ಜಿಲ್ಲೆಗಳು

ಇಂದಿನಿಂದಲೇ ಜಿಲ್ಲೆಯಲ್ಲಿ 400 ಕೋವಿಡ್ ಟೆಸ್ಟ್: ಡಿಸಿ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ನಗರಪಾಲಿಕೆ, ಜಿಪಂ ಅಧಿಕಾರಿಗಳೊಂದಿಗೆ ಮಹತ್ವದ ಸಭೆ

ಮೈಸೂರು: ವಿದೇಶದಲ್ಲಿ ಕೊರೊನಾ ವ್ಯಾಪಕವಾಗಿ ಹರಡುತ್ತಿರುವುದರಿಂದ ಆತಂಕ ಸೃಷ್ಟಿಸಿದ್ದು, ಸದ್ಯಕ್ಕೆ ಸಾರ್ವಜನಿಕರು ಯಾವುದೇ ಭಯಪಡುವ ಅಗತ್ಯವಿಲ್ಲ. ಸ್ವಯಂಪ್ರೇರಣೆಯಿಂದ ಮಾಸ್ಕ್ ಧರಿಸುವುದು ಸೇರಿದಂತೆ ಮುಂಜಾಗ್ರತಾ ಕ್ರಮಗಳನ್ನು ತಪ್ಪದೆ ಪಾಲಿಸುವ ಮೂಲಕ ರೋಗ ಹರಡುವಿಕೆ ತಡೆಯುವಂತೆ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕೋವಿಡ್ ಪರಿಸ್ಧಿತಿಯಲ್ಲಿ ಪಾಲಿಸಬೇಕಾದ ಶಿಷ್ಟಾಚಾರ ಕ್ರಮಗಳ ಕುರಿತಾದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕೋವಿಡ್-೧೯ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಪ್ರಸ್ತುತ ೪ ಪಾಸಿಟಿವ್ ಪ್ರಕರಣಗಳಿವೆ. ಮುಂಜಾಗ್ರತಾ ಕ್ರಮವಾಗಿ ಕೊರೊನಾ ತಡೆಗಟ್ಟಲು ಸಾರ್ವಜನಿಕರು ಮಾರ್ಗಸೂಚಿ ಪಾಲಿಸುವುದು ಅವಶ್ಯವಾಗಿದೆ ಎಂದರು.
ಪ್ರಸ್ತುತ ನಿತ್ಯ ೧೫೦ ಜನರಿಗೆ ಪರೀಕ್ಷೆ ಮಾಡಲಾಗುತ್ತಿದೆ. ನಾಳೆಯಿಂದ ೪೦೦ ಜನರಿಗೆ ಕೊರೊನಾ ಪರೀಕ್ಷೆ ಮಾಡುವ ಗುರಿ ಹೊಂದಲಾಗಿದೆ. ಜಿಲ್ಲಾ ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲಿ ಹಾಸಿಗೆ ಮೀಸಲಿಡುವಂತೆ, ಔಷಧ ದಾಸ್ತಾನಿಡುವಂತೆ ಸೂಚಿಸಲಾಗಿದೆ. ತಾಲ್ಲೂಕು ಆಸ್ಪತ್ರೆಗಳಲ್ಲಿ ೫ ಐಸೋಲೇಷನ್ ಹಾಸಿಗೆ, ಜಿಲ್ಲಾಸ್ಪತ್ರೆಯಲ್ಲಿ ೫೦ ಐಸೋಲೇಷನ್ ಹಾಸಿಗೆ ಮೀಸಲಿಡುವಂತೆ ಆದೇಶಿಸಿಸಲಾಗಿದೆ ಎಂದರು. ಇದೇ ರೀತಿ ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ೫೦ ಹಾಸಿಗೆಗಳನ್ನು ಮೀಸಲಿಡುವಂತೆ ತಿಳಿಸಲಾಗಿದೆ ಎಂದರು.

ಸ್ವಯಂಪ್ರೇರಣೆಯಿಂದ ಮಾಸ್ಕ್ ಧರಿಸಿ: ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಲ್ಲ. ಆದರೆ, ಒಳಾಂಗಣದಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಪ್ರವಾಸಿ ಸ್ಥಳಗಳಲ್ಲಿ ಮಾಸ್ಕ್ ಹಾಕಿಕೊಳ್ಳುವಂತೆ ಮನವಿ ಮಾಡಲಿದ್ದೇವೆ. ಪಬ್, ಬಾರ್, ರೆಸ್ಟೋರೆಂಟ್, ಸಿನಿಮಾ ಹಾಲ್‌ಗಳು, ಶಾಪಿಂಗ್ ಮಾಲ್, ಕಚೇರಿ, ಬಸ್, ರೈಲು, ವಿಮಾನ ಯಾನ ಸಂದರ್ಭಗಳಲ್ಲಿ ಮಾಸ್ಕ್ ಧರಿಸುವುದು ಅಗತ್ಯವಾಗಿರುತ್ತದೆ ಎಂದು ತಿಳಿಸಿದರು.
ಪರೀಕ್ಷೆ ಹೆಚ್ಚಳ: ತೀವ್ರ ನೆಗಡಿ, ಕೆಮ್ಮು, ಜ್ವರ (ಐಎಲ್‌ಐ/ಸಾರಿ) ಪ್ರಕರಣಗಳನ್ನು ಪರೀಕ್ಷೆ ಮಾಡಲಾಗುವುದು ಎಂದು ಹೇಳಿದರು. ಎಲ್ಲರಿಗೂ ಬೂಸ್ಟರ್ ಡೋಸ್ ಕಡ್ಡಾಯಗೊಳಿಸುವುದು, ಕೇಂದ್ರ ಸರ್ಕಾರದ ಜೊತೆ ನೇರ ಸಂಪರ್ಕದಲ್ಲಿದ್ದು ಲಸಿಕಾಕರಣ ಹೆಚ್ಚಿಸಲಾಗುವುದು. ಮುಂಚೂಣಿ ಕಾರ್ಯಕರ್ತರಾದ ಅಂಗನವಾಡಿ, ಆಶಾ, ಸ್ಥಳೀಯ ಸಂಸ್ಥೆಗಳ ಸಿಬ್ಬಂದಿಗೆ ಆದ್ಯತೆ ಮೇರೆಗೆ ಬೂಸ್ಟರ್ ಡೋಸ್ ಹಾಕಲಾಗುವುದು ಎಂದು ಮಾಹಿತಿ ನೀಡಿದರು.
ವಿಮಾನ ನಿಲ್ದಾಣಗಳಲ್ಲಿ ವಿದೇಶದಿಂದ ಆಗಮಿಸುವ ಪ್ರಯಾಣಿಕರಲ್ಲಿ ಶೇ.೨ರಷ್ಟು ಪ್ರಯಾಣಿಕರನ್ನು ರ್ಯಾಂಡಮ್ ಟೆಸ್ಟಿಂಗ್ ಮಾಡುವುದು. ವಿದೇಶದ ವಿಮಾನಗಳಿಂದ ಬರುವ ಜನರನ್ನು ಪರೀಕ್ಷೆಗೆ ಒಳಪಡಿಸಲಾಗುವುದು. ಹೆಚ್ಚಿನ ಜನರು ಗುಂಪುಗೂಡುವಿಕೆಯನ್ನು ವಿಶೇಷವಾಗಿ ತಡೆಯಬೇಕು. ದನಗಳ ಜಾತ್ರೆಯನ್ನು ಜ.೧೦ರ ತನಕ ಮುಂದೂಡುವಂತೆ ತಿಳಿಸಲಾಗಿದೆ.
ಜಿಲ್ಲಾ ಪಂಚಾಯಿತಿ ಸಿಇಒ ಡಾ.ಬಿ.ಆರ್.ಪೂರ್ಣಿಮಾ, ನಗರಪಾಲಿಕೆ ಆಯುಕ್ತ ಜಿ.ಲಕ್ಷ್ಮೀಕಾಂತ ರೆಡ್ಡಿ, ಅಪರ ಜಿಲ್ಲಾಧಿಕಾರಿ ಡಾ.ಬಿ.ಎಸ್.ಮಂಜುನಾಥಸ್ವಾಮಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ.ಎಚ್.ಪ್ರಸಾದ್, ಮೈಸೂರು ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ನಿರ್ದೇಶಕಿ ದಾಕ್ಷಾಯಿಣಿ, ಜಿಲ್ಲಾ ಆಸ್ಪತ್ರೆ ಸರ್ಜನ್ ಡಾ.ಅಮರನಾಥ್, ಕೆ.ಆರ್.ಆಸ್ಪತ್ರೆ ಆರ್‌ಎಂಒ ಡಾ.ರಾಜೇಶ್‌ಕುಮಾರ್ ಉಪಸ್ಥಿತರಿದ್ದರು.


ಪ್ರವಾಸಿ ತಾಣಗಳಿಗೆ ಪ್ರವಾಸಿಗರು ಬರುತ್ತಿರುವುದರಿಂದ ಮಾಸ್ಕ್ ಧರಿಸಿದರೆ ಸಾಕು. ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಭೇಟಿ ನಿರ್ಬಂಧಿಸುವ ಅಗತ್ಯವಿಲ್ಲ. ವಿದೇಶದಿಂದ ಬಂದವರನ್ನು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಪಾಸಣೆಗೆ ಒಳಪಡಿಸುವ ಕಾರಣ ಯಾವುದೇ ಆತಂಕವಿಲ್ಲ.

-ಡಾ.ಕೆ.ವಿ.ರಾಜೇಂದ್ರ, ಜಿಲ್ಲಾಧಿಕಾರಿ.

 

andolanait

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

6 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

7 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

8 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

8 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

13 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

13 hours ago