ಸುದ್ದಿಗೋಷ್ಠಿಯಲ್ಲಿ ಎಚ್.ಎಂ.ರೇಣುಕಪ್ರಸನ್ನ ವಿವರಣೆ
ಚಾಮರಾಜನಗರ: ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾದ ೨೩ನೇ ಮಹಾ ಅಧಿವೇಶನವನ್ನು ಡಿ.೨೪ ರಿಂದ ೨೬ ರವರೆಗೆ ದಾವಣಗೆರೆಯ ಎಂ.ಬಿ.ವಿ. ಕಾಲೇಜು ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮಹಾಸಭಾದ ರಾಷ್ಟಿçÃಯ ಪ್ರಧಾನ ಕಾರ್ಯದರ್ಶಿ ಎಚ್.ಎಂ.ರೇಣುಕಪ್ರಸನ್ನ ತಿಳಿಸಿದರು.
ಮಹಾಸಭಾದ ರಾಜ್ಯಾಧ್ಯಕ್ಷ ಶ್ಯಾಮನೂರು ಶಿವಶಂಕರಪ್ಪ ಅವರು ಅಧಿವೇಶನದ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉದ್ಘಾಟಿಸುವರು. ರಾಷ್ಟçಪತಿ ದ್ರೌಪದಿ ಮುರ್ಮು ಅವರು ಭಾಗವಹಿಸುವ ನಿರೀಕ್ಷೆಯಿದೆ. ಅಲ್ಲದೆ ನಾಡಿನ ಸ್ವಾಮೀಜಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ವಿವರಿಸಿದರು.
ಮಹಾ ಅಧಿವೇಶನದಲ್ಲಿ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ, ಕೃಷಿ, ಕೈಗಾರಿಕೆ, ವಾಣಿಜ್ಯ, ಮಹಿಳಾ ಮತ್ತು ಯುವ ಅಧಿವೇಶನಗಳು ನಡೆಯಲಿವೆ. ಇದೇ ಮೊದಲ ಬಾರಿಗೆ ವೀರಶೈವ-ಲಿಂಗಾಯತ ನೌಕರರ ಅಧಿವೇಶನ ಏರ್ಪಡಿಸಲಾಗಿದೆ. ಸಾಂಸ್ಕೃತಿಕ ಪರಂಪರೆ, ಸಾಹಿತ್ಯ, ಕವಿಗೋಷ್ಠಿಗಳು ಹಾಗೂ ಪ್ರತಿದಿನ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದರು.
ಮಹಾಸಭಾದ ದಾವಣಗೆರೆ ಜಿಲ್ಲಾ ಘಟಕವು ಅಧಿವೇಶನದ ಆತಿಥ್ಯ ವಹಿಸಲಿದ್ದು, ಸುತ್ತಲಿನ ೫ ಜಿಲ್ಲಾ ಘಟಕಗಳು ಸಹಕಾರ ನೀಡಲಿವೆ. ೩ ದಿನಗಳ ಅಧಿವೇಶನದಲ್ಲಿ ೧.೫೦ ಲಕ್ಷ ಜನರು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಜಿಲ್ಲೆಯ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.
ಈಗಾಗಲೇ ಅಧಿವೇಶನದಲ್ಲಿ ಪಾಲ್ಗೊಳ್ಳುವರನ್ನು ನೋಂದಣಿ ಮಾಡುವ ಕಾರ್ಯ ಶುರುವಾಗಿದೆ. ಆಸಕ್ತರು ಆಯಾಯ ಜಿಲ್ಲಾ ಘಟಕಗಳ ಮೂಲಕ ಹೆಸರು ನೋಂದಾಯಿಸಬೇಕು.
ಪಾಲ್ಗೊಳ್ಳುವವರಿಗೆ ಊಟ, ವಸತಿ ಸೌಲಭ್ಯ ಕಲ್ಪಿಸಲು ಅನುಕೂಲವಾಗಲಿ ಎಂಬ ಉದ್ದೇಶದಿಂದ ನೋಂದಣಿ ಆರಂಭಿಸಲಾಗಿದೆ ಎಂದರು.
ಮಹಾಸಭಾದ ಜಿಲ್ಲಾಧ್ಯಕ್ಷ ಮೂಡ್ಲುಪುರ ನಂದೀಶ್ ಮಾತನಾಡಿ, ಅಧಿವೇಶನಕ್ಕೆ ಜಿಲ್ಲೆಯಿಂದ ೫ ಸಾವಿರ ಜನರನ್ನು ಕಳುಹಿಸಲು ಉದ್ದೇಶಿಸಲಾಗಿದೆ. ಆಸಕ್ತರು ಮಹಾಸಭಾವನ್ನು ಸಂಪರ್ಕಿಸಬಹುದು ಎಂದು ಕೋರಿದರು.
ರಾಜೇಶ್ ಬೆಂಡರವಾಡಿ ಚಾಮರಾಜನಗರ: ತಾಲ್ಲೂಕಿನ ಬೆಂಡರವಾಡಿ ಗ್ರಾಮದ ಬಳಿ ಲಾರಿ ಹಾಗೂ ಕೆಎಸ್‌ಆರ್‌ಟಿಸಿ ಬಸ್ ನಡುವೆ ಮಂಗಳವಾರ ರಾತ್ರಿ ಮುಖಾಮುಖಿ…
ಚಾಮರಾಜನಗರ ತಾಲ್ಲೂಕಿನ ಆಲೂರು ಗ್ರಾಮದ ಪರಿಶಿಷ್ಟ ಜಾತಿಯ ಕುಟುಂಬಗಳಿಗೆ ದಿ.ಬಿ.ರಾಚಯ್ಯ ಅವರು ಸಚಿವರಾಗಿದ್ದಾಗ ಹರದನಹಳ್ಳಿ ಡಿಸ್ಟ್ರಿಕ್ಟ್ ಫಾರೆಸ್ಟ್ ಸರ್ವೆ ನಂ.೩ರಲ್ಲಿ…
ಮೈಸೂರಿನ ರೈಲು ನಿಲ್ದಾಣ ಸೇರಿದಂತೆ, ರಾಜ್ಯದ ಯಾವುದೇ ರೈಲು ನಿಲ್ದಾಣ ಮತ್ತು ರೈಲು ಗಾಡಿಗಳಲ್ಲಿ ಕುಡಿಯುವ ನೀರಿನ ಅರ್ಧ ಲೀಟರ್…
ಮೈಸೂರು ಮಹಾ ನಗರ ಪಾಲಿಕೆ ಚುನಾಯಿತ ಸದಸ್ಯರ ಅವಧಿ ಮುಗಿದು ಎರಡು ವರ್ಷಗಳೆ ಕಳೆದಿದೆ. ಆದರೆ ಸರ್ಕಾರ ಚುನಾವಣೆ ನಡೆಸಲು ಮುಂದಾಗುತ್ತಿಲ್ಲ.…
ಮೈಸೂರಿನ ಶಿವರಾಮ್ ಪೇಟೆ ರಸ್ತೆಯಲ್ಲಿರುವ ನಂಜರಾಜ ಬಹದ್ದೂರ್ ಛತ್ರ ಹಾಗೂ ರಾಜ್ ಕಮಲ್ ಥಿಯೇಟರ್ ನಡುವೆ ಬರುವ ವೃತ್ತದಲ್ಲಿ ದಿನನಿತ್ಯ…
ಪಂಜುಗಂಗೊಳ್ಳಿ ಊಟವಿಲ್ಲದೆ ಪರದಾಡಿದ ಘಟನೆಯೇ ನಿರಂತರ ದಾಸೋಹಕ್ಕೆ ಪ್ರೇರಣೆ ಇತ್ತೀಚಿನ ದಿನಗಳಲ್ಲಿ ಹಲವು ಸರ್ಕಾರಿ ಆಸ್ಪತ್ರೆಗಳಲ್ಲಿ ಬಡ ರೋಗಿಗಳಿಗೆ ಉಚಿತ…