ಜಿಲ್ಲೆಗಳು

15 ಲಕ್ಷ ಪ್ರವಾಸಿಗರು ವಸ್ತು ಪ್ರದರ್ಶನಕ್ಕೆ ಭೇಟಿ – ಶ್ರೀವತ್ಸ

ಮೈಸೂರು :  90 ದಿನಗಳ ದಸರಾ ವಸ್ತು ಪ್ರದರ್ಶನಕ್ಕೆ ಸುಮಾರು 15 ಲಕ್ಷ ಜನ ಬೇಟಿ ನೀಡಿದ್ದು, ದಸರಾ ವಸ್ತು ಪ್ರದರ್ಶನ ಯಶಸ್ವಿಯಾಗಿದೆ ಎಂದು ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀವತ್ಸ ಅವರು ತಿಳಿಸಿದರು.

ಇಂದು ವಸ್ತು ಪ್ರದರ್ಶನ ಆವರಣದಲ್ಲಿ ಹಮ್ಮಿಕೊಂಡಿದ್ದ ವಸ್ತು ಪ್ರದರ್ಶನದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ದಸರಾ ವಸ್ತು ಪ್ರದರ್ಶನ ಈ ಬಾರಿ 90 ದಿನಗಳ ಕಾಲ ಯಶಸ್ವಿಯಾಗಿ ನಡೆದಿದೆ. ದಸರಾ ವಸ್ತು ಪ್ರದರ್ಶನಕ್ಕೆ ಹೆಸರು ವಾಸಿ.

ಆವರಣದಲ್ಲಿ ವ್ಯಾಪಾರ ವಹಿವಾಟು ಉತ್ತಮವಾಗಿ ನಡೆದಿದೆ. ದೇಶದ ಮೂಲೆ ಮೂಲೆಯಿಂದ ಜನರು ವಸ್ತು ಪ್ರದರ್ಶನಕ್ಕೆ ಬೇಟಿ ನೀಡಿದ್ದಾರೆ. ಇಲ್ಲಿ 90 ದಿನಗಳಿಂದ ಮಳಿಗೆ ತೆರೆದಿರುವ ಮಳಿಗೆದಾರರು ಆದಾಯವನ್ನು ಮಾಡಿಕೊಂಡಿದ್ದಾರೆ ಎಂದು ತಿಳಿಸಿದರು.

2023 ರ ದಸರಾ ವಸ್ತು ಪ್ರದರ್ಶನದಲ್ಲಿ ರಾಜ್ಯ ಸರ್ಕಾರ, ಕೇಂದ್ರ ಸರ್ಕಾರ, ನಿಗಮ ಮಂಡಳಿಗಳು ಹಾಗೂ ಜಿಲ್ಲಾ ಪಂಚಾಯತ್ ಗಳಿಂದ ತೆರೆದ ಮಳಿಗೆಗಳಲ್ಲಿ ಬಹುಮಾನಕ್ಕೆ ಆಯ್ಕೆಯಾದ ಮಳಿಗೆಗಳಿಗೆ ಬಹುಮಾನ ವಿತರಣೆ ಮಾಡಲಾಯಿತು.

ಉತ್ತಮವಾಗಿ ಚಿತ್ರ ಬಿಡಿಸಿದ ಮಕ್ಕಳಿಗೆ, ವಿಶೇಷ ವಿಭಾಗದಲ್ಲಿ ಕಲಾಕೃತಿ ನಿರ್ಮಾಣ, ಪೆನ್ಸಿಲ್ ಶೇಡಿಂಗ್ ವಿಭಾಗದಲ್ಲಿ ಬಹುಮಾನ ವಿತರಣೆ,ಮಹಿಳಾ ವಿಭಾಗದ ಸಾಂಪ್ರದಾಯಿಕ ಕಲೆ, ಪ್ರಕೃತಿ ಚಿತ್ರಣ ವಿಭಾಗದಲ್ಲಿ ಉತ್ತಮ ಕಲೆ ಪ್ರದರ್ಶಿಸಿದವರಿಗೆ ಬಹುಮಾನ ವಿತರಣೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾದ ರಾಜೇಶ್ ಗೌಡ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕರಾದ ಬಲವಂತ ರಾವ್ ಪಾಟೀಲ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

andolanait

Recent Posts

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

3 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

10 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

10 hours ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

10 hours ago

ಓದುಗರ ಪತ್ರ: ಯುಪಿಐ ವಹಿವಾಟು ಶುಲ್ಕ; ಹೊರೆಯಾಗದಿರಲಿ

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…

10 hours ago

ಮೋದಿ ಅಧಿಕಾರ ಪರ್ವ ರಜತ ಮಹೋತ್ಸವ: ಏನಿತ್ತು? ಏನಿಲ್ಲ?

ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…

10 hours ago