ಹನೂರು : ತಾಲ್ಲೂಕಿನ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ 33 ದಿನಗಳ ಅವಧಿಯಲ್ಲಿ 2.90 ಕೋಟಿ ರೂ. ಸಂಗ್ರಹವಾಗಿದೆ.
ಮ. ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಬುಧವಾರ ಬೆಳಿಗ್ಗೆ 8 ಗಂಟೆಯಲ್ಲಿ ಸಾಲೂರು ಬೃಹನ್ ಮಠದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿ ಅವರ ಸಮ್ಮುಖದಲ್ಲಿ ಹುಂಡಿಗಳನ್ನು ತೆರೆಯಲಾಯಿತು. ಬಳಿಕ ಸಿಸಿ ಕ್ಯಾಮೆರಾ ಕಣ್ಗಾವಲಿನಲ್ಲಿ ಎಣಿಕೆ ಕಾರ್ಯ ಪ್ರಾರಂಭಿಸಲಾಯಿತು. ಎಣಿಕೆ ಕಾರ್ಯವು ಸಂಜೆ 10.15ರವರೆಗೂ ನಡೆಯಿತು.
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಶಕ್ತಿ ಯೋಜನೆಯ ಉಚಿತ ಪ್ರಯಾಣದ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ. ಜೊತೆಗೆ ಹುಣ್ಣಿಮೆ, ಅಮಾವಾಸ್ಯೆ, ಕ್ರಿಸ್ ಮಸ್ ರಜೆ, ಹೊಸ ವರ್ಷದ ಹಿನ್ನೆಲೆ ಹೆಚ್ಚಿನ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿದ್ದರಿಂದ ಹರಕೆಯ ರೂಪದಲ್ಲಿ ಹಣ ಚಿನ್ನ ಹಾಗೂ ಬೆಳ್ಳಿ ಪದಾರ್ಥಗಳನ್ನು ಹುಂಡಿಗೆ ಹಾಕಿದ್ದಾರೆ. ಹುಂಡಿಗಳ ಎಣಿಕೆಯಲ್ಲಿ ಈ ಬಾರಿ 2,90,00,732 ರೂ. ಸಂಗ್ರಹವಾಗಿದೆ. 102 ಗ್ರಾಂ ಚಿನ್ನ ಮತ್ತು 3 ಕೆಜಿ 355 ಗ್ರಾಂ ಬೆಳ್ಳಿ ಸಂಗ್ರಹವಾಗಿದೆ.
ಇದಲ್ಲದೆ ಯು ಎಸ್ ಎ ದೇಶದ 22 ಡಾಲರ್, ಕೆನಡಾದ 100, ಥಾಯ್ಲ್ಯಾಂಡ್ 2 ಡಾಲರ್ ನೋಟುಗಳು ಮತ್ತು ಚಲಾವಣೆಯಲ್ಲಿ ಇಲ್ಲದ 2000 ಮುಖಬೆಲೆಯ 12 ನೋಟುಗಳು ಹುಂಡಿಯಲ್ಲಿ ದೊರಕಿವೆ.
ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಸರಸ್ವತಿ, ಉಪ ಕಾರ್ಯದರ್ಶಿ ಚಂದ್ರಶೇಖರ್, ಲೆಕ್ಕ ಅಧೀಕ್ಷಕ ನಾಗೇಶ್, ಬ್ಯಾಂಕ್ ಆಫ್ ಬರೋಡ ನೌಕರರು ಹಾಗೂ ಪ್ರಾಧಿಕಾರದ ಸಿಬ್ಬಂದಿ ಎಣಿಕೆ ಕಾರ್ಯದಲ್ಲಿ ಭಾಗವಹಿಸಿದ್ದರು.
ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…
ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…
ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…
ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…
ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…