ಜಿಲ್ಲೆಗಳು

25 ವರ್ಷಗಳಿಂದ ಅರಮನೆ ಪೂಜಾ ಸೇವೆ : ಅರ್ಚಕ ಪ್ರಹ್ಲಾದ್ ರಾವ್‌ಗೆ ಅಭಿನಂದನೆ

ಮೈಸೂರು: ನಾಡಹಬ್ಬ ದಸರಾದಲ್ಲಿ ಭಾಗವಹಿಸುವ ಆನೆಗಳ ಹಾಗೂ ಅಂಬಾರಿಯಲ್ಲಿ ಪ್ರತಿಷ್ಠಾಪಿಸುವ ಚಾಮುಂಡೇಶ್ವರಿಯ ಪೂಜೆಯನ್ನು ಸತತವಾಗಿ ೨೫ವರ್ಷಗಳಿಂದ ಪೂಜಾ ಕೈಕರ್ಯಗಳನ್ನು ನೆರವೇರಿಸುತ್ತಿರುವ ಅರಮನೆ ಆರ್ಚಕ ಪ್ರಹ್ಲಾದ್ ರಾವ್ ಅವರನ್ನು ಅಭಿನಂದಿಸಲಾಯಿತು.

ನಗರದ ನ್ಯೂ ಸಯ್ಯಾಜಿರಾವ್ ರಸ್ತೆಯಲ್ಲಿರುವ ಪಂಚಮುಖಿ ಆಂಜನೇಯಸ್ವಾಮಿ ದೇವಸ್ಥಾನದ ಆವರಣದಲ್ಲಿ ಮೈಸೂರು ರಕ್ಷಣಾ ವೇದಿಕೆ ಹಾಗೂ ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ಸಹಯೋಗದಲ್ಲಿ ಅಭಿನಂದಿಸಲಾಯಿತು.

ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ನಾರಾಯಣ ಗೌಡ ಮಾತನಾಡಿ, ಕಳೆದ ೨೫ವರ್ಷಗಳಿಂದ ನಾಡಹಬ್ಬ ದಸರಾ ಸಂಧರ್ಭದಲ್ಲಿ ಜಂಬೂಸವಾರಿ ಹೊರಡುವ ಸಂದರ್ಭದಲ್ಲಿ ಅಂಬಾರಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸುವ ಧಾರ್ಮಿಕ ಸೇವೆಯನ್ನು ಸಲ್ಲಿಸಿಕೊಂಡು ಬರುತ್ತಿದ್ದು, ಜಿಲ್ಲಾಡಳಿತ ಪುರೋಹಿತ ಪ್ರಹಲ್ಲಾದ್ ಅವರ ಸೇವೆಯನ್ನ ಪರಿಗಣಿಸಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲು ಮುಂದಾಗಲಿ ಎಂದು ಹೇಳಿದರು.

ಅರಮನೆ ಪುರೋಹಿತರಾದ ಪ್ರಹಲ್ಲಾದ್ ಮಾತನಾಡಿ, ಎನ್.ಬೇಗೂರು ಗ್ರಾಮದಲ್ಲಿ ತಂದೆ ವಾಸುದೇವರಾವ್ ಅವರು ಅರಣ್ಯ ಇಲಾಖೆಯಲ್ಲಿ ವಲಯ ಅರಣ್ಯಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾಗ ಕುಟುಂಬದವರೆಲ್ಲರೂ ಆನೆಯ ಒಡನಾಟದಲ್ಲಿಯೇ ಬೆಳೆದೆವು. ಪ್ರತಿದಿನ ಆನೆಗಳ ಭಾಷೆಗಳನ್ನು ಅರಿತು ಭಾಂದವ್ಯ ಬೆಳೆಯಿತು. ಆನೆಗಳು ಕಂಡರೆ ಸಾಕು ಪ್ರೀತಿ ಮಮತೆ ತೋರಿಸುತ್ತವೆ ಪೂಜಾ ಕೈಂಕರ್ಯ ಸಲ್ಲಿಸುವಾಗ ಮಂತ್ರಗಳನ್ನು ಹೇಳುವ ಸಂದರ್ಭದಲ್ಲಿ ಆನೆಯ ಭಾಷೆಗಳ ಮೂಲಕ ಮಾತನಾಡಿಸಿದಾಗ ಗಜಪಡೆ ಬಹಳ ಶಾಂತಿಯಿಂದ ಭಕ್ತಿಪೂರ್ವಕವಾಗಿ ಭಾಗವಹಿಸುತ್ತವೆ ಎಂದರು.

ಅರ್ಚಕರ ಸಂಘದ ಅಧ್ಯಕ್ಷ ವಿದ್ವಾನ್ ಕೃಷ್ಣಮೂರ್ತಿ, ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ವಿಕ್ರಮ ಅಯ್ಯಂಗಾರ್‌, ಮೈಸೂರು ರಕ್ಷಣಾ ವೇದಿಕೆಯ ಕಾರ್ಯದರ್ಶಿ ರಾಕೇಶ್ ಭಟ್, ಅಜಯ್‌ ಶಾಸ್ತ್ರಿ , ಎಸ್.ಎನ್. ರಾಜೇಶ್, ರಾಕೇಶ್ ಕುಂಚಿಟಿಗ, ಸತೀಶ್, ಶರತ್, ಲಿಂಗರಾಜು ಮುಂತಾದವರು ಹಾಜರಿದ್ದರು.

ಮೈಸೂರಿನ ನ್ಯೂ ಸಯ್ಯಾಜಿರಾವ್ ರಸ್ತೆಯಲ್ಲಿರುವ ಪಂಚಮುಖಿ ಆಂಜನೇಯಸ್ವಾಮಿ ದೇವಸ್ಥಾನದ ಆವರಣದಲ್ಲಿ ಮೈಸೂರು ರಕ್ಷಣಾ ವೇದಿಕೆ ಹಾಗೂ ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ಸಹಯೋಗದಲ್ಲಿ ಅಂಬಾರಿಯಲ್ಲಿ ಪ್ರತಿಷ್ಠಾಪಿಸುವ ಚಾಮುಂಡೇಶ್ವರಿಯ ಪೂಜಾ ಕೈಕರ್ಯಗಳನ್ನು ನೆರವೇರಿಸುವ ಪ್ರಹ್ಲಾದ್ ರಾವ್ ಅವರನ್ನು ಅಭಿನಂದಿಸಲಾಯಿತು.

 

andolana

Recent Posts

ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ ಅಜ್ಜಿ ನಿಧನ

ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…

16 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ನಾಳೆ ಅಧಿಕೃತ ಚಾಲನೆ

ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…

17 hours ago

ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…

18 hours ago

ಅಭಿಜಿತ್ ದೀಪ್ಕೆ ಪೊಲೀಸ್ ವಶಕ್ಕೆ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಅಜಿಂಕ್ಯ ಶಿಂಧೆ ಸಾರಥ್ಯ

ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…

19 hours ago

ಓದುಗರ ಪತ್ರ: ಹೋರಾಟಗಳು ರಚನಾತ್ಮಕವಾಗಿರಲಿ, ಗಂಭೀರವಾಗಿರಲಿ

ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…

22 hours ago

ಓದುಗರ ಪತ್ರ: ಒಂದು ವರ್ಷ ಅಲೆದಾಡಿಸಿದ ನಂತರ… !

ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…

22 hours ago