ಮೈಸೂರು: ಕೆ.ಎನ್.ಪುಟ್ಟಬುದ್ಧಿ ಫೌಂಡೇಷನ್, ಜಿಲ್ಲಾ ಸಂಚಾರಿ ನೇತ್ರ ಚಿಕಿತ್ಸಾ ಘಟಕ-ಕೆ.ಆರ್.ಆಸ್ಪತ್ರೆ, ಮೈಸೂರು, ಆರೋಗ್ಯಭಾರತಿ-ಮೈಸೂರು ಇವರ ಸಂಯುಕ್ತಾಶ್ರಯದಲ್ಲಿ ಮೈಸೂರು ತಾಲ್ಲೂಕಿನ ಕೀಳನಪುರದಲ್ಲಿ ಡಿ.೪ರಂದು ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿದೆ.
ಅಂದು ಬೆಳಿಗ್ಗೆ ೯ರಿಂದ ಮಧ್ಯಾಹ್ನ ೨ ಗಂಟೆಯವರೆಗೆ ಕೀಳನಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಆರೋಗ್ಯ ಶಿಬಿರ ನಡೆಯಲಿದ್ದು, ದೀರ್ಘ ತಲೆನೋವು, ರಕ್ತದೊತ್ತಡ, ಸಕ್ಕರೆ ಕಾಯಿಲೆ, ನಾಡಿಮಿಡಿತ, ಕಣ್ಣು-ಮೂಗು-ಕಿವಿ-ಗಂಟಲು, ಮಂಡಿನೋವು ಮುಂತಾದ ಕಾಯಿಲೆಗಳಿಗೆ ಉಚಿತ ತಪಾಸಣೆ, ಕಣ್ಣಿನ ಶಸ್ತ್ರ ಚಿಕಿತ್ಸೆ ಅಗತ್ಯ ಇರುವವರಿಗೆ ಚಿಕಿತ್ಸೆ ಮತ್ತು ಕಾರ್ಡ್ ವಿತರಣೆ, ಉಚಿತ ಔಷಧಿ ವಿತರಣೆ ಕಾರ್ಯಕ್ರಮ ಏರ್ಪಡಿಸಲಾಗಿದೆ.
ನೇತ್ರ ತಜ್ಞರು, ಮಕ್ಕಳ ತಜ್ಞರು, ಹೃದಯ ಸಂಬಂಧಿ ತಜ್ಞರು, ಮಧುಮೇಹ ತಜ್ಞರು, ಪ್ರಸೂತಿ ತಜ್ಞರು, ಇಎನ್‌ಟಿ ತಜ್ಞರು, ಸಾಮಾನ್ಯ ತಪಾಸಣಾ ತಜ್ಞರು ತಪಾಸಣೆ ನಡೆಸಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಈ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕೆಂದು ವರುಣಾ ವಿಧಾನಸಭಾ ಕ್ಷೇತ್ರದ ಆಕಾಂಕ್ಷಿ ಶರತ್ ಪುಟ್ಟಬುದ್ಧಿ ಮನವಿ ಮಾಡಿದ್ದಾರೆ.
ಮಡಿಕೇರಿ: ಪಾಂಡಂಡ ಕುಟ್ಟಪ್ಪ ಅವರ ಕನಸಿನ ಕೂಸಾದ ಕೊಡವ ಕೌಟುಂಬಿಕ ಹಾಕಿ ಉತ್ಸವದ ಬೆಳ್ಳಿ ಮಹೋತ್ಸವವನ್ನು ಆಚರಿಸಿಕೊಂಡ ಹಿನ್ನೆಲೆಯಲ್ಲಿ ಕೊಡವ…
ಗಿರೀಶ್ ಹುಣಸೂರು ೨೦೨೫ನೇ ಸಾಲಿನಲ್ಲಿ ದೇಶ, ರಾಜ್ಯದಲ್ಲಿ ಹಲವು ದಾಖಲೆಗಳಿಗೆ ಸಾಕ್ಷಿಯಾಗಿದೆ. ಭಾರತ ಮೂಲದ ಶುಭಾಂಶು ಶುಕ್ಲಾ ಬಾಹ್ಯಾಕಾಶದಲ್ಲಿ ೧೮…
ಕೆ.ಬಿ.ರಮೇಶನಾಯಕ ಮೈಸೂರು: ಮಾನವ-ವನ್ಯಜೀವಿಗಳ ಸಂಘರ್ಷವನ್ನು ತಡೆಯಲು ಬಂಡೀಪುರ, ನಾಗರ ಹೊಳೆ ಅಭಯಾರಣ್ಯ ಪ್ರದೇಶದಲ್ಲಿ ಸಫಾರಿಗೆ ನಿರ್ಬಂಧ ವಿಧಿಸಿರುವುದರ ನಡುವೆಯೂ ಕ್ರಿಸ್ಮಸ್,…
ಮೈಸೂರು : ಮೈಸೂರು ಅರಮನೆ ಮುಂಭಾಗ ನಿನ್ನೆ ಸಂಜೆ ನಡೆದಿದ್ದ ಹೀಲಿಯಂ ಸ್ಫೋಟ ಪ್ರಕರಣದಲ್ಲಿ ಸಾವಿನ ಸಂಖ್ಯೆ ಇದೀಗ ಮೂರಕ್ಕೆ…
ಮೈಸೂರು : ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಗೇಡು ಹತ್ಯೆ ವಿರೋಧಿಸಿ ಮತ್ತು ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾಯಿದೆ ರೂಪಿಸಬೇಕು ಎಂದು…
ಮೈಸೂರು : ಇಲ್ಲಿನ ಕೆ.ಆರ್. ಆಸ್ಪತ್ರೆಯ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆಸ್ಪತ್ರೆಯ ಹಾಸಿಗೆಗಳು ಬೆಂಕಿಗಾಹುತಿಯಾಗಿವೆ. ಆಸ್ಪತ್ರೆಯ ಚೆಲುವಾಂಬ ವಾರ್ಡ್…