ಮೈಸೂರು ಜಿಲ್ಲೆಯ ಟಿ ನರಸೀಪುರ ತಾಲೂಕಿನ ಕೋಣಗಹಳ್ಳಿ ಗ್ರಾಮದಲ್ಲಿನ ಕಬ್ಬಿನ ಗದ್ದೆಯೊಂದರಲ್ಲಿ ಎರಡು ಚಿರತೆ ಮರಿಗಳು ಪತ್ತೆಯಾಗಿವೆ. ಗ್ರಾಮದ ರೈತರೊಬ್ಬರು ಚಿರತೆ ಮರಿಗಳನ್ನು ನೋಡಿದ ಕೂಡಲೇ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.
ತಕ್ಷಣ ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಮರಿಗಳನ್ನು ವಶಕ್ಕೆ ಪಡೆದು ರಕ್ಷಿಸಿ ತಾಯಿ ಚಿರತೆಯನ್ನು ಸೆರೆಹಿಡಿಯುವ ಯೋಜನೆ ರೂಪಿಸಿದ್ದಾರೆ. ಚಿರತೆ ಮರಿಗಳು ಇದ್ದ ಜಾಗದಲ್ಲಿಯೇ ಅರಣ್ಯ ಇಲಾಖೆ ಅಧಿಕಾರಿಗಳು ಬೋನ್ ಇರಿಸಿದ್ದಾರೆ.
ಇನ್ನು ಕೆಲ ದಿನಗಳ ಹಿಂದೆ ಮೈಸೂರು ತಾಲೂಕಿನ ಆಯರಹಳ್ಳಿ ಗ್ರಾಮದಲ್ಲಿಯೂ ಇದೇ ರೀತಿ ಕಬ್ಬಿನ ಗದ್ದೆಯೊಂದರಲ್ಲಿ ಕಪ್ಪು ಚಿರತೆ ಮರಿ ಸೇರಿ ಒಟ್ಟು ಮೂರು ಚಿರತೆ ಮರಿಗಳು ಪತ್ತೆಯಾಗಿದ್ದವು. ಆ ಸಂದರ್ಭದಲ್ಲಿಯೂ ಸಹ ಇದೇ ರೀತಿ ಮರಿಗಳಿದ್ದ ಜಾಗದಲ್ಲಿ ಬೋನು ಇಟ್ಟಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ತಾಯಿ ಚಿರತೆಯನ್ನು ಯಶಸ್ವಿಯಾಗಿ ಸೆರೆಹಿಡಿದು ಮರಿಗಳ ಬಳಿ ಸೇರಿಸಿತ್ತು.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…