ಮೈಸೂರು: ಮೈಸೂರು ಜಿಲ್ಲಾ ಮಟ್ಟದಲ್ಲಿ ಮಾಸ್ಟರ್ಸ್ ಅಥ್ಲೆಟಿಕ್ಸ್ ಅಸೋಸಿಯೇಷನ್, ಕರ್ನಾಟಕ ಮಾಸ್ಟರ್ಸ್ ಅಥ್ಲೆಟಿಕ್ಸ್ ಅಸೋಸಿಯೇಷನ್, ಮೈಸೂರು ಅಥ್ಲೆಟಿಕ್ಸ್ ಕ್ಲಬ್ ಸಹಯೋಗದಲ್ಲಿ ಆಯೋಜಿಸಿರುವ ೪೨ನೇ ಕರ್ನಾಟಕ ರಾಜ್ಯಮಟ್ಟದ ವಾಸ್ಟರ್ಸ್ ಅಥ್ಲೆಟಿಕ್ಸ್ ಚಾಂಪಿಯನ್‌ಷಿಪ್-೨೦೨೨ ಶನಿವಾರ ಚಾಲನೆ ದೊರೆಯಿತು.
ಮೈಸೂರು ವಿಶ್ವವಿದ್ಯಾನಿಲಯದ ಓವೆಲ್ ಮೈದಾನದಲ್ಲಿ ಆಯೋಜಿಸಿರುವ ಮಾಸ್ಟರ್ಸ್ ಅಥ್ಲೆಟಿಕ್ಸ್ ಚಾಂಪಿಯನ್‌ಷಿಪ್‌ಗೆ ಶಾಸಕ ಎಲ್.ನಾಗೇಂದ್ರ ಚಾಲನೆ ನೀಡಿದರು.
ಹವಾಮಾನ ವೈಫರೀತ್ಯದಿಂದಾಗಿ ಶೀತಗಾಳಿ, ಆಗಾಗ್ಗೆ ಮಳೆ ಸುರಿಯುತ್ತಿರುವುದನ್ನೂ ಲೆಕ್ಕಿಸದೇ ರಾಜ್ಯದ ಮೂಲೆ ಮೂಲೆಗಳಿಂದ ಬಂದಿರುವ ೫೦೦ಕ್ಕೂ ಹೆಚ್ಚು ಹಿರಿಯ ಕ್ರೀಡಾಪಟುಗಳು ಅತ್ಯಂತ ಉತ್ಸಾಹದಿಂದ ಕ್ರೀಡಾ ಕೂಟದಲ್ಲಿ ಪಾಲ್ಗೊಂಡಿದ್ದರು.
ಕರ್ನಾಟಕ ಮಾಸ್ಟರ್ಸ್ ಅಥ್ಲೆಟಿಕ್ಸ್ ಅಸೋಸಿಯೇಷನ್ ಅಧ್ಯಕ್ಷ ಡೇವಿಡ್ ಪ್ರೇಮನಾಥ್ ಮಾತನಾಡಿ, ಮುಂಬರುವ ಏಷ್ಯಾ ಮಟ್ಟದ ಕ್ರೀಡಾಕೂಟದಲ್ಲಿ ಪ್ರತಿಯೊಬ್ಬರೂ ಸಕ್ರೀಯವಾಗಿ ಪಾಲ್ಗೊಳ್ಳಬೇಕು. ಅನಧಿಕೃತ ಕ್ಲಬ್‌ಗಳು ನಡೆಸುವ ಕ್ರೀಡಾಕೂಟಗಳಲ್ಲಿ ಯಾವುದೇ ಕಾರಣಕ್ಕೂ ಭಾಗವಹಿಸಬಾರದು ಎಂದು ಹೇಳಿದರು.
ಮಹಾಪೌರ ಶಿವಕುಮಾರ್, ಹಿರಿಯ ಪತ್ರಕರ್ತ ರವೀಂದ್ರ ಭಟ್ ಮಾತನಾಡಿದರು. ಮೈಸೂರು ಜಿಲ್ಲಾ ಮಾಸ್ಟರ್ಸ್ ಅಥ್ಲೆಟಿಕ್ಸ್ ಅಸೋಸಿಯೇಷನ್ ಅಧ್ಯಕ್ಷರಾದ ಸುಮನಾ ನರಸಿಂಹಮೂರ್ತಿ ಅಧ್ಯಕ್ಷತೆ ವಹಿಸಿದ್ದರು. ಮೈಸೂರು ಅಥ್ಲೆಟಿಕ್ಸ್ ಅಸೋಸಿಯೇಷನ್ ಅಧ್ಯಕ್ಷರೂ ಆದ ಮಾಜಿ ಶಾಸಕ ವಾಸು, ಮೈವಿವಿ ದೈಹಿಕ ಶಿಕ್ಷಣ ಇಲಾಖೆ ನಿರ್ದೇಶಕ ಡಾ.ಪಿ.ಕೃಷ್ಣಯ್ಶ, ನಿವೃತ್ತ ನಿರ್ದೇಶಕ ಡಾ.ಸಿ.ಕೃಷ್ಣ, ಹಿರಿಯ ಪತ್ರಕರ್ತ ಅಂಶಿ ಪ್ರಸನ್ನಕುಮಾರ್, ವಾಣಿಜ್ಯ ತೆರಿಗೆ ಇಲಾಖೆ ಉಪ ಆಯುಕ್ತರಾದ ಶ್ರುತಿ, ಕರ್ನಾಟಕ ಮಾಸ್ಟರ್ಸ್ ಅಥ್ಲೆಟಿಕ್ಸ್ ಅಸೋಸಿಯೇಷನ್ ಕಾರ್ಯದರ್ಶಿ ಎಚ್.ಸಿ.ಷಣ್ಮುಗಂ, ಮೈಸೂರು ಜಿಲ್ಲಾ ಮಾಸ್ಟರ್ಸ್ ಅಥ್ಲೆಟಿಕ್ಸ್ ಅಸೋಸಿಯೇಷನ್ ಪದಾಧಿಕಾರಿಗಳಾದ ಎನ್.ಆರ್.ಶಂಕರರಾವ್, ಕೆ.ಎನ್.ಸೋಮಶೇಖರ್, ಎಂ.ಯೋಗೇಂದ್ರ, ಸಿ.ಎನ್.ಗಣೇಶ್, ಪಾರ್ವತಿ ಕಾಂತರಾಜ್, ಸಿ.ಆರ್.ಆನಂದ, ಎಂ.ಎಂ.ನಾಣಯ, ಬಿ.ಬಸವರಾಜು, ಮಹದೇವಯ್ಶ, ಬಿ.ಎಸ್.ಜಯಶ್ರೀ, ಎಸ್.ಮಹದೇವು, ಎಂ.ಎಲ್.ಅಶೋಕ್, ಸಿ.ಕೆ.ಮುರಳೀಧರನ್, ಬಿ.ಕೆ.ಸೋಮಶೇಖರ್, ಮಹದೇವರಾವ್, ಎಂ.ಶಶಿಧರನ್ ಕುಟ್ಟಿ, ಚನ್ನಯ್ಶ, ಎಂ.ಎಸ್.ಮಹೇಶ್, ರಾಣಿ ಬಿ.ರಾಜ್, ಅಂತಾರಾಷ್ಟ್ರೀಯ ಅಥ್ಲೀಟ್‌ಗಳು ಪಾಲ್ಗೊಂಡಿದ್ದರು.
ಮೈಸೂರು : ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಹಿರಿಯ ಪತ್ರಕರ್ತ ರಾಜಕುಮಾರ್ ಬಾಹುಸಾರ್(64) ಅವರು ಚಿಕಿತ್ಸೆಗೆ ಸ್ಪಂದಿಸದೆ ಭಾನುವಾರ ಸಂಜೆ…
ಮೈಸೂರು : ಚಾಮುಂಡಿ ಬೆಟ್ಟ ಉಳಿಸಿ ಎಂಬ ಆಶಯದಲ್ಲಿ ಹಲವು ಸಂಘಟನೆಗಳು ಹಾಗೂ ನಾಗರಿಕರು ಸೇರಿ ‘ಚಾಮುಂಡಿಬೆಟ್ಟ ಸಂರಕ್ಷಣೆಗಾಗಿ ನಡಿಗೆ’…
ಬೆಂಗಳೂರು : ಬೆಂಗಳೂರು ನಗರದ ಜನಸಂಖ್ಯೆ ಮುಂದಿನ 20 ರಿಂದ 25 ವರ್ಷಗಳಲ್ಲಿನ ದ್ವಿಗುಣಗೊಳ್ಳಲಿದ್ದು, ನಗರದ ಮೂಲ ಸೌಕರ್ಯ ಕೊರತೆ…
ಮೈಸೂರು : ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನ ಕುಕ್ಕರಹಳ್ಳಿ ರೈಲ್ವೆ ಗೇಟ್ ಬಳಿ ನಡೆದಿದೆ.ಜ…
ಶಿರಸಿ : ಇಲ್ಲಿನ ಯಲ್ಲಾಪುರದಲ್ಲಿ ನಡೆದ ವಿವಾಹಿತೆ ರಂಜಿತಾ ಹತ್ಯೆ ಕೇಸ್‌ಗೆ ಬಿಗ್ ಟ್ವೀಸ್ಟ್ ಸಿಕ್ಕಿದ್ದು, ಹತ್ಯೆ ಆರೋಪಿ ರಫೀಕ್…
ಬೆಂಗಳೂರು : ಹಿಂದುಳಿದವರು ಸಂಘಟಿಸಿದರೆ ಜಾತೀಯತೆಯಾಗುವುದಿಲ್ಲ. ಉಪಜಾತಿಗಳಲ್ಲಿ ವಿಭಜಿಸದೇ ಒಂದೇ ಶಕ್ತಿಯಾಗಿ ಸಂಘಟಿತರಾಗಿ ಎಂದು ಸಮುದಾಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ…