ಜಿಲ್ಲೆಗಳು

ಮೇಲುಕೋಟೆಯಲ್ಲಿ ನವಜಾತ ಶಿಶುವಿನ ಶವ ಪತ್ತೆ; ಹೆಣ್ಣೆಂಬ ಕಾರಣಕ್ಕೆ ಬಿಸಾಡಿದ್ರಾ?

ಕಳೆದ ಕೆಲ ದಿನಗಳ ಹಿಂದೆ ಮಂಡ್ಯದಲ್ಲಿ ಭ್ರೂಣಹತ್ಯೆಯ ದೊಡ್ಡ ಜಾಲ ಪತ್ತೆಯಾದ ಬೆನ್ನಲ್ಲೇ ಇದೀಗ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಮೇಲುಕೋಟೆ ಸಮೀಪದ ದಳವಾಯಿ ಕೆರೆಯಲ್ಲಿ ನವಜಾತ ಹೆಣ್ಣು ಶಿಶುವೊಂದರ ಶವ ಪತ್ತೆಯಾಗಿದೆ. ಕರುಳಬಳ್ಳಿಯ ಸಮೇತ ಶವ ದೊರಕಿದೆ.

ಕಳೆದ ಎರಡು ದಿನಗಳ ಹಿಂದೆ ಜನಿಸಿರುವ ಮಗು ಇದಾಗಿದ್ದು, ಹೆಣ್ಣು ಎಂಬ ಕಾರಣಕ್ಕೆ ಕೊಂದು ಬಿಸಾಡಿದ್ದಾರಾ ಎಂಬ ಸಂಶಯ ಶುರುವಾಗಿದೆ. ಶಿಶುವಿನ ಮೃತದೇಹವನ್ನು ಪೇಪರ್‌ನಿಂದ ಸುತ್ತಿರುವ ಕಿಡಿಗೇಡಿಗಳು ಕೆರೆ ಸಮೀಪ ಎಸೆದು ಹೋಗಿದ್ದಾರೆ. ಈ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪಾಂಡವಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕೃತ್ಯ ಎಸಗಿದವರ ಬಂಧನಕ್ಕೆ ಮುಂದಾಗಿದ್ದಾರೆ. ಸದ್ಯ ಮಗುವಿನ ಶವವನ್ನು ತಾಲೂಕು ಆಸ್ಪತ್ರೆ ಶವಾಗಾರಕ್ಕೆ ಕಳುಹಿಸಲಾಗಿದ್ದು, ವೈದ್ಯಕೀಯ ಪರೀಕ್ಷೆಯಿಂದ ಸಾವಿನ ಹಿಂದಿನ ಕಾರಣ ತಿಳಿದುಬರಬೇಕಿದೆ. 

andolana

Recent Posts

ವಿಶೇಷ ಚೇತನ ಮಕ್ಕಳು ಸಮಾಜಕ್ಕೆ ಶಾಪವಲ್ಲ, ವರ; ದೀಪಕ್‌ ಅಭಿಮತ

' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…

27 mins ago

ಸಕ್ಕರೆ ನಗರಿ ಅಂದ ಹೆಚ್ಚಿಸಿದ ದೀಪಾಲಂಕಾರ

ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್‌ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…

40 mins ago

ಮಂಡ್ಯ ಸಮ್ಮೇಳನ | ನಗರ ದೀಪಾಲಂಕಾರಕ್ಕೆ ಸಚಿವ ಚಲುವರಾಯಸ್ವಾಮಿ ಚಾಲನೆ

ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…

51 mins ago

ನಕಲಿ ಚಿನ್ನಾಭರಣ ಅಡವಿಟ್ಟು ಬರೋಬ್ಬರಿ 34 ಲಕ್ಷ ರೂ. ವಂಚನೆ..!

ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…

1 hour ago

ಮುಡಾ ಪ್ರಕರಣ | ಸಿಬಿಐ ತನಿಖೆ ಕೋರಿ ಸಲ್ಲಿಸಿದ್ದ ಅರ್ಜಿ ಜ.15ಕ್ಕೆ ಮುಂದೂಡಿಕೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಜನವರಿ…

2 hours ago

ಸಮ್ಮೇಳನಕ್ಕೆ ಕ್ಷಣಗಣನೆ | ಸಮ್ಮೇಳನ ಸರ್ವಾಧ್ಯಕ್ಷ ಗೊ.ರು ಚನ್ನಬಸಪ್ಪಗೆ ಆತ್ಮೀಯ ಸ್ವಾಗತ

ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…

2 hours ago