ಜಿಲ್ಲೆಗಳು

ಗುಡಿಸಲು ನಿರ್ಮಿಸಿ ರೈತರಿಂದ ವಿಭಿನ್ನ ಧರಣಿ

ಮಂಡ್ಯ: ಪ್ರತಿ ಟನ್ ಕಬ್ಬಿಗೆ ೪,೫೦೦ ರೂ. ಹಾಗೂ ಪ್ರತಿ ಲೀಟರ್ ಹಾಲಿಗೆ ೪೦ ರೂ. ನಿಗದಿಗೆ ಒತ್ತಾಯಿಸಿ ಸರ್ ಎಂ.ವಿ.ಪ್ರತಿಮೆ ಎದುರು ರೈತ ಸಂಘದಿಂದ ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಗುರುವಾರ ೨೫ನೇ ದಿನ ಪೂರೈಸಿತು.

ಈ ಹೋರಾಟಕ್ಕೆ ಮದ್ದೂರು ತಾಲ್ಲೂಕು ರೈತ ಸಂಘದ ಜತೆಗೆ ಈಚಗೆರೆ, ಹೊಡಾಘಟ್ಟ, ಉಪ್ಪಾರಕನಹಳ್ಳಿ ಗ್ರಾಮಸ್ಥರು ಬೆಂಬಲ ಸೂಚಿಸಿದರು. ಮಾತ್ರವಲ್ಲದೆ, ಪ್ರತಿದಿನ ಭಾಗವಹಿಸುವವರು ಒಂದರಂತೆ ಪುಟ್ಟ ಗುಡಿಸಲು ನಿರ್ಮಾಣ ಮಾಡುವ ಮೂಲಕ ವಿಭಿನ್ನವಾಗಿ ಹೋರಾಟ ನಡೆಸಿದರು.

ಈ ವೇಳೆ ರಾಜ್ಯ ರೈತ ಸಂಘದ ಸಂಘಟನಾ ಕಾರ್ಯದರ್ಶಿ ಎಸ್.ಸಿ.ಮಧುಚಂದನ್ ಮಾತನಾಡಿ, ನಾವು ಹೆಚ್ಚುವರಿ ಹಣ ಕೊಡುವಂತೆ ಕೇಳುತ್ತಿಲ್ಲ. ನ್ಯಾಯಯುತವಾದ  ಬೆಲೆ ಕೊಡುವಂತೆ ಒತ್ತಾಯಿಸುತ್ತಿದ್ದೇವೆ. ಡಾ.ಸ್ವಾಮಿನಾಥನ್ ಆಯೋಗ ವರದಿ ಪ್ರಕಾರ ಪ್ರತಿ ಟನ್ ಕಬ್ಬಿಗೆ ಐದು ಮುಕ್ಕಾಲು ಸಾವಿರ ರೂ. ಕೊಡಬೇಕಾಗುತ್ತದೆ. ಪ್ರಸ್ತುತ ಪ್ರತಿ ಟನ್ ಕಬ್ಬು ಬೆಳೆಯಲು ಮೂರು ಮುಕ್ಕಾಲು ಸಾವಿರ ವೆಚ್ಚವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿದ್ದರೂ ಸರ್ಕಾರ ಗಮನ ಕೊಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾಧ್ಯಕ್ಷೃ ಎ.ಎಲ್.ಕೆಂಪೂಗೌಡ, ವಿನೋದ್ ಬಾಬು, ಸಿದ್ದೇಗೌಡ, ಶಂಕರ, ವರದಪ್ಪ, ಅಶೋಕ್, ರಾಮಣ್ಣ, ಬೋರೇಗೌಡ, ಲಿಂಗಪ್ಪಾಜಿ, ಕುಮಾರ, ಚಂದ್ರು, ಅಶ್ವಿನಿ, ಅನುಸೂಯಮ್ಮ, ಕೆಂಪಮ್ಮ ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

andolanait

Recent Posts

ಮೈಸೂರಿನಲ್ಲಿ ಮಾಗಿ ಉತ್ಸವ: ಸಂಗೀತದ ಹೊನಲು ಹರಿಸಿದ ವಿಜಯ್‌ ಪ್ರಕಾಶ್‌

ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್‌ ಪ್ರಕಾಶ್‌ ಅವರು…

5 hours ago

ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ

ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…

6 hours ago

ರೈತರಿಗೆ ಮತ್ತೊಂದು ಸಂಕಷ್ಟ: ಈ ಬಾರಿ ಮಾವಿನ ಇಳುವರಿ ಭಾರೀ ಇಳಿಕೆ

ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…

6 hours ago

ಬಂಡೀಪುರದಲ್ಲಿ ಮತ್ತೊಂದು ಕಾಡಾನೆ ಸಾವು

ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಚಿಕ್ಕ…

7 hours ago

ಪ್ರಮುಖ ಆಕರ್ಷಣೀಯ ಕೇಂದ್ರವಾಗಿ ಹೊರಹೊಮ್ಮಿದ ಅಯೋಧ್ಯೆ ರಾಮಮಂದಿರ

ಲಕ್ನೋ: ಆಕರ್ಷಣೀಯ ಪ್ರವಾಸಿತಾಣಗಳ ಪಟ್ಟಿಯಲ್ಲಿ ಅಯೋಧ್ಯೆ ರಾಮಮಂದಿರವು ತಾಜ್‌ಮಹಲನ್ನು ಹಿಂದಿಕ್ಕಿ ನಂಬರ್‌ ಒನ್‌ ಪಟ್ಟ ಪಡೆದಿದೆ. ಈ ಮೂಲಕ ಈಗ…

7 hours ago

ಪ್ರವಾಸಿಗರಿಗೆ ಬಿಗ್‌ ಶಾಕ್: ನಂದಿಗಿರಿಧಾಮದಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್‌

ಚಿಕ್ಕಬಳ್ಳಾಪುರ: ನಂದಿಗಿರಿಧಾಮದಲ್ಲಿ ಹೊ ವರ್ಷಾಚರಣೆಗೆ ಬ್ರೇಕ್‌ ನೀಡಲಾಗಿದ್ದು, ಪ್ರವಾಸಿಗರಿಗೆ ಬಿಗ್‌ ಶಾಕ್‌ ಎದುರಾಗಿದೆ. ಪ್ರಕೃತಿ ಮಡಿಲಿನಲ್ಲಿ ಕುಣಿಸು ಕುಪ್ಪಳಿಸಿ ಹೊಸ…

7 hours ago