Mysore
19
overcast clouds
Light
Dark

ಟಿ ನರಸೀಪುರ: ಕಬ್ಬಿನ ಗದ್ದೆಯಲ್ಲಿ ಎರಡು ಚಿರತೆ ಮರಿಗಳು ಪತ್ತೆ

ಮೈಸೂರು ಜಿಲ್ಲೆಯ ಟಿ ನರಸೀಪುರ ತಾಲೂಕಿನ ಕೋಣಗಹಳ್ಳಿ ಗ್ರಾಮದಲ್ಲಿನ ಕಬ್ಬಿನ ಗದ್ದೆಯೊಂದರಲ್ಲಿ ಎರಡು ಚಿರತೆ ಮರಿಗಳು ಪತ್ತೆಯಾಗಿವೆ. ಗ್ರಾಮದ ರೈತರೊಬ್ಬರು ಚಿರತೆ ಮರಿಗಳನ್ನು ನೋಡಿದ ಕೂಡಲೇ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ತಕ್ಷಣ ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಮರಿಗಳನ್ನು ವಶಕ್ಕೆ ಪಡೆದು ರಕ್ಷಿಸಿ ತಾಯಿ ಚಿರತೆಯನ್ನು ಸೆರೆಹಿಡಿಯುವ ಯೋಜನೆ ರೂಪಿಸಿದ್ದಾರೆ. ಚಿರತೆ ಮರಿಗಳು ಇದ್ದ ಜಾಗದಲ್ಲಿಯೇ ಅರಣ್ಯ ಇಲಾಖೆ ಅಧಿಕಾರಿಗಳು ಬೋನ್‌ ಇರಿಸಿದ್ದಾರೆ.

ಇನ್ನು ಕೆಲ ದಿನಗಳ ಹಿಂದೆ ಮೈಸೂರು ತಾಲೂಕಿನ ಆಯರಹಳ್ಳಿ ಗ್ರಾಮದಲ್ಲಿಯೂ ಇದೇ ರೀತಿ ಕಬ್ಬಿನ ಗದ್ದೆಯೊಂದರಲ್ಲಿ ಕಪ್ಪು ಚಿರತೆ ಮರಿ ಸೇರಿ ಒಟ್ಟು ಮೂರು ಚಿರತೆ ಮರಿಗಳು ಪತ್ತೆಯಾಗಿದ್ದವು. ಆ ಸಂದರ್ಭದಲ್ಲಿಯೂ ಸಹ ಇದೇ ರೀತಿ ಮರಿಗಳಿದ್ದ ಜಾಗದಲ್ಲಿ ಬೋನು ಇಟ್ಟಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ತಾಯಿ ಚಿರತೆಯನ್ನು ಯಶಸ್ವಿಯಾಗಿ ಸೆರೆಹಿಡಿದು ಮರಿಗಳ ಬಳಿ ಸೇರಿಸಿತ್ತು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ