ಮೈಸೂರು: ಮೈಸೂರು ತಾಲೂಕಿನ ಆಯರಹಳ್ಳಿಯ ದ್ಯಾವಣ್ಣ ಎಂಬ ರೈತನಿಗೆ ಸೇರಿದ ಜಮೀನಿನಲ್ಲಿ 3 ಚಿರತೆ ಮರಿಗಳು ಪ್ರತ್ಯಕ್ಷವಾಗಿವೆ. ಈ ಪೈಕಿ ಒಂದು ಕಪ್ಪು ಚಿರತೆ ಮರಿಯಾಗಿದೆ. ಜಮೀನಿನಲ್ಲಿ ಬೆಳೆದಿದ್ದ ಕಬ್ಬು ಕಟಾವು ಮಾಡುವ ವೇಳೆ ಈ ಮರಿಗಳು ಪತ್ತೆಯಾಗಿವೆ ಎಂದು ದ್ಯಾವಣ್ಣ ತಿಳಿಸಿದ್ದು, ಸುದ್ದಿ ತಿಳಿದ ಕೂಡಲೇ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ದಾವಿಸಿ ಮರಿಗಳನ್ನು ವಶಕ್ಕೆ ಪಡೆದಿದ್ದಾರೆ.
ಮರಿಗಳ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಇನ್ನು ಅರಣ್ಯ ಅಧಿಕಾರಿಗಳು ಮರಿಗಳನ್ನೇನೋ ವಶಕ್ಕೆ ಪಡೆದಿದ್ದಾರೆ. ಆದರೆ ಮರಿಗಳ ತಾಯಿಯದ್ದೇ ಇದೀಗ ಸಮಸ್ಯೆಯಾಗಿ ಪರಿಣಮಿಸಿದೆ. ಹೌದು, ತಾಯಿ ಚಿರತೆ ಮರಿಗಳು ಇದ್ದ ಸ್ಥಳಕ್ಕೆ ಹಾಲುಣಿಸಲು ಬರಲಿದ್ದು ತನ್ನ ಮರಿಗಳು ಕಾಣದಿದ್ದಾಗ ತೀವ್ರ ಆಕ್ರೋಶಗೊಳ್ಳುವ ಸಾಧ್ಯತೆ ಇದೆ.
ಇದರಿಂದ ಚಿರತೆ ಅತಿರೇಕದಿಂದ ವರ್ತಿಸಿ ಹಾನಿಯುಂಟುಮಾಡುವ ಸಾಧ್ಯತೆಗಳಿದ್ದು, ಅರಣ್ಯ ಅಧಿಕಾರಿಗಳು ತಾಯಿ ಚಿರತೆಯನ್ನು ಸೆರೆ ಹಿಡಿಯಲು ಯೋಜನೆ ರಚಿಸಿದ್ದಾರೆ ಎಂದು ತಿಳಿದುಬಂದಿದೆ.
ಬೆಂಗಳೂರು: ಇರಾನ್ ಹಾಗೂ ಇಸ್ರೇಲ್ ನಡುವಿನ ಯುದ್ಧದಿಂದಾಗಿ ಮಧ್ಯಾಪ್ರಾಚ್ಯ ರಾಷ್ಟ್ರಗಳಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಯುದ್ಧದ ಪರಿಣಾಮ ಹಲವು ದೇಶಗಳಲ್ಲಿ…
ಬೆಂಗಳೂರು: ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧದಿಂದಾಗಿ ಇಸ್ರೇಲ್, ಯುಎಇ, ಇರಾನ್, ಖತಾರ್ ಸೇರಿದಂತೆ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ನೆಲೆಸಿರುವ ಕನ್ನಡಿಗರ…
ಟೆಹರಾನ್: ಇರಾನ್ ಮೇಲೆ ಜಂಟಿಯಾಗಿ ಇಸ್ರೇಲ್ ಮತ್ತು ಅಮೇರಿಕಾ ದಾಳಿ ನಡೆಸಿದೆ. ದಾಳಿಯ ಪರಿಣಾಮ ಇರಾನ್ ದೇಶದ ಸರ್ವೋಚ್ಚ ನಾಯಕ…
ಮೈಸೂರು ರೈಲು ನಿಲ್ದಾಣದಲ್ಲಿ ದಿನದ ೨೪ ಗಂಟೆಯೂ ಕಾರ್ಯನಿರ್ವಹಿಸುವ ಪ್ರೀಪೇಯ್ಡ್ ಆಟೋ ಕೌಂಟರ್ ಇಲ್ಲದೆ ಬೆಳಗಿನ ಜಾವ ಬೇರೆ ಊರುಗಳಿಂದ…
ಕೇಂದ್ರೀಯ ಪಠ್ಯಕ್ರಮದ (ಎನ್ ಸಿಇಆರ್ ಟಿ) ೮ನೇ ತರಗತಿಯ ಪಠ್ಯ ಪುಸ್ತಕದಲ್ಲಿ ನಮ್ಮ ದೇಶದ ನ್ಯಾಯಾಂಗ ವ್ಯವಸ್ಥೆಯಲ್ಲೂ ಭ್ರಷ್ಟಾಚಾರ ಇದೆ…
ನಂಜನಗೂಡು ತಾಲ್ಲೂಕಿನ ಬದನವಾಳು ಗ್ರಾಮದ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಡಾ.ಬಿ .ಆರ್.ಅಂಬೇಡ್ಕರ್ ಸಮುದಾಯ ಭವನವನ್ನು ಅಂದಿನ ಸಚಿವರಾಗಿದ್ದ ಶ್ರೀನಿವಾಸ ಪ್ರಸಾದ್…