ಜಿಲ್ಲೆಗಳು

15,16ರಂದು ನಗರದ ಕೆಲ ಭಾಗಗಳಿಗೆ ನೀರು ಸರಬರಾಜು ವ್ಯತ್ಯಯ

ಮೈಸೂರು: ನಗರಕ್ಕೆ ಕಾವೇರಿ ನೀರು ಸರಬರಾಜು ಮಾಡುವ ಹೊಂಗಳ್ಳಿ ೨ ಹಾಗೂ ೩ನೇ ಹಂತದ ಯಂತ್ರಾಗಾರಕ್ಕೆ ವಿದ್ಯುತ್ ಸರಬರಾಜು ಮಾಡುವ ಬೆಳಗೊಳ ೬೬/೧೧ ಕೆ.ವಿ. ಸಬ್‌ಸ್ಟೇಷನ್‌ನಲ್ಲಿ ಕೆಪಿಟಿಸಿಎಲ್ ಇಲಾಖೆಯ ತ್ರೈಮಾಸಿಕ ಕಾರ್ಯನಿರ್ವಹಣೆ ನಿಮಿತ್ತ ವಿದ್ಯುತ್ ಸರಬರಾಜಿನಲ್ಲಿ ನಿಲುಗಡೆಯಾಗುವ ಹಿನ್ನೆಲೆಯಲ್ಲಿ ನ.೧೫ ಮತ್ತು ೧೬ರಂದು ನಗರದ ಕೆಲ ಭಾಗಗಳಿಗೆ ನೀರು ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ವಾರ್ಡ್ ನಂ.೧ ರಿಂದ ೭, ವಾರ್ಡ್ ನಂ.೨೦, ೨೩, ೩೮ ವಾರ್ಡ್ ನಂ. ೪೨ ರಿಂದ ೪೫, ವಾರ್ಡ್ ನಂ.೪೭ ಇದಕ್ಕೆ ಸಂಬಂಧಪಟ್ಟ ಡಿಎಂಎ ಪ್ರದೇಶಗಳಾದ ಹೆಬ್ಬಾಳ, ಕುಂಬಾರಕೊಪ್ಪಲು, ಮಂಚೇಗೌಡನ ಕೊಪ್ಪಲು, ಕೆ.ಜಿ.ಕೊಪ್ಪಲು, ಮೇಟಗಳ್ಳಿ, ಲೋಕನಾಯಕನಗರ, ಬೃಂದಾವನ ಬಡಾವಣೆ, ಒಂಟಿ ಕೊಪ್ಪಲು, ಪಡುವಾರಹಳ್ಳಿ, ವಿನಾಯಕನಗರ, ಮಂಡಿ ಮೊಹಲ್ಲಾ, ಲಷ್ಕರ್ ಮೊಹಲ್ಲಾ, ಶಾರದಾದೇವಿ ನಗರ, ಸರಸ್ವತಿಪುರಂ, ಬೋಗಾದಿ, ವಿಜಯನಗರ ೧,೩ನೇ ಹಂತ, ಗೋಕುಲಂ ೧,೨, ೩ನೇ ಹಂತ ಹಾಗೂ ಹೊರ ವಲಯಗಳಾದ ಆರ್‌ಎಂಪಿ, ಬಿಇಎಂಎಲ್, ಯಾದವಗಿರಿ, ಬನ್ನಿಮಂಟಪ, ಎಬಿಸಿ ಬಡಾವಣೆ, ಈರನಗೆರೆ, ಸಿದ್ದಿಖಿನಗರ, ಶಿವರಾತ್ರೀಶ್ವರ ನಗರ, ತಿಲಕ್ ನಗರ, ಬಡೇಮಕಾನ್, ಹಲೀಂನಗರ.

ದೇವರಾಜ ಮೊಹಲ್ಲಾ ಭಾಗಶಃ, ಎನ್.ಆರ್.ಮೊಹಲ್ಲಾ ಭಾಗಶಃ ಪ್ರದೇಶಗಳು, ನಜರ್‌ಬಾದ್ ಮೊಹಲ್ಲಾ, ವಿದ್ಯಾರಣ್ಯಪುರಂ, ಕೃಷ್ಣಮೂರ್ತಿಪುರಂ, ಜನತಾ ನಗರ, ಕೆಎಚ್‌ಬಿ ಕಾಲೋನಿ, ಹೂಟಗಳ್ಳಿ, ವಿಜಯನಗರ ೩ನೇ ಹಂತ ಇತ್ಯಾದಿ ಪ್ರದೇಶಗಳಲ್ಲಿ ನೀರು ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಹೀಗಾಗಿ ಸಾರ್ವಜನಿಕರು ನೀರು ಬಂದ ವೇಳೆಯಲ್ಲಿ ನೀರನ್ನು ಶೇಖರಿಸಿಕೊಂಡು ನಗರಪಾಲಿಕೆಯೊಂದಿಗೆ ಸಹಕರಿಸಬೇಕು ಎಂದು ನೀರು ಸರಬರಾಜು ಮತ್ತು ಒಳಚರಂಡಿ ಪಶ್ಚಿಮ ವಿಭಾಗದ ಕಾರ್ಯಪಾಲಕ ಇಂಜಿನಿಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

andolanait

Recent Posts

ತಾಲ್ಲೂಕು ಕಚೇರಿಗೆ ಸಂಸದ ಯದುವೀರ್‌ ಒಡೆಯರ್‌ ದಿಢೀರ್‌ ಭೇಟಿ

ಮೈಸೂರು: ಮೈಸೂರು ತಾಲ್ಲೂಕು ಕಚೇರಿಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ದಿಢೀರ್‌ ಭೇಟಿ ನೀಡಿದರು. ಮೈಸೂರಿನ ಮಿನಿ…

54 mins ago

ಕೋಗಿಲು ಬಡಾವಣೆ ಅಕ್ರಮ ಮನೆ ತೆರವು: 26 ಜನರಿಗೆ ಮನೆ ಕೊಡಲು ಅವಕಾಶ ಎಂದ ಸಚಿವ ಜಮೀರ್‌ ಅಹಮ್ಮದ್‌

ಬೆಂಗಳೂರು: ಕೋಗಿಲು ಲೇಔಟ್‌ನಲ್ಲಿ ಅಕ್ರಮ ಮನೆಗಳನ್ನು ತೆರವುಗೊಳಿಸಿದ ಬಳಿಕ ನಿರಾಶ್ರಿತರಿಗೆ ಮನೆ ನೀಡುವ ಸಂಬಂಧ ಪ್ರತಿಕ್ರಿಯೆ ನೀಡಿರುವ ವಸತಿ ಸಚಿವ…

1 hour ago

ಸರಗಳ್ಳತನಕ್ಕೆ ಯತ್ನ: ಸಿಕ್ಕಿಬಿದ್ದ ಇಬ್ಬರು ಪೊಲೀಸರ ವಶಕ್ಕೆ

ವರದಿ: ಮುದ್ದುರವಿ ಮದ್ದೂರು ಮದ್ದೂರು: ಜಿಲ್ಲೆಯ ಮದ್ದೂರು ತಾಲ್ಲೂಕಿನ ದೇಶಹಳ್ಳಿ ಗ್ರಾಮದಲ್ಲಿ ಸರಗಳ್ಳತನಕ್ಕೆ ಯತ್ನಿಸಿದ ಇಬ್ಬರು ಆರೋಪಿಗಳನ್ನು ಸಾರ್ವಜನಿಕರು ಹಿಡಿದು…

2 hours ago

ಮದ್ದೂರು ಪೇಟೆ ಬೀದಿಯಲ್ಲಿ ಅಕ್ರಮ ಫುಟ್‌ಪಾತ್ ತೆರವು ಕಾರ್ಯಾಚರಣೆ

ಮದ್ದೂರು: ಪಟ್ಟಣದ ಪೇಟೆ ಬೀದಿಯಲ್ಲಿ ಇಂದು ಬೆಳ್ಳಂಬೆಳಗ್ಗೆ ಜೆಸಿಬಿ ಸದ್ದು ಮಾಡಿದ್ದು, ಅಕ್ರಮ ಫುಟ್‌ಪಾತ್ ತೆರವು ಕಾರ್ಯಾಚರಣೆ ಮಾಡಲಾಯಿತು. ಇಂದು…

2 hours ago

ಪಾಗಲ್‌ ಪ್ರೇಮಿಯಿಂದ ಕಿರುಕುಳ: ಅಪ್ರಾಪ್ತ ಬಾಲಕಿ ಆತ್ಮಹತ್ಯೆ

ನಂಜನಗೂಡು: ಪಾಗಲ್‌ ಪ್ರೇಮಿಯೋರ್ವ ಪ್ರೀತಿಸುವಂತೆ ಅಪ್ರಾಪ್ತ ಬಾಲಕಿಯ ಬೆನ್ನು ಬಿದ್ದ ಪರಿಣಾಮ ಮನನೊಂದ ಅಪ್ರಾಪ್ತ ಬಾಲಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ…

2 hours ago

ರಾಕಿಂಗ್‌ ಸ್ಟಾರ್‌ ಯಶ್‌ ಹುಟ್ಟುಹಬ್ಬದಂದೇ ಅಭಿಮಾನಿಗಳಿಗೆ ಗಿಫ್ಟ್‌: ಟಾಕ್ಸಿಕ್‌ ಚಿತ್ರದ ಟೀಸರ್‌ ರಿಲೀಸ್‌

ಬೆಂಗಳೂರು: ರಾಕಿಂಗ್‌ ಸ್ಟಾರ್‌ ಯಶ್‌ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಗಿಫ್ಟ್‌ ಸಿಕ್ಕಿದ್ದು, ಬಹುನಿರೀಕ್ಷಿತ ಟಾಕ್ಸಿಕ್‌ ಚಿತ್ರದ ಟೀಸರ್‌ ಇಂದು ರಿಲೀಸ್‌ ಆಗಿದೆ.…

3 hours ago