ಚಾಮರಾಜನಗರ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ ಮಕ್ಕಳ ಸ್ನೇಹಿ ಮತ್ತು ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ೨೦ ವರ್ಷ ಕಠಿಣ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಯಳಂದೂರಿನ ಮೊತ್ತ ಕೇರಿ ಬೀದಿಯ ಲೇಟ್ ಸುಬ್ಬನಾಯಕ ಅವರ ಮಗ ಮಹೇಶ್ (೨೮) ಶಿಕ್ಷೆಗೀಡಾದವನು. ವಿವಾಹಿತನಾದ ಈತ ೮ ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಲ್ಲದೆ ಅತ್ಯಾಚಾರ ಎಸಗಿದ್ದನು.
ಈ ಸಂಬAಧ ಯಳಂದೂರು ಠಾಣೆಯ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿ ವಿಚಾರಣೆ ನಡೆಸಿ ದೋಷಾರೋಪಣ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರಾದ ನಿಶಾರಾಣಿ ಅವರು, ಸಾಕ್ಷಾö್ಯಧಾರಾಗಳಿಂದ ಆರೋಪ ಸಾಬೀತಾಗಿದೆ ಎಂದು ಅಭಿಪ್ರಾಯಪಟ್ಟು ಶಿಕ್ಷೆ ವಿಧಿಸಿದ್ದಾರೆ.
ನೊಂದ ಬಾಲಕಿಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ೪ ಲಕ್ಷ ರೂ. ಪರಿಹಾರ ನೀಡಬೇಕೆಂದು ಆದೇಶಿಸಿದ್ದಾರೆ. ಸರ್ಕಾರದ ಪರ ಸರ್ಕಾರಿ ಅಭಿಯೋಜಕ ಜೆ.ಯೋಗೇಶ್ ವಾದಿಸಿದ್ದರು.





