ನಂಜನಗೂಡು ಪಟ್ಟಣದ ಹೆಜ್ಜಿಗೆ ಸೇತುವೆ ಬಳಿ ಕಪಿಲಾ ನದಿಯ ಸುಳಿಗೆ ಸಿಲುಕಿ ಮೂವರು ಶಬರಿಮಲೆ ಯಾತ್ರಿಕರು ಮೃತಪಟ್ಟಿರುವ ಘಟನೆ ಇಂದು ( ಜನವರಿ 19 ) ಬೆಳಗ್ಗೆ ನಡೆದಿದೆ.
ತುಮಕೂರು ಮೂಲದ ಗವಿರಂಗ ( 19 ) ರಾಕೇಶ್ ( 19 ) ಹಾಗೂ ಅಪ್ಪು ( 16 ) ಮೃತ ದುರ್ದೈವಿಗಳಾಗಿದ್ದಾರೆ. ಶಬರಿಮಲೆ ದರ್ಶನ ಮುಗಿಸಿಕೊಂಡು ತಡರಾತ್ರಿ ನಂಜನಗೂಡು ನಂಜುಂಡೇಶ್ವರ ಸ್ವಾಮಿಯ ದರ್ಶನ ಮಾಡುವ ಸಲುವಾಗಿ ಕ್ಷೇತ್ರಕ್ಕೆ ಬಂದ ಐವರು ಭಕ್ತಾದಿಗಳು ಬೆಳಗ್ಗೆ ಸ್ನಾನ ಮಾಡಲು ನದಿಗೆ ಇಳಿದಿದ್ದಾರೆ.
ಈ ಐವರೂ ಸಹ ನದಿಯಲ್ಲಿದ್ದ ಸುಳಿಗೆ ಸಿಲುಕಿದ್ದು, ಈ ಪೈಕಿ ಮೂವರು ಸಾವನ್ನಪ್ಪಿದ್ದರೆ, ಇನ್ನುಳಿದ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ನಂಜನಗೂಡು ಪಟ್ಟಣದ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಸ್ಥಳಕ್ಕಾಗಮಿಸಿ ಮೃತರ ದೇಹಗಳನ್ನು ಹೊರತೆಗೆದಿದ್ದಾರೆ. ಈ ಕುರಿತು ನಂಜನಗೂಡು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಕೆಎಸ್‌ಆರ್‌ಟಿಸಿ ಸೌಲಭ್ಯ ಕಲ್ಪಿಸಲು ತಾಲೂಕು ಕೇಂದ್ರದಲ್ಲಿ…
ಶ್ರೀರಂಗಪಟ್ಟಣ: ವಿದ್ಯುತ್ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್‌ಮ್ಯಾನ್ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಹೆಬ್ಬಾಡಿ ಗ್ರಾಮದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಹಲವೆಡೆ ಇಂದು ಧಾರಾಕಾರ ಮಳೆಯಾಗಿದ್ದು, ಭಾರೀ ಅವಾಂತರ ಸೃಷ್ಟಿ ಮಾಡಿದೆ. ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವೆಡೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಟಳ್ಳಿ, ಕೌದಳ್ಳಿ, ಶೆಟ್ಟಳ್ಳಿ, ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ…
ಮೈಸೂರು: ಅರಮನೆಗಳ ನಗರಿ ಮೈಸೂರಿನಲ್ಲಿ ಅವೈಜ್ಞಾನಿಕವಾಗಿ ಟ್ರಾಫಿಕ್ ಸಿಗ್ನಲ್ ಅಳವಡಿಸಲಾಗಿದೆ ಎಂದು ಸಾರ್ವಜನಿಕರು ಕಿಡಿಕಾರುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಮಹದೇವಪ್ಪ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾಗಿರುವ ಹಿನ್ನೆಲೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಕೇಂದ್ರ ಗೃಹ ಸಚಿವ…