ಹೊಸ ವರ್ಷದ ಹರ್ಷ ಮುಕ್ತಾಯವಾದ ಬೆನ್ನಲ್ಲೇ ಹಲವು ಕಡೆಗಳಿಂದ ಸಾವು ನೋವಿನ ಸುದ್ದಿಗಳು ಕೇಳಿ ಬರುತ್ತಿವೆ. ಹೌದು, ಮೋಜು ಮಸ್ತಿಯ ಮೂಡ್‌ನಲ್ಲಿದ್ದ ಕೆಲ ಮಂದಿ ಹೊಸ ವರ್ಷದ ಸಂತಸದ ಬೆನ್ನಲ್ಲೇ ಅಪಘಾತಕ್ಕೀಡಾಗಿದ್ದಾರೆ.
ಹುಣಸೂರಿನಲ್ಲಿ ಕೆಎಸ್‌ಆರ್‌ಟಿಸಿ ಇವಿ ಪ್ಲಸ್ ಹಾಗೂ ಜೀಪ್ ನಡುವೆ ಡಿಕ್ಕಿ ಸಂಭವಿಸಿದ್ದು, ನಾಲ್ವರು ಕಾರ್ಮಿಕರು ಮೃತಪಟ್ಟಿದ್ದಾರೆ. ಈ ಅಪಘಾತದ ಬೆನ್ನಲ್ಲೇ ಹುಣಸೂರು ರಸ್ತೆಯಲ್ಲಿರುವ ಜಲದರ್ಶಿನಿ ಬಳಿ ಮತ್ತೊಂದು ಕೆಎಸ್‌ಆರ್‌ಟಿಸಿ ಬಸ್ ಅಪಘಾತಕ್ಕೀಡಾಗಿದೆ. ಮುಂದೆ ಹೋಗುತ್ತಿದ್ದ ಬೈಕ್‌ಗೆ ಗುದ್ದುವುದನ್ನು ತಪ್ಪಿಸುವುದಕ್ಕಾಗಿ ಕೆಎಸ್‌ಆರ್‌ಟಿಸಿ ಬಸ್ ಚಾಲಕ ಬ್ರೇಕ್ ಹಾಕಿದ್ದಾರೆ. ಇದರಿಂದ ಬೈಕ್ ಸವಾರ ಪಾರಾಗಿದ್ದು, ತಕ್ಷಣ ಬ್ರೇಕ್ ಹಾಕಿದ ಕೆಎಸ್‌ಆರ್‌ಟಿಸಿ ಬಸ್‌ಗೆ ಹಿಂದೆ ಇದ್ದ ಮತ್ತೊಂದು ಕೆಎಸ್‌ಆರ್‌ಟಿಸಿ ಬಂದು ಡಿಕ್ಕಿ ಹೊಡೆದಿದೆ.
ಇನ್ನು ಈ ಡಿಕ್ಕಿಯಿಂದ ಯಾವುದೇ ಸಾವು ನೋವು ಸಂಭವಿಸದೇ ಇದ್ದು, ಕೆಲ ಪ್ರಯಾಣಿಕರು ಗಾಯಗೊಂಡಿದ್ದಾರೆ.