ಕುಟುಂಬ ವೈದ್ಯರ ೩ನೇ ರಾಜ್ಯಮಟ್ಟದ ಸಮ್ಮೇಳನ ಕುರಿತು ಸಮ್ಮೇಳನದ ಸಂಯೋಜಕ ಡಾ.ರವಿಕುಮಾರ್ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಸಂಘದ ಕಾರ್ಯದರ್ಶಿ ಡಾ.ಜಿ.ಎನ್.ಇಂಪನ, ಖಜಾಂಚಿ ಡಾ.ವೀಣಾ ಹಾಜರಿದ್ದರು.
ಮೈಸೂರು: ಅಕಾಡೆಮಿ ಆಫ್ ಫ್ಯಾಮಿಲಿ ಫಿಸಿಶಿಯನ್ಸ್ ಆಫ್ ಇಂಡಿಯಾದ ವತಿಯಿಂದ ಡಿ.೧೦ ಮತ್ತು ೧೧ರಂದು ಮೈಸೂರಿನಲ್ಲಿ ೩ನೇ ರಾಜ್ಯಮಟ್ಟದ ಸಮ್ಮೇಳನ ಆಯೋಜಿಸಲಾಗಿದೆ ಎಂದು ಸಮ್ಮೇಳನದ ಸಂಯೋಜಕ ಡಾ.ರವಿಕುಮಾರ್ ಕುಲಕರ್ಣಿ ತಿಳಿಸಿದರು.
ಜಿಲ್ಲಾ ಪತ್ರಕರ್ತರ ಭವನದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜೆಎಸ್‌ಎಸ್ ಆಸ್ಪತ್ರೆಯ ಶ್ರೀ ಶಿವರಾತ್ರಿ ರಾಜೇಂದ್ರ ಶತಮಾನೋತ್ಸವ ಸಭಾಂಗಣದಲ್ಲಿ ಎರಡು ದಿನಗಳವರೆಗೆ ನಡೆಯಲಿರುವ ಸಮ್ಮೇಳನದಲ್ಲಿ ೨೦೦ಕ್ಕೂ ಹೆಚ್ಚು ವೈದ್ಯರು ಭಾಗವಹಿಸಲಿದ್ದಾರೆ. ವೈದ್ಯರು, ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ನೀತಿ ನಿರೂಪಕರುಗಳಿಗೆ ಗುಣಮಟ್ಟದ ಫ್ಯಾಮಿಲಿ ಮೆಡಿಸಿನ್ ಅಪ್‌ಡೇಟ್ ಆಗಿ ಕಾರ್ಯನಿರ್ವಹಿಸುತ್ತದೆ. ಉಪನ್ಯಾಸ, ಕಾರ್ಯಾಗಾರ, ರೋಲ್ ಪ್ಲೇ, ಪ್ಯಾನಲ್ ಚರ್ಚೆ, ರಸಪ್ರಶ್ನೆ ಮತ್ತು ನೀತಿ ಚರ್ಚೆಗಳು ನಡೆಯಲಿವೆ ಎಂದು ವಿವರಿಸಿದರು.
ಡಿ.೧೦ರಂದು ಮಧ್ಯಾಹ್ನ ೧೨ಕ್ಕೆ ಯುವ ವೈದ್ಯರ ಸಮಾವೇಶವನ್ನು ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ.ಕೆ.ರವಿ ಉದ್ಘಾಟಿಸಲಿದ್ದಾರೆ. ಜೆಎಸ್‌ಎಸ್ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ಡಾ.ಎಚ್.ಬಸವನಗೌಡಪ್ಪ, ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕರಾದ ಡಾ.ಕೆ.ಆರ್.ದಾಕ್ಷಾಯಿಣಿ, ಎಎಫ್‌ಪಿಐ ರಾಷ್ಟ್ರೀಯ ಅಧ್ಯಕ್ಷ ಡಾ.ರಮಣ ಕುಮಾರ್, ಚುನಾಯಿತ ಅಧ್ಯಕ್ಷ ಡಾ.ಮೋಹನ್ ಕುಬೇಂದ್ರ ಭಾಗವಹಿಸಲಿದ್ದಾರೆ. ಡಿ.೧೧ರಂದು ಮಧ್ಯಾಹ್ನ ೧೨ಕ್ಕೆ ೩ನೇ ರಾಜ್ಯಮಟ್ಟದ ಸಮ್ಮೇಳನವನ್ನು ಜೆಎಸ್‌ಎಸ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಸಿ.ಪಿ.ಮಧು ಉದ್ಘಾಟಿಸಲಿದ್ದು, ಡಾ.ಆರ್.ಬಾಲಸುಬ್ರಹ್ಮಣ್ಯಂ, ಡಾ.ಎಚ್.ಕೆ.ಪ್ರಸಾದ್, ಡಾ.ಕೆ.ನಾಗೇಂದ್ರ ಪ್ರಸಾದ್, ಡಾ.ವೈ.ಎಂ.ಶಿವಕುಮಾರ್, ಎಎಫ್‌ಪಿಐ ರಾಷ್ಟ್ರೀಯ ಅಧ್ಯಕ್ಷ ಡಾ.ರಮಣ ಕುಮಾರ್ ಭಾಗವಹಿಸಲಿದ್ದಾರೆ ಎಂದು ಹೇಳಿದರು. ಸಂಘದ ಕಾರ್ಯದರ್ಶಿ ಡಾ.ಜಿ.ಎನ್.ಇಂಪನ, ಖಜಾಂಚಿ ಡಾ.ವೀಣಾ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.
ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…
ಆಹಾರದಲ್ಲಿ ಬಳಸುವ ಉಪ್ಪು, ಸಕ್ಕರೆ ಬಳಕೆ ಪ್ರಮಾಣಕ್ಕೆ ಕಡಿವಾಣ ಹಾಕಲು ಅರೋಗ್ಯ ಇಲಾಖೆ ಚಿಂತನೆ ನಡೆಸಿದೆ ಎಂದು ವರದಿಯಾಗಿದೆ. ಹಾಗೆಯೇ…
ಚಾಮರಾಜನಗರ ಜಿಯ ಕೊಳ್ಳೇಗಾಲ ಮತ್ತು ಹನೂರು ವಿಧಾನಸಭಾ ಕ್ಷೇತ್ರಗಳಲ್ಲಿ ಸುಮಾರು ರೂ.೫೦೦ ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಮಕ್ಕಳು ದೊಡ್ಡ ಹುದ್ದೆಗಳಿಗೆ ಹೋದರೂ ತನ್ನ ಕಾಯಕ ಮುಂದುವರಿಸಿರುವ ‘ಮಹಾತಾಯಿ’ ತೆಲಂಗಾಣದ ಸಂಗಾರೆಡ್ಡಿಯ ರಾಕೇಶ್…
ಪುನೀತ್ ಮಡಿಕೇರಿ ಮಡಿಕೇರಿ ದಸರಾ ಸಮೀಪಿಸುತ್ತಿದ್ದರೂ ಗುಂಡಿಗಳಿಗೆ ಸಿಗದ ಮುಕ್ತಿ ಮಡಿಕೇರಿ ದಸರಾ ಜನೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಆದರೆ, ದಸರಾ…
ಮಹೇಂದ್ರ ಹಸಗೂಲಿ ದೇಪಾಪುರದಲ್ಲಿ ಗುಡಿಸಲಿನಲ್ಲಿ ಆರಂಭವಾದ ಅನ್ನ ದಾಸೋಹಕ್ಕೆ ಈಗ ದಾಸೋಹ ಭವನದ ರೂಪ ಗುಂಡ್ಲುಪೇಟೆ: ಸಣ್ಣ ಗುಡಿಸಲಿನಲ್ಲಿ ಆರಂಭಗೊಂಡ…