ಜಿಲ್ಲೆಗಳು

6 ಲಕ್ಷ ರೂ. ನಗ, ನಾಣ್ಯ ದರೋಡೆ

ಮಲ್ಲಯ್ಯನದೊಡ್ಡಿ ಬೋರೆ ಬಳಿ ಶಿಕ್ಷಕರ ಕುಟುಂಬ ಮೇಲೆ ದಾಳಿ

ಮುಸುಕುಧಾರಿ ಯುವಕರಿಂದ ಮಧ್ಯರಾತ್ರಿಯಲ್ಲಿ ಕುಕೃತ್ಯ

ಮಂಡ್ಯ: ಬೆಂಗಳೂರಿನಿಂದ ಮೈಸೂರಿಗೆ ವಾಪಸಾಗುತ್ತಿದ್ದ ಶಿಕ್ಷಕರ ಕುಟುಂಬದ ಮೇಲೆ ದಾಳಿ ವಾಡಿದ ುಯುವಕರಿಬ್ಬರು ನಗದು ಹಾಗೂ ಚಿನ್ನಾಭರಣ ದರೋಡೆ ಮಾಡಿ ಪರಾರಿಯಾಗಿರುವ ಘಟನೆ ತಾಲ್ಲೂಕಿನ ಮಲ್ಲಯ್ಯನದೊಡ್ಡಿ ಬೋರೆ ಬಳಿ ಭಾನುವಾರ ರಾತ್ರಿ ಮಧ್ಯರಾತ್ರಿ ನಡೆದಿದೆ.

ಮೈಸೂರಿನ ಅಶೋಕಪುರಂ ರೈಲ್ವೆ ವರ್ಕ್ ಶಾಪ್‌ನ ಸರ್ಕಾರಿ ಪ್ರೌಢಶಾಲೆಯಲ್ಲಿ ಶಿಕ್ಷಕರಾಗಿರುವ ನಾಗರಾಜು ಹಾಗೂ ಅವರ ಪತ್ನಿ ಜಯಶ್ರೀ ದರೋಡೆಗೆ ಒಳಗಾದವರು.
ಬೆಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಪುತ್ರನನ್ನು ಭೇಟಿ ಮಾಡಲು ನಾಗರಾಜು ದಂಪತಿ ಭಾನುವಾರ ಮಧ್ಯಾಹ್ನ ತೆರಳಿದ್ದು, ರಾತ್ರಿ 10.30ಕ್ಕೆ ಬೆಂಗಳೂರಿನಿಂದ ಮೈಸೂರಿನ ಕಡೆಗೆ ಹೊರಟಿದ್ದರು. ಮಧ್ಯರತ್ರಿ 1.10 ರ ಸಮಯದಲ್ಲಿ ನಾಗರಾಜು ಮೂತ್ರ ವಿಸರ್ಜನೆಗೆಂದು ಮಲ್ಲಯ್ಯನದೊಡ್ಡಿ ಬಳಿ ಇಳಿದಾಗ ಮುಖಗವಸು ಧರಿಸಿದ್ದ ಇಬ್ಬರು ಯುವಕರು ಏಕಾಏಕಿ ಇವರ ಮೇಲೆ ದಾಳಿ ಮಾಡಿದ್ದಾರೆ. ವರ ಬಳಿ ಇದ್ದ 25 ಸಾವಿರ ರೂ.ಗಳನ್ನೂ ಕಿತ್ತುಕೊಂಡಿದ್ದಾರೆ.
ನಂತರ ಚಿನ್ನದ ಸರ, ಉಂಗುರ ಕೊಡುವಂತೆ ತಾಕೀತು ಮಾಡಿದರು. ಇದಕ್ಕೆ ವಿರೋಧ ವ್ಯಕ್ತಪಡಿಸಿದಾಗ ಕುತ್ತಿಗೆ ಭಾಗಕ್ಕೆ ಡ್ರಾಗರ್ ಹಿಡಿದು ಕೊಲೆ ಮಾಡುವ ಬೆದರಿಕೆಯನ್ನೂ ಹಾಕಿದ್ದಾರೆ. ಹೆದರಿದ ನಾಗರಾಜು ಉಂಗುರ, ಸರ ನೀಡಿದ್ದಾರೆ. ಬಳಿಕ ಕಾರಿನೊಳಗೆ ಕುಳಿತಿದ್ದ ಪತ್ನಿ ಜಯಶ್ರೀ ಅವರ ಕಡೆಗೂ ತೆರಳಿದ ದರೋಡೆಕೋರರು ಮಾಂಗಲ್ಯ ಸರ, ಗುಂಡುಗಳನ್ನು ಕಿತ್ತುಕೊಂಡಿದ್ದಾರೆ.

ಜೀವ ಉಳಿದರೆ ಸಾಕು ಎಂದು ನಗ, ನಗದು ನೀಡಿದ್ದು, 100 ಗ್ರಾಂ ಚಿನ್ನದ ಆಭರಣ,25.000 ನಗದು ಸೇರಿ ಸುಮಾರು 6 ಲಕ್ಷ ರೂ. ದರೋಡೆ ಮಾಡಲಾಗಿದೆ ಎಂದು ಅಂದಾಜಿಸಲಾಗಿದೆ.

ಅಲ್ಲಿಂದ ಮಂಡ್ಯಕ್ಕೆ ಆಗಮಿಸಿದ ನಾಗರಾಜು ಅವರು ಗ್ರಾಮಾಂತರ ಠಾಣೆಯಲ್ಲಿ ದೂರು ನೀಡಿದ್ದಾರೆ. ಈ ಸಂಬಂಧ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ತಿಮ್ಮಯ್ಯ, ಗ್ರಾಮಾಂತರ ಇನ್‌ಸ್ಪೆಕ್ಟರ್ ಹಾಗೂ ಪೊಲೀಸರ ತಂಡ ಘಟನೆ ನಡೆದ ಸ್ಥಳಕ್ಕೆ ತೆರಳಿದಾಗ ಅಲ್ಲಿ ಯಾರೂ ಇರಲಿಲ್ಲ. ಈ ಕುರಿತು ಸೋಮವಾರ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಮುನ್ನೆಚ್ಚರಿಕೆ ಇರಲಿ:

ಹೆದ್ದಾರಿಯಲ್ಲಿ ಜನರಹಿತ ಪ್ರದೇಶದಲ್ಲಿ ಯಾರೂ ಮೂತ್ರ ವಿಸರ್ಜನೆಗೆಂದು ಇಳಿಯುವುದು ಬೇಡ. ಆದಷ್ಟು ಸುರಕ್ಷಿತ ಸ್ಥಳಗಳನ್ನು ನೋಡಿ ಮುನ್ನೆಚ್ಚರಿಕೆ ವಹಿಸಬೇಕು ಎಂದು ಜಿಲ್ಲಾ ಪೊಲೀಸ್ ಇಲಾಖೆ ಮನವಿ ಮಾಡಿದೆ.

 

andolanait

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಭಾಷೆ, ಬದುಕು ಕಲಿಸಿದ ನನ್ನಪ್ಪ

ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…

2 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಮತಗಳ ಪರಿಚಯ

ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…

2 hours ago

ರೆಟ್ರೋ ಫೋಟೋಗಳ ಹೊಸ ಅಲೆ

ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…

2 hours ago

ಮಹಾಪಂಚ್‌ ಕಾರ್ಟೂನ್‌

  ಮಹಾಪಂಚ್‌ ಕಾರ್ಟೂನ್‌ | ಸೆಪ್ಟಂಬರ್‌ 12 ಶನಿವಾರ

2 hours ago

ಒಳ್ಳೆಯತನಕ್ಕೂ ಕೆಟ್ಟತನಕ್ಕೂ ಜಾತಿ ಮಾನದಂಡ ಅಲ್ಲ

ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…

2 hours ago

ಓದುಗರ ಪತ್ರ | ‘ಅಕ್ಕ’ ಸಮ್ಮೇಳನದಲ್ಲೂ ‘ನಂದಿನಿ’ ಮಿಂಚಿಂಗ್!

ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…

3 hours ago