ಮಾಜಿ ಪ್ರಧಾನಿ ಹೆಚ್.ದಿಂದೇವೆಗೌಡರ ಉಪಸ್ಥಿತಿ
ಬೆಂಗಳೂರು/ಮೈಸೂರು: ಮುಂದಿನ ವಿಧಾನಸಭೆ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವುದು, ನವೆಂಬರ್ 1ರಿಂದ ಆರಂಭವಾಗಲಿರುವ ಪಂಚರತ್ನ ರಥಯಾತ್ರೆ, ಪಕ್ಷ ಸಂಘಟನೆ ಸೇರಿದಂತೆ ಇತ್ಯಾದಿ ಪ್ರಮುಖ ಅಂಶಗಳ ಅಜೆಂಡಾ ಇಟ್ಟುಕೊಂಡು ಜಾತ್ಯತೀತ ಜನತಾದಳ ಪಕ್ಷವು ಮೈಸೂರಿನಲ್ಲಿ ಎರಡು ದಿನಗಳ (ಅಕ್ಟೋಬರ್ 19 &2 0) ಸಮಾಲೋಚನಾ ಸಭೆಯನ್ನು ಹಮ್ಮಿಕೊಂಡಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು; ಎರಡು ದಿನಗಳ ಈ ಕಾರ್ಯಾಗಾರ ಪಕ್ಷದ ಸಂಘಟನೆ ದೃಷ್ಟಿಯಿಂದ ಅತ್ಯಂತ ಮಹತ್ವದ್ದು. ನಮ್ಮ ಪಕ್ಷದ ನಾಯಕರಿಗೆ ಮುಂದಿನ ಕಾರ್ಯತಂತ್ರದ ಬಗ್ಗೆ ಸ್ಪಷ್ಟ ದಿಕ್ಸೂಚಿ ನೀಡಲಾಗುವುದು ಎಂದಿದ್ದಾರೆ.
ಮಾಜಿ ಪ್ರಧಾನಮಂತ್ರಿಗಳು, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೇಗೌಡರು ಈ ಮಹತ್ವದ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಹಾಗೆಯೇ; ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ, ಕೋರ್ ಕಮಿಟಿ ಅಧ್ಯಕ್ಷ ಬಂಡೆಪ್ಪ ಕಾಷೆಂಪೂರ್, ಸಂಸದೀಯ ಮಂಡಳಿ ಅಧ್ಯಕ್ಷ ಹೆಚ್.ಕೆ.ಕುಮಾರಸ್ವಾಮಿ ಸೇರಿದಂತೆ ಪಕ್ಷದ ಎಲ್ಲ ಶಾಸಕರು, ವಿಧಾನ ಪರಿಷತ್ ಸದಸ್ಯರು, ಮಾಜಿ ಶಾಸಕರು, ಮುಂಬರುವ ವಿಧಾನಸಭೆ ಚುನಾವಣೆಯ ಸಂಭವನೀಯ ಅಭ್ಯರ್ಥಿಗಳು, ಪಕ್ಷದ ಜಿಲ್ಲಾ ಘಟಕಗಳ ಅಧ್ಯಕ್ಷರು ಸೇರಿದಂತೆ ಆಯ್ದ ಪ್ರಮುಖ ನಾಯಕರು ಈ ಸಭೆಯಲ್ಲಿ ಭಾಗಿಯಾಗಲಿದ್ದಾರೆ ಎಂದು ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.
ಪಂಚರತ್ನ ರಥಯಾತ್ರೆ:
ನವೆಂಬರ್ 1ರಿಂದ ಪಂಚರತ್ನ ರಥಯಾತ್ರೆ ಅರಂಭವಾಗುತ್ತಿದ್ದು, ಯಾತ್ರೆಯ ಅಂತಿಮ ಹಂತದ ಸಿದ್ಧತೆಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಲಿದೆ. ಅಲ್ಲದೆ, ರಥಯಾತ್ರೆ ಹೇಗಿರುತ್ತದೆ? ಅದರ ಸ್ವರೂಪವೇನು? ಯಾವ ಮಾರ್ಗದಲ್ಲಿ ಸಾಗುತ್ತದೆ? ಗ್ರಾಮ ವಾಸ್ತವ್ಯ, ಜನ ಸಂಪರ್ಕ ಸಭೆ, ಸಮಾವೇಶ ಇತ್ಯಾದಿ ಪ್ರಮುಖ ಅಂಶಗಳ ಬಗ್ಗೆ ಮಾಹಿತಿ ವಿನಿಮಯ ಮಾಡಿಕೊಳ್ಳಲಾಗುವುದು.
ಈ ಪೈಕಿ ಪಂಚರತ್ನ ಕಾರ್ಯಕ್ರಮಗಳಾದ ಶಿಕ್ಷಣ, ಆರೋಗ್ಯ, ಯುವ ಮತ್ತು ಮಹಿಳಾ ಸಬಲೀಕರಣ, ಕೃಷಿ – ನೀರಾವರಿ, ಉದ್ಯೋಗ, ವಸತಿ ಕಾರ್ಯಕ್ರಮಗಳ ಬಗ್ಗೆ ಜನರಿಗೆ ಮನದಟ್ಟು ಮಾಡಿಕೊಡುವ ಬಗ್ಗೆ ಸಭೆಯಲ್ಲಿ ಸೂಕ್ತ ಮಾರ್ಗದರ್ಶನ ನೀಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದ್ದಾರೆ.
ಅಭ್ಯರ್ಥಿಗಳಿಗೆ ಚುನಾವಣೆ ಪಾಠ:
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಪಕ್ಷ ಅನುಸರಿಸಬಹುದಾದ ಕಾರ್ಯತಂತ್ರದ ಬಗ್ಗೆ ಸಭೆಯಲ್ಲಿ ಪ್ರಮುಖವಾಗಿ ಚರ್ಚೆಯಾಗಲಿದೆ ಎಂದಿರುವ ಮಾಜಿ ಮುಖ್ಯಮಂತ್ರಿಗಳು, ಪ್ರತಿ ಕ್ಷೇತ್ರವೂ ನಮಗೆ ಮುಖ್ಯವಾಗಿದೆ ಎಂದಿದ್ದಾರೆ.
ಬಿಡದಿಯಲ್ಲಿ ನಡೆದ ಸಭೆಯಲ್ಲಿ ಅಭ್ಯರ್ಥಿಗಳಿಗೆ ಕೆಲ ಟಾಸ್ಕುಗಳನ್ನು ಕೊಡಲಾಗಿತ್ತು. ಕೆಲವರು ಆ ಟಾಸ್ಕುಗಳನ್ನು ಅತ್ಯುತ್ತಮವಾಗಿ ಪೂರ್ಣಗೊಳಿಸಿದ್ದಾರೆ. ಕೆಲವರು ಪ್ರಾಮಾಣಿಕವಾಗಿ ಪೂರ್ಣಗೊಳಿಸಲು ಯತ್ನಿಸಿದ್ದಾರೆ. ಈ ಬಗ್ಗೆ ಸಭೆಯಲ್ಲಿ ಕೂಲಂಕಷವಾಗಿ ಗಮನಿಸಿ ಸೂಕ್ತ ಮಾರ್ಗದರ್ಶನ ನೀಡಲಾಗುವುದು ಎಂದು ಅವರು ಹೇಳಿದ್ದಾರೆ.
ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವ ನಿಮಿತ್ತ ಮನೆ ಮನೆಯ ಮೇಲೆ ಕನ್ನಡ ಬಾವುಟ ಹಾರಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮವನ್ನು ಪಕ್ಷವು ರಾಜ್ಯದ ಜನತೆಯ ಜತೆಗೂಡಿ ಮಾಡುವ ಉದೇಶ ಹೊಂದಿದೆ. ಈ ಕಾರ್ಯಕ್ರಮದ ಸ್ವರೂಪ, ಪಕ್ಷದ ಪಾಲ್ಗೊಳ್ಳುವಿಕೆ ಮುಂತಾದ ಅಂಶಗಳ ಬಗ್ಗೆ ಸಭೆಯಲ್ಲಿ ಮಾಹಿತಿ ವಿನಿಮಯ ಮಾಡಿಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.
ಪಕ್ಷವು ಬೇರೆಯದೇ ದಿಕ್ಕಿನಲ್ಲಿ ರಾಷ್ಟ್ರೀಯ ಪಕ್ಷಗಳಿಗೆ ಹೊರತಾದ ಜನಪರ ದಾರಿಯಲ್ಲಿ ಪ್ರಯಾಣ ಮಾಡುತ್ತಿದೆ. ಕಾಂಗ್ರೆಸ್ ಮತ್ತು ಬಿಜೆಪಿ ಆಡಳಿತದಿಂದ ರೋಸಿ ಹೋಗಿರುವ ಜನರಿಗೆ ಜನಪರ ಸರಕಾರ ನೀಡಬೇಕು ಉದ್ದೇಶದಿಂದಲೇ ಪಕ್ಷವು ಕೆಲಸ ಮಾಡುತ್ತಿದೆ. ಆ ನಿಟ್ಟಿನಲ್ಲಿ ಮೈಸೂರಿನ ಸಭೆ ನಿರ್ಣಾಯಕ ಎಂದು ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.
ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…
ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…
ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…
ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…
ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…