ಜಿಲ್ಲೆಗಳು

4ರಂದು ಬೃಹತ್ ಆರೋಗ್ಯ ತಪಾಸಣಾ ಶಿಬಿರ

ಮೈಸೂರು: ಕೆ.ಎನ್.ಪುಟ್ಟಬುದ್ಧಿ ಫೌಂಡೇಷನ್, ಜಿಲ್ಲಾ ಸಂಚಾರಿ ನೇತ್ರ ಚಿಕಿತ್ಸಾ ಘಟಕ-ಕೆ.ಆರ್.ಆಸ್ಪತ್ರೆ, ಮೈಸೂರು, ಆರೋಗ್ಯಭಾರತಿ-ಮೈಸೂರು ಇವರ ಸಂಯುಕ್ತಾಶ್ರಯದಲ್ಲಿ ಮೈಸೂರು ತಾಲ್ಲೂಕಿನ ಕೀಳನಪುರದಲ್ಲಿ ಡಿ.೪ರಂದು ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿದೆ.

ಅಂದು ಬೆಳಿಗ್ಗೆ ೯ರಿಂದ ಮಧ್ಯಾಹ್ನ ೨ ಗಂಟೆಯವರೆಗೆ ಕೀಳನಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಆರೋಗ್ಯ ಶಿಬಿರ ನಡೆಯಲಿದ್ದು, ದೀರ್ಘ ತಲೆನೋವು, ರಕ್ತದೊತ್ತಡ, ಸಕ್ಕರೆ ಕಾಯಿಲೆ, ನಾಡಿಮಿಡಿತ, ಕಣ್ಣು-ಮೂಗು-ಕಿವಿ-ಗಂಟಲು, ಮಂಡಿನೋವು ಮುಂತಾದ ಕಾಯಿಲೆಗಳಿಗೆ ಉಚಿತ ತಪಾಸಣೆ, ಕಣ್ಣಿನ ಶಸ್ತ್ರ ಚಿಕಿತ್ಸೆ ಅಗತ್ಯ ಇರುವವರಿಗೆ ಚಿಕಿತ್ಸೆ ಮತ್ತು ಕಾರ್ಡ್ ವಿತರಣೆ, ಉಚಿತ ಔಷಧಿ ವಿತರಣೆ ಕಾರ್ಯಕ್ರಮ ಏರ್ಪಡಿಸಲಾಗಿದೆ.

ನೇತ್ರ ತಜ್ಞರು, ಮಕ್ಕಳ ತಜ್ಞರು, ಹೃದಯ ಸಂಬಂಧಿ ತಜ್ಞರು, ಮಧುಮೇಹ ತಜ್ಞರು, ಪ್ರಸೂತಿ ತಜ್ಞರು, ಇಎನ್‌ಟಿ ತಜ್ಞರು, ಸಾಮಾನ್ಯ ತಪಾಸಣಾ ತಜ್ಞರು ತಪಾಸಣೆ ನಡೆಸಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಈ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕೆಂದು ವರುಣಾ ವಿಧಾನಸಭಾ ಕ್ಷೇತ್ರದ ಆಕಾಂಕ್ಷಿ ಶರತ್ ಪುಟ್ಟಬುದ್ಧಿ ಮನವಿ ಮಾಡಿದ್ದಾರೆ.

andolanait

Recent Posts

ನಮ್ಮ ತಂದೆ ಯಾವುದೇ ತಪ್ಪು ಮಾಡಿಲ್ಲ: ಯತೀಂದ್ರ ಸಿದ್ದರಾಮಯ್ಯ

ಮೈಸೂರು: “ನಮ್ಮ ತಂದೆ ಯಾವುದೇ ತಪ್ಪು ಮಾಡಿಲ್ಲ. ಹಾಗಾಗಿಯೇ ಅವರು ಧೈರ್ಯವಾಗಿ ಮಾತನಾಡುತ್ತಿದ್ದಾರೆ!” ಸ್ಟಿಂಗ್ ಕಾರ್ಯಾಚರಣೆ ವಿಚಾರವಾಗಿ ಮೈಸೂರಿನಲ್ಲಿ ಯತೀಂದ್ರ…

10 hours ago

ನಮ್ಮದು ಸೌಜನ್ಯದ ಭೇಟಿಯಷ್ಟೇ: ಮಾಜಿ ಸಿಎಂ ಸಿದ್ದರಾಮಯ್ಯ

ಮೈಸೂರು:  ಭೇಟಿ ಮಾಡೋಕೆ ಬರ್ತಾರೆ ಕಣಯ್ಯ… ಅದರಲ್ಲೇನು?” ರಮೇಶ್ ಜಾರಕಿಹೊಳಿ ಹಾಗೂ ನರೇಂದ್ರ ಸ್ವಾಮಿ ಭೇಟಿ ವಿಚಾರವಾಗಿ ಮಾಧ್ಯಮಗಳು ಕೇಳಿದ…

10 hours ago

ಸ್ಟೇ ತಗೋಬಾರದಿತ್ತು, ಫೈಟ್ ಮಾಡಬೇಕಿತ್ತು – ಮೈಸೂರಿನಲ್ಲಿ ಸಿದ್ದು ಭೇಟಿಯಾದ ರಮೇಶ್‌ ಜಾರಕಿಹೊಳಿ

ಮೈಸೂರು: “ಸ್ಟೇ ತಗೋಬಾರದಿತ್ತು, ಧೈರ್ಯವಾಗಿ ಫೈಟ್ ಮಾಡಬೇಕಿತ್ತು!” ವಿವಾದಿತ ಸ್ಟಿಂಗ್ ಕಾರ್ಯಾಚರಣೆ ವಿಚಾರದಲ್ಲಿ ಸಿದ್ದರಾಮಯ್ಯ ಅವರ ನಡೆ ಕುರಿತು ಮಾಜಿ…

10 hours ago

ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಯಲ್ಲಿ ಈ ಬಾರಿ ಚಿನ್ನದ ಅಂಬಾರಿ ಹೊರಲಿದ್ದಾನೆ ಪ್ರಶಾಂತ

ಮೈಸೂರು: ಅಭಿಮನ್ಯು ಆನೆ ನಿವೃತ್ತಿಯಾದ ಬಳಿಕ ದಸರಾ ಗಜಪಡೆಯ ಮುಂದಿನ ಕ್ಯಾಪ್ಟನ್ ಯಾರು ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಭಾರೀ ಕುತೂಹಲ…

10 hours ago

ರೇಣುಕಾಸ್ವಾಮಿಗೆ ಕುಟುಕು ಜೀವ; ದರ್ಶನ್ ರೋಷ ಭಾವ

ರೇಣುಕಾಸ್ವಾಮಿ ಕತ್ತಿನ ಮೇಲೆ ಕಾಲಿಟ್ಟು ಅದುಮುತ್ತಿದ್ದ ದರ್ಶನ್ ತನ್ನ ಕೈಯಲ್ಲಿದ್ದ ಸಿಗರೇಟ್‌ನಿಂದ ರೇಣುಕಾಸ್ವಾಮಿಯ ಎದೆಯ ಭಾಗಕ್ಕೆ ಸುಟ್ಟರು  " ನಾನು…

10 hours ago

ರೇಣುಕಾಸ್ವಾಮಿ ಎದೆಯ ಮೇಲೆ ನಿಂತು ಅದುಮುತ್ತಿದ್ದ ದರ್ಶನ್

ಕಾಫಿ ಜೊತೆ ಸಿಗರೇಟ್ ಸೇದುತ್ತಾ ದಿಢೀರನೆ ಬಂದು ಒದ್ದ ದರ್ಶನ್, ನಂತರ ಮರ್ಮಾಂಗಕ್ಕೆ ಎರಡು ಬಾರಿ ಒದೆತ ರೇಣುಕಾಸ್ವಾಮಿಗೆ ಬೀಳುತ್ತಿದ್ದ…

10 hours ago