Mysore
24
haze

Social Media

ಶನಿವಾರ, 27 ಡಿಸೆಂಬರ್ 2025
Light
Dark

ಪತ್ರಕರ್ತ ಭವನ ನಿರ್ಮಾಣಕ್ಕೆ 10 ಲಕ್ಷ : ಸಂಸದ ಶ್ರೀನಿವಾಸ್ ಪ್ರಸಾದ್ 

ಹನೂರು: ಪಟ್ಟಣದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಭವನ ನಿರ್ಮಾಣಕ್ಕೆ 10 ಲಕ್ಷ ಅನುದಾನ ನೀಡುವುದಾಗಿ ಚಾಮರಾಜನಗರ ಸಂಸದ ವಿ ಶ್ರೀನಿವಾಸ್ ಪ್ರಸಾದ್ ಭರವಸೆ ನೀಡಿದರು.

ಪಟ್ಟಣದ ರೈತ ಸಂಪರ್ಕ ಕೇಂದ್ರ ಸಮೀಪ ನಿರ್ಮಾಣ ಮಾಡುತ್ತಿರುವ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಭವನ ನಿರ್ಮಾಣ ಕಾಮಗಾರಿಗೆ ಅನುದಾನ ನೀಡುವಂತೆ ಚಾಮರಾಜನಗರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ದೇವರಾಜ್ ಕಪ್ಪಸೋಗೆ ನೇತೃತ್ವದ ನಿಯೋಗ ಮಂಗಳವಾರ ಸಂಸದರ ನಿವಾಸದಲ್ಲಿ ಭೇಟಿಯಾಗಿ ಭವನ ನಿರ್ಮಾಣ ಕಾಮಗಾರಿಗೆ ಅನುದಾನ ನೀಡುವಂತೆ ಮನವಿ ಸಲ್ಲಿಸಲಾಯಿತು .

ಮನವಿ ಸ್ವೀಕರಿಸಿ ಮಾತನಾಡಿದ ಸಂಸದ ವಿ. ಶ್ರೀನಿವಾಸ್ ಪ್ರಸಾದ್ ಹನೂರು ಪಟ್ಟಣದಲ್ಲಿ ಪತ್ರಕರ್ತರ ಭವನ ನಿರ್ಮಾಣವಾಗುತ್ತಿರುವುದು ಸಂತಸದ ವಿಚಾರ. ಪತ್ರಕರ್ತರು ಸದಾ ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ಇವರು ಸಮಾಜ ನಾಲ್ಕನೇ ಅಂಗವಾಗಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇಂಥ ಕೆಲಸಗಳಿಗೆ ಅನುದಾನ ನೀಡಬೇಕು. ಭವನ ನಿರ್ಮಾಣಕ್ಕೆ ಎರಡು ಹಂತದಲ್ಲಿ ಹತ್ತು ಲಕ್ಷ ಅನುದಾನ ನೀಡುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಹನೂರು ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಗೌರವ ಅಧ್ಯಕ್ಷ ದೇವರಾಜ್ ನಾಯ್ಡು, ಅಧ್ಯಕ್ಷ ಮಹಾದೇಶ್ ಎಂ, ಕಾರ್ಯದರ್ಶಿ ಬಸವರಾಜು ನಿರ್ದೇಶಕ ಸೋಮಶೇಖರ್ ಇದ್ದರು..

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!