ಜಿಲ್ಲೆಗಳು

ಮೈಸೂರಿನ ಹೋಟೆಲ್‌ನಲ್ಲಿ ಅತ್ಯಾಚಾರ; ದೂರು ದಾಖಲಿಸಿದ ಸಂತ್ರಸ್ತೆ

ಮದುವೆಯಾಗುವುದಾಗಿ ನಂಬಿಸಿ 27 ವರ್ಷದ ಯುವತಿಯ ಮೇಲೆ ಹೋಟೆಲ್‌ ಮ್ಯಾನೇಜರ್ ಅತ್ಯಾಚಾರ ನಡೆಸಿ ಮೋಸ ಮಾಡಿರುವ ಪ್ರಕರಣ ಮೈಸೂರು ನಗರದಲ್ಲಿ ದಾಖಲಾಗಿದೆ. ಸಂತ್ರಸ್ತೆ ಹೋಟೆಲ್‌ನಲ್ಲಿ ಕ್ಯಾಷಿಯರ್‌ ಆಗಿ ಕೆಲಸ ನಿರ್ವಹಿಸುತ್ತಿದ್ದು, ಆರೋಪಿ ಆಕೆಯ ಜತೆ ಸಲುಗೆ ಬೆಳೆಸಿ ಪ್ರೀತಿಯ ನಾಟಕವಾಡಿ ಬಳಿಕ ದೈಹಿಕ ಸಂಪರ್ಕ ಬೆಳೆಸಿದ್ದ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ಹಿಂದೆಯೊಮ್ಮೆ ಸಂತ್ರಸ್ತೆ ಗರ್ಭವತಿಯಾದಾಗ ಬಲವಂತವಾಗಿ ಮಾತ್ರೆ ನೀಡಿ ಗರ್ಭಪಾತ ಮಾಡಿಸಿದ್ದ ಆರೋಪಿ ಮದುವೆಯಾಗುವುದಾಗಿ ನಂಬಿಸಿ ಮತ್ತೊಮ್ಮೆ ಆಕೆಯನ್ನು ಗರ್ಭಿಣಿಯನ್ನಾಗಿ ಮಾಡಿದ್ದಾನೆ. ಈ ಸಂದರ್ಭದಲ್ಲಿ ಆಕೆಯ ಬೆತ್ತಲೆ ಫೋಟೊ ಹಾಗೂ ವಿಡಿಯೊಗಳನ್ನೂ ಸಹ ಆರೋಪಿ ಮೊಬೈಲ್‌ನಲ್ಲಿ ಸೆರೆ ಹಿಡಿದುಕೊಂಡಿದ್ದಾನೆ.

ಸದ್ಯ ಗರ್ಭವತಿಯಾಗಿರುವ ಸಂತ್ರಸ್ತೆ ತನ್ನನ್ನು ಮದುವೆಯಾಗುವಂತೆ ಕೇಳಿದ್ದು, ಆರೋಪಿ ಜಾತಿನಿಂದನೆ ಮಾಡಿ ನಿರಾಕರಿಸಿದ್ದಾನೆ. ಜತೆಗೆ ಆಕೆಯ ಫೋಟೊ ಹಾಗೂ ವಿಡಿಯೊಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್‌ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಆರೋಪಿಯ ಬೆಂಬಲಕ್ಕೆ ಆತನ ತಂದೆ ನಿಂತಿದ್ದು ಸಂತ್ರಸ್ತೆಯನ್ನು ನಿಂದಿಸಿ ಹೊಟೇಲ್‌ನಿಂದ ತಳ್ಳಿದ್ದಾರೆ. ಇಷ್ಟೆಲ್ಲಾ ಆರೋಪವನ್ನು ಮಾಡಿರುವ ಸಂತ್ರಸ್ತೆ ತನಗೆ ವಂಚನೆ ಮಾಡಿದ ಆರೋಪಿ ಹಾಗೂ ಬೆಂಬಲ ನೀಡಿದ ಆತನ ತಂದೆಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಎನ್‌ ಆರ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

andolana

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

12 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

15 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

15 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

16 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

16 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

16 hours ago