೀಪದ ಬದನಗುಪ್ಪೆ ಕೈಗಾರಿಕಾ ಪ್ರದೇಶದಲ್ಲಿರುವ ಪಾನೀಯ ನಿಗಮದ ಗೋದಾಮಿನ ಅವರಣದಲ್ಲಿ ತಹಸಿಲ್ದಾರ್ ಬಸವರಾಜು ನೇತೃತ್ವದಲ್ಲಿ 375.32 ಲೀಟರ್ ಮದ್ಯವನ್ನು ನೆಲಕ್ಕೆ ಸುರಿಯುವ ಮೂಲಕ ನಾಶಪಡಿಸಲಾಯಿತು. ಇದರಲ್ಲಿ 336. 32 ಲೀಟರ್ ಬಿಯರ್, 9.00 ಲೀಟ್ ವೈನ್ಸ್ ಸೇರಿತ್ತು.
ಅಬಕಾರಿ ಉಪ ಅಧೀಕ್ಷಕ ಎಂ.ಡಿ.ಮೋಹನ್‌ಕುಮಾರ್, ಅಬಕಾರಿ ಇನ್‌ಸ್ಪೆಕ್ಟರ್ ಟಿ.ಪಿ.ಗುರುನಾಥಶೆಟ್ಟಿ, ನಿರೀಕ್ಷಕ ಉಮಾಶಂಕರ್, ನಿಗಮದ ವ್ಯವಸ್ಥಾಪಕ ಆರ್.ಬಿ. ಬಸವರಾಜು, ಗ್ರಾಮ ಆಡಳಿತಾಧಿಕಾರಿ ಸರಸ್ವತಿ ಗೋಂಧಕರ, ಸಿಬ್ಬಂದಿಗಳಾದ ರವಿ, ಸಿದ್ದರಾಜು, ಕುಮಾರ್ ಹಾಜರಿದ್ದರು.
ಮೈಸೂರು: ದೇಶ-ವಿದೇಶಗಳಲ್ಲಿ ಜನ ಸಮೂಹವನ್ನು ಹೊಂದಿರುವ ಅವಧೂತ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದ ನೂತನ ಶಾಖೆಯನ್ನು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ…
ಕುಲಪತಿ ಲೋಕನಾಥ್ ಅಧ್ಯಕ್ಷತೆಯಲ್ಲಿ ನಡೆದ ಸಿಂಡಿಕೇಟ್ ಸಭೆಯಲ್ಲಿ ತೀರ್ಮಾನ ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ೧೦೬ನೇ ಘಟಿಕೋತ್ಸವವನ್ನು ಜ.೫ರಂದುನಡೆಸಲು ತೀರ್ಮಾನಿಸಲಾಗಿದ್ದು, ಘಟಿಕೋತ್ಸವ…
ಲಕ್ಷ್ಮೀಕಾಂತ್ ಕೊಮಾರಪ್ಪ ಶೀತಗಾಳಿಯಿಂದ ಪಾರಾಗಲು ಬೆಚ್ಚನೆಯ ಬಟ್ಟೆ, ಹೊದಿಕೆ, ಬೆಂಕಿಯ ಮೊರೆ ಸೋಮವಾರಪೇಟೆ: ಶೀತಗಾಳಿಯಿಂದ ಚಳಿಯ ಪ್ರಮಾಣ ಹೆಚ್ಚಾಗಿದ್ದು, ಕಳೆದೆರಡು…
ಕೊಳ್ಳೇಗಾಲ: ಶಾಸಕರು ಮೊದಲಿದ್ದ ಡಾಂಬರು ರಸ್ತೆಯನ್ನು ಕಿತ್ತು ಕಾಂಕ್ರೀಟ್ ರಸ್ತೆಯನ್ನಾಗಿ ಅಭಿವೃದ್ಧಿಪಡಿಸಲು ಮುಂದಾದರೆ ಗುತ್ತಿಗೆದಾರ ನಡೆಸಿದ ಕಳಪೆಕಾಮಗಾರಿಯಿಂದ ಜಲ್ಲಿಕಲ್ಲುಗಳು ಮೇಲೆದ್ದು…
ಹನಗೋಡು ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಆತಂಕ; ಜಮೀನಿಗೆ ತೆರಳಲು ಹಿಂದೇಟು ವೀರನಹೊಸಹಳ್ಳಿ: ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಹುಣಸೂರು ಬಫರ್…