ಜಿಲ್ಲೆಗಳು

ನಂಜನಗೂಡು: ಕಪಿಲಾ ನದಿಯ ಸುಳಿಗೆ ಸಿಲುಕಿ ಮೂವರು ಅಯ್ಯಪ್ಪ ಭಕ್ತರ ಸಾವು

ನಂಜನಗೂಡು ಪಟ್ಟಣದ ಹೆಜ್ಜಿಗೆ ಸೇತುವೆ ಬಳಿ ಕಪಿಲಾ ನದಿಯ ಸುಳಿಗೆ ಸಿಲುಕಿ ಮೂವರು ಶಬರಿಮಲೆ ಯಾತ್ರಿಕರು ಮೃತಪಟ್ಟಿರುವ ಘಟನೆ ಇಂದು ( ಜನವರಿ 19 ) ಬೆಳಗ್ಗೆ ನಡೆದಿದೆ.

ತುಮಕೂರು ಮೂಲದ ಗವಿರಂಗ ( 19 ) ರಾಕೇಶ್‌ ( 19 ) ಹಾಗೂ ಅಪ್ಪು ( 16 ) ಮೃತ ದುರ್ದೈವಿಗಳಾಗಿದ್ದಾರೆ. ಶಬರಿಮಲೆ ದರ್ಶನ ಮುಗಿಸಿಕೊಂಡು ತಡರಾತ್ರಿ ನಂಜನಗೂಡು ನಂಜುಂಡೇಶ್ವರ ಸ್ವಾಮಿಯ ದರ್ಶನ ಮಾಡುವ ಸಲುವಾಗಿ ಕ್ಷೇತ್ರಕ್ಕೆ ಬಂದ ಐವರು ಭಕ್ತಾದಿಗಳು ಬೆಳಗ್ಗೆ ಸ್ನಾನ ಮಾಡಲು ನದಿಗೆ ಇಳಿದಿದ್ದಾರೆ.

ಈ ಐವರೂ ಸಹ ನದಿಯಲ್ಲಿದ್ದ ಸುಳಿಗೆ ಸಿಲುಕಿದ್ದು, ಈ ಪೈಕಿ ಮೂವರು ಸಾವನ್ನಪ್ಪಿದ್ದರೆ, ಇನ್ನುಳಿದ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ನಂಜನಗೂಡು ಪಟ್ಟಣದ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಸ್ಥಳಕ್ಕಾಗಮಿಸಿ ಮೃತರ ದೇಹಗಳನ್ನು ಹೊರತೆಗೆದಿದ್ದಾರೆ. ಈ ಕುರಿತು ನಂಜನಗೂಡು ಪಟ್ಟಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

andolana

Recent Posts

ಹನೂರು ತಾಲ್ಲೂಕಿನಲ್ಲಿ ಕೇಂದ್ರ ಬರ ಅಧ್ಯಯನ ತಂಡದಿಂದ ಎರಡನೇ ದಿನದ ಸಮಗ್ರ ಪರಿಶೀಲನೆ

ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…

13 hours ago

ಬಿರುಗಾಳಿ ಮಳೆಗೆ ಬಾಳೆ ಬೆಳೆ ನೆಲಕಚ್ಚಿ:ರೈತರಿಗೆ ಲಕ್ಷಾಂತರ ರೂ. ನಷ್ಟ!

ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…

13 hours ago

ಕಾಡುಪ್ರಾಣಿಗಳ ಹಾವಳಿ ತಡೆಗೆ ಸ್ಟೀಲ್ ರೋಪ್ ಬ್ಯಾರಿಕೇಡ್

ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ  ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…

14 hours ago

ದಸರೆಯಲ್ಲಿ ಹೊಸ ಸಂಪ್ರದಾಯಕ್ಕೆ ಮುನ್ನುಡಿ ಬರೆದ ಮುಖ್ಯಮಂತ್ರಿ

ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…

14 hours ago

ಪೌರಕಾರ್ಮಿಕರಿಗೆ ಉಚಿತ ಸಾಬೂನು ಗ್ಯಾರಂಟಿ ಕೊಡಿ

ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…

14 hours ago

ಅಸ್ತ್ರಗಳು, ಅಂಧಕಾರ, ಆತಂಕ

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ   ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…

14 hours ago