ಮೈಸೂರು: ನಾಡಹಬ್ಬ ದಸರಾದಲ್ಲಿ ಭಾಗವಹಿಸುವ ಆನೆಗಳ ಹಾಗೂ ಅಂಬಾರಿಯಲ್ಲಿ ಪ್ರತಿಷ್ಠಾಪಿಸುವ ಚಾಮುಂಡೇಶ್ವರಿಯ ಪೂಜೆಯನ್ನು ಸತತವಾಗಿ ೨೫ವರ್ಷಗಳಿಂದ ಪೂಜಾ ಕೈಕರ್ಯಗಳನ್ನು ನೆರವೇರಿಸುತ್ತಿರುವ ಅರಮನೆ ಆರ್ಚಕ ಪ್ರಹ್ಲಾದ್ ರಾವ್ ಅವರನ್ನು ಅಭಿನಂದಿಸಲಾಯಿತು.
ನಗರದ ನ್ಯೂ ಸಯ್ಯಾಜಿರಾವ್ ರಸ್ತೆಯಲ್ಲಿರುವ ಪಂಚಮುಖಿ ಆಂಜನೇಯಸ್ವಾಮಿ ದೇವಸ್ಥಾನದ ಆವರಣದಲ್ಲಿ ಮೈಸೂರು ರಕ್ಷಣಾ ವೇದಿಕೆ ಹಾಗೂ ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ಸಹಯೋಗದಲ್ಲಿ ಅಭಿನಂದಿಸಲಾಯಿತು.
ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ನಾರಾಯಣ ಗೌಡ ಮಾತನಾಡಿ, ಕಳೆದ ೨೫ವರ್ಷಗಳಿಂದ ನಾಡಹಬ್ಬ ದಸರಾ ಸಂಧರ್ಭದಲ್ಲಿ ಜಂಬೂಸವಾರಿ ಹೊರಡುವ ಸಂದರ್ಭದಲ್ಲಿ ಅಂಬಾರಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸುವ ಧಾರ್ಮಿಕ ಸೇವೆಯನ್ನು ಸಲ್ಲಿಸಿಕೊಂಡು ಬರುತ್ತಿದ್ದು, ಜಿಲ್ಲಾಡಳಿತ ಪುರೋಹಿತ ಪ್ರಹಲ್ಲಾದ್ ಅವರ ಸೇವೆಯನ್ನ ಪರಿಗಣಿಸಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲು ಮುಂದಾಗಲಿ ಎಂದು ಹೇಳಿದರು.
ಅರಮನೆ ಪುರೋಹಿತರಾದ ಪ್ರಹಲ್ಲಾದ್ ಮಾತನಾಡಿ, ಎನ್.ಬೇಗೂರು ಗ್ರಾಮದಲ್ಲಿ ತಂದೆ ವಾಸುದೇವರಾವ್ ಅವರು ಅರಣ್ಯ ಇಲಾಖೆಯಲ್ಲಿ ವಲಯ ಅರಣ್ಯಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾಗ ಕುಟುಂಬದವರೆಲ್ಲರೂ ಆನೆಯ ಒಡನಾಟದಲ್ಲಿಯೇ ಬೆಳೆದೆವು. ಪ್ರತಿದಿನ ಆನೆಗಳ ಭಾಷೆಗಳನ್ನು ಅರಿತು ಭಾಂದವ್ಯ ಬೆಳೆಯಿತು. ಆನೆಗಳು ಕಂಡರೆ ಸಾಕು ಪ್ರೀತಿ ಮಮತೆ ತೋರಿಸುತ್ತವೆ ಪೂಜಾ ಕೈಂಕರ್ಯ ಸಲ್ಲಿಸುವಾಗ ಮಂತ್ರಗಳನ್ನು ಹೇಳುವ ಸಂದರ್ಭದಲ್ಲಿ ಆನೆಯ ಭಾಷೆಗಳ ಮೂಲಕ ಮಾತನಾಡಿಸಿದಾಗ ಗಜಪಡೆ ಬಹಳ ಶಾಂತಿಯಿಂದ ಭಕ್ತಿಪೂರ್ವಕವಾಗಿ ಭಾಗವಹಿಸುತ್ತವೆ ಎಂದರು.
ಅರ್ಚಕರ ಸಂಘದ ಅಧ್ಯಕ್ಷ ವಿದ್ವಾನ್ ಕೃಷ್ಣಮೂರ್ತಿ, ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ವಿಕ್ರಮ ಅಯ್ಯಂಗಾರ್, ಮೈಸೂರು ರಕ್ಷಣಾ ವೇದಿಕೆಯ ಕಾರ್ಯದರ್ಶಿ ರಾಕೇಶ್ ಭಟ್, ಅಜಯ್ ಶಾಸ್ತ್ರಿ , ಎಸ್.ಎನ್. ರಾಜೇಶ್, ರಾಕೇಶ್ ಕುಂಚಿಟಿಗ, ಸತೀಶ್, ಶರತ್, ಲಿಂಗರಾಜು ಮುಂತಾದವರು ಹಾಜರಿದ್ದರು.
ಮೈಸೂರಿನ ನ್ಯೂ ಸಯ್ಯಾಜಿರಾವ್ ರಸ್ತೆಯಲ್ಲಿರುವ ಪಂಚಮುಖಿ ಆಂಜನೇಯಸ್ವಾಮಿ ದೇವಸ್ಥಾನದ ಆವರಣದಲ್ಲಿ ಮೈಸೂರು ರಕ್ಷಣಾ ವೇದಿಕೆ ಹಾಗೂ ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ಸಹಯೋಗದಲ್ಲಿ ಅಂಬಾರಿಯಲ್ಲಿ ಪ್ರತಿಷ್ಠಾಪಿಸುವ ಚಾಮುಂಡೇಶ್ವರಿಯ ಪೂಜಾ ಕೈಕರ್ಯಗಳನ್ನು ನೆರವೇರಿಸುವ ಪ್ರಹ್ಲಾದ್ ರಾವ್ ಅವರನ್ನು ಅಭಿನಂದಿಸಲಾಯಿತು.
ಬಾರಾಮತಿ: ಮಹಾರಾಷ್ಟ್ರದ ಬಾರಾಮತಿಯಲ್ಲಿ ನಡೆದ ವಿಮಾನ ಅಪಘಾತದಲ್ಲಿ ಡಿಸಿಎಂ ಅಜಿತ್ ಪವಾರ್ ಸಾವನ್ನಪ್ಪಿದ್ದಾರೆ. ಎನ್‌ಸಿಪಿ ಮುಖ್ಯಸ್ಥ ಮತ್ತು ಮಹಾರಾಷ್ಟ್ರದ ಉಪಮುಖ್ಯಮಂತ್ರಿ…
ಬೆಲೆಯಲ್ಲಿ ನಾವು ತಗ್ಗೋದೇ ಇಲ್ಲ ಅಂತ ಚಿನ್ನ ಬೆಳ್ಳಿ! ಬೆಲೆ ಎಷ್ಟಾದರೂ ನಾವು ಬಗ್ಗೋದೇ ಇಲ್ಲ ಅಂತ ಕೆಲ ಗ್ರಾಹಕರು…
ವಿದೇಶಿ ನೆಲದಲ್ಲಿ ದೇಶವನ್ನು ಟೀಕಿಸುವುದಿಲ್ಲ ಎಂಬ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರ ನಿಲುವು ಸ್ವಾಗತಾರ್ಹವಾಗಿದೆ. ಗಣರಾಜ್ಯೋತ್ಸವದ ಸಂದರ್ಭದಲ್ಲೇ ಅವರು…
ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಬಾಂಗ್ಲಾ ದೇಶಕ್ಕೆ ೧೯೭೨ ರಲ್ಲಿ ಪಾಕಿಸ್ತಾನದಿಂದ ಬೇರ್ಪಡಿಸಿ…
ದಕ್ಷಿಣ ಕಾಶಿ ಎಂದೇ ಹೆಸರುವಾಸಿಯಾಗಿರುವ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ಪ್ರತಿನಿತ್ಯ ಸಾವಿರಾರು ಭಕ್ತಾದಿಗಳು ಆಗಮಿಸುತ್ತಾರೆ. ಆದರೆ ಕೆಲವು ಆಟೋ ಚಾಲಕರು…
ಏಷ್ಯಾದ ಪ್ರಪ್ರಥಮ ಎದೆಹಾಲಿನ ಬ್ಯಾಂಕನ್ನು ಆರಂಭಿಸಿದ ಕೀರ್ತಿ ಕರ್ನಾಟಕದಲ್ಲಿ ಹುಟ್ಟಿದ, ಗೋವಾ ಮೂಲದ, ಈಗ ಮುಂಬೈಯಲ್ಲಿ ತನ್ನ ಸಾಮಾಜಿಕ ಕಾರ್ಯಗಳನ್ನು…