ಮಂಡ್ಯ ಕ್ಷೇತ್ರವೊಂದರಿಂದಲೇ 17 ಮಂದಿ; ನಾಗಮಂಗಲದಿಂದ ಸಿಆರ್‌ಎಸ್ ಮಾತ್ರ
ಮಂಡ್ಯ: ಮಂಡ್ಯ ಜಿಲ್ಲೆಯ ಒಟ್ಟು ೭ ವಿಧಾನಸಭಾ ಕ್ಷೇತ್ರಗಳಿಂದ ಕಾಂಗ್ರೆಸ್ ಟಿಕೆಟ್ ಬಯಸಿ ೪೩ ಮಂದಿ ಕೆಪಿಸಿಸಿಗೆ ಅರ್ಜಿ ಸಲ್ಲಿಸಿದ್ದು, ಮಂಡ್ಯ ವಿಧಾನಸಭಾ ಕ್ಷೇತ್ರವೊಂದರಿಂದಲೇ `ಕೈ’ ಟಿಕೆಟ್ ಪಡೆಯಲು ೧೬ ಮಂದಿ ಅರ್ಜಿ ಸಲ್ಲಿಸಿರುವುದು ವಿಶೇಷವಾಗಿದೆ.
ಮಂಡ್ಯ ಕ್ಷೇತ್ರ:
ಕಾಂಗ್ರೆಸ್ ಟಿಕೆಟ್‌ಗಾಗಿ ಮಾಜಿ ಸಚಿವ ಎಂ.ಎಸ್. ಆತ್ಮಾನಂದ, ಮಾಜಿ ಶಾಸಕ ಎಚ್.ಬಿ. ರಾಮು, ಮನ್‌ಮುಲ್ ನಿರ್ದೇಶಕ ಉಮ್ಮಡಹಳ್ಳಿ ಶಿವಕುಮಾರ್ (ಶಿವಪ್ಪ), ಕಾಂಗ್ರೆಸ್ ಮುಖಂಡರಾದ ಕೆ.ಕೆ.ರಾಧಾಕೃಷ್ಣ, ಗಣಿಗ ರವಿಕುಮಾರ್, ಕಾವೇರಿ ನರ್ಸಿಂಗ್ ಹೋಂನ ಡಾ.ಕೃಷ್ಣ, ಸಿದ್ದಾರೂಢ ಸತೀಶ್‌ಗೌಡ, ಎಂ.ಎಸ್ ಚಿದಂಬರ್, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಅಂಜನಾ ಶ್ರೀಕಾಂತ್, ಮೈಶುಗರ್ ಮಾಜಿ ಅಧ್ಯಕ್ಷ ಹಾಲಹಳ್ಳಿ ರಾಮಲಿಂಗಯ್ಯ, ಅಮರಾವತಿ ಚಂದ್ರಶೇಖರ್, ಜಿ.ಪಂ. ಮಾಜಿ ಸದಸ್ಯ ಬಿ.ಸಿ. ಶಿವಾನಂದ, ಬೆಂಗಳೂರು ಬಾರ್ ಕೌನ್ಸಿಲ್ ಮಾಜಿ ಅಧ್ಯಕ್ಷ ಹನಕೆರೆ ಶಿವರಾಮ್, ಹಾಲಹಳ್ಳಿ ಅಶೋಕ್, ಅಸಾದುಲ್ಲಾಖಾನ್, ಹೊಸಹಳ್ಳಿ ಶಿವಲಿಂಗೇಗೌಡ ಕಾಂಗ್ರೆಸ್ ಟಿಕೆಟ್ ಬಯಸಿ ೨ ಲಕ್ಷ ರೂ.ಗಳ ಡಿಡಿಯೊಂದಿಗೆ ಅರ್ಜಿ ಸಲ್ಲಿಸಿದ್ದಾರೆ.
ಮಂಡ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲು ಇಬ್ಬರು, ಮೂವರು, ಹೆಚ್ಚೆಂದರೆ ಐದಾರು ಮಂದಿ ಆಕಾಂಕ್ಷಿಗಳಿದ್ದರು. ಆದರೆ ಮಂಡ್ಯ ಕ್ಷೇತ್ರದಲ್ಲಿ ಈ ಬಾರಿ ಬರೋಬ್ಬರಿ ೧೬ ಮಂದಿ ಟಿಕೆಟ್ ಬೇಕೆಂದು ಅರ್ಜಿ ಸಲ್ಲಿಸಿರುವುದು ಜನರ ಕುತೂಹಲ ಕೆರಳಿಸಿದೆ. ಇಷ್ಟು ಜನರಲ್ಲಿ ಅಂತಿಮ ಅಭ್ಯರ್ಥಿ ಯಾರಾಗಬಹುದೆಂಬುದು ಯಕ್ಷ ಪ್ರಶ್ನೆಯಾಗಿದೆ.
ಮದ್ದೂರು ಕ್ಷೇತ್ರ:
ಮದ್ದೂರು ಕ್ಷೇತ್ರದಿಂದ ಮೂರು ಮಂದಿ ಅರ್ಜಿ ಸಲ್ಲಿಸಿದ್ದು, ಕೆಪಿಸಿಸಿ ಸದಸ್ಯ ಎಸ್.ಗುರುಚರಣ್ ಮತ್ತೊಮ್ಮೆ ಅದೃಷ್ಟ ಪರೀಕ್ಷೆಗಿಳಿಯಲು ಬಯಸಿ ಕೆಪಿಸಿಸಿಗೆ ಅರ್ಜಿ ಸಲ್ಲಿಸಿದ್ದು, ಅಂತೆಯೇ ಮಾಜಿ ಶಾಸಕ ಬಿ.ರಾಮಕೃಷ್ಣ, ಶಂಕರೇಗೌಡ ಅರ್ಜಿ ಸಲ್ಲಿಸಿದ್ದಾರೆ.
ಮಳವಳ್ಳಿ ಕ್ಷೇತ್ರ:
ಮಳವಳ್ಳಿ ಕ್ಷೇತ್ರದಿಂದ ಮಾಜಿ ಸಚಿವ ಪಿ.ಎಂ.ನರೇAದ್ರಸ್ವಾಮಿ, ಮಾಜಿ ಶಾಸಕಿ ಮಲ್ಲಾಜಮ್ಮ, ಡಾ. ಮೂರ್ತಿ ಅರ್ಜಿ ಸಲ್ಲಿಸಿರುವ ಪ್ರಮುಖರು.
ನಾಗಮಂಗಲ ಕ್ಷೇತ್ರ:
ನಾಗಮಂಗಲ ಕ್ಷೇತ್ರದ `ಕೈ’ನಲ್ಲಿ ಮಾಜಿ ಸಚಿವ ಎನ್. ಚಲುವರಾಯಸ್ವಾಮಿ ಹೊರತುಪಡಿಸಿ ಬೇರಾರು ಸ್ಪರ್ಧಾಕಾಂಕ್ಷಿಗಳಿಲ್ಲವಾಗಿದ್ದು, ಕ್ಷೇತ್ರದಿಂದ ಇವರೊಬ್ಬರೇ ಅರ್ಜಿ ಹಾಕಿದ್ದಾರೆ.
ಪಾಂಡವಪುರ: ಡಾ. ಎಚ್.ಎನ್. ರವೀಂದ್ರ, ಜಿಪಂ ಮಾಜಿ ಸದಸ್ಯ ಎನ್.ತ್ಯಾಗರಾಜು, ಕಾಗೇಪುರ ಆನಂದ, ನಾಗಭೂಷಣ್, ಸಚಿನ್ ಮಿಗ.
ಕೆ.ಆರ್.ಪೇಟೆ: ಮಾಜಿ ಶಾಸಕರಾದ ಕೆ.ಬಿ. ಚಂದ್ರಶೇಖರ್, ಬಿ. ಪ್ರಕಾಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕಿಕ್ಕೇರಿ ಸುರೇಶ್, ನಾಗೇಂದ್ರ ಕುಮಾರ್, ಜಿಪಂ ಮಾಜಿ ಸದಸ್ಯ ಎಂ.ಡಿ.ಕೃಷ್ಣಮೂರ್ತಿ, ಮುಖಂಡ ವಿಜಯ್ ರಾಮೇಗೌಡ.
ಶ್ರೀರಂಗಪಟ್ಟಣ: ಮಾಜಿ ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡ, ವಕೀಲ ಪುಟ್ಟೇಗೌಡ, ಪಾಲಹಳ್ಳಿ ಚಂದ್ರಶೇಖರ್.
ಮಡಿಕೇರಿ : ನಗರದ ಹಳೆಯ ಖಾಸಗಿ ಬಸ್ ನಿಲ್ದಾಣದ ಬಳಿ ಮುಳ್ಳುಹಂದಿ ಪ್ರತ್ಯಕ್ಷವಾಗಿದೆ. ಓಡಾಡಲು ಕಷ್ಟವಾಗುವ ಸ್ಥಿತಿಯಲ್ಲಿದ್ದ ಈ ಮುಳ್ಳುಹಂದಿ…
ಹನೂರು : ತಾಲೂಕಿನ ಲೊಕ್ಕನಹಳ್ಳಿ ಗ್ರಾಮದ ಮನೋಹರ್ ಎಂಬುವರಿಗೆ ಸೇರಿದ 500ಕ್ಕೂ ಹೆಚ್ಚು ನಾಟಿ ಕೋಳಿಗಳಿಗೆ ರೋಗ ತಗುಲಿ ಮೃತಪಟ್ಟಿದ್ದರು,…
ಮುಂಬೈ : ‘ಕಾಂತಾರ’ ಸಿನಿಮಾದಲ್ಲಿ ದೈವದ ಕುರಿತು ವೇದಿಕೆ ಮೇಲೆ ಅನುಕರಣೆ ಮಾಡಿ ‘ಫೀಮೇಲ್ ಗೋಸ್ಟ್’ ಎಂದು ಕರೆದು ವಿವಾದಕ್ಕೆ…
ಸಿಕ್ಕಿಂ : ಉತ್ತರ ಸಿಕ್ಕಿಂನಲ್ಲಿ ಭಾರೀ ಮಳೆಯಿಂದ ಭೂಕುಸಿತ ಸಂಭವಿಸಿ, ರಸ್ತೆ ಸಂಪರ್ಕ ಕಡಿತಗೊಂಡಿದ್ದು, ಸುಮಾರು 200 ಪ್ರವಾಸಿಗರು ಚುಂಗ್‌ಥಾಂಗ್‌ನಲ್ಲಿ…
ವಾಷಿಂಗ್ಟನ್ : ಪಶ್ಚಿಮ ಏಪ್ಯಾ ಸಂಘರ್ಷ ಶಮನಕ್ಕೆ ನಡೆಯುತ್ತಿರುವ ಪ್ರಯತ್ನಗಳ ಮಧ್ಯೆ, ಟ್ರಂಪ್ ಆಡಳಿತ 15 ಅಂಶಗಳ ಪ್ರಸ್ತಾವನೆಯನ್ನು ಇರಾನ್…
ಹನೂರು : ನೀರಿರುವ ಬಾವಿಗೆ ಬಿದ್ದಿದ್ದ ಶ್ವಾನವನ್ನು ರಕ್ಷಣೆ ಮಾಡುವಲ್ಲಿ ಅಗ್ನಿಶಾಮಕ ಠಾಣಾ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ. ಘಟನೆಯ ವಿವರ ಹನೂರು…