ಜಿಲ್ಲೆಗಳು

60 ಕೋಟಿ ರೂ. ವೆಚ್ಚದ ರಸ್ತೆಗಳ ಡಾಂಬರೀಕರಣಕ್ಕೆ ಶಾಸಕ ಜಿಟಿಡಿ ಚಾಲನೆ

ವಿಜಯನಗರದಲ್ಲಿ ೬೦ ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಚಾಲನೆ ನೀಡಿದ ಶಾಸಕ ಜಿ.ಟಿ.ದೇವೇಗೌಡ
ಮೈಸೂರು: ವಿಜಯನಗರ ಮೂರನೇ ಹಂತದ ವ್ಯಾಪ್ತಿಯಲ್ಲಿ ಬರುವ ಎಲ್ಲ ರಸ್ತೆಗಳ ಡಾಂಬರೀಕರಣ ಮಾಡಲು ೬೦ ಕೋಟಿ ರೂ. ಮಂಜೂರು ಮಾಡಲಾಗಿದೆ. ಅದೇ ರೀತಿ ವಿಜಯನಗರ ನಾಲ್ಕನೇ ಹಂತಕ್ಕೆ ೬೦ ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದು ಶಾಸಕ ಜಿ.ಟಿ.ದೇವೇಗೌಡ ಹೇಳಿದರು.

ವಿಜಯನಗರ ಮೂರನೇ ಹಂತದಲ್ಲಿ ಕೈಗೊಂಡಿರುವ ೬೦ ಕೋಟಿ ರೂ. ವೆಚ್ಚದ ರಸ್ತೆಗಳ ಡಾಂಬರೀಕರಣ ಕಾಮಗಾರಿಗಳಿಗೆ ಶಾಸಕ ಜಿ.ಟಿ.ದೇವೇಗೌಡ ಚಾಲನೆ ನೀಡಿ ಬಳಿಕ ಮಾತನಾಡಿದ ಅವರು  ಮುಡಾದಲ್ಲಿ ನಿಧಿ ಒಂದು, ನಿಧಿ ಎರಡು ಹಂತ ಎಂದು ವರ್ಗೀಕರಣ ಮಾಡಿದ್ದಲ್ಲದೆ, ಕಾಮಗಾರಿಯನ್ನು ಕೈಗೆತ್ತಿಕೊಳ್ಳದಂತೆ ಸರ್ಕಾರ ಸೂಚನೆ ನೀಡಿದ್ದರಿಂದ ಮೂರು ವರ್ಷಗಳ ಕಾಲ ಯಾವುದೇ ಕಾಮಗಾರಿಯನ್ನೂ ಕೈಗೊಳ್ಳಲು ಸಾಧ್ಯವಾಗಿರಲಿಲ್ಲ. ನಂತರ ಜಿಲ್ಲಾ ಉಸ್ತುವಾರಿ ಸಚಿವರ ಸಮ್ಮುಖದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮನವರಿಕೆ ಮಾಡಿಕೊಟ್ಟ ಮೇಲೆ ಅನುದಾನ ಬಿಡುಗಡೆಯಾಗಿದ್ದರಿಂದ ಮುಡಾ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳ ಕೆಲಸ ಆರಂಭಿಸಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಎಂಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಜಿ.ಡಿ.ಹರೀಶ್‌ಗೌಡ, ಮುಡಾ ಅಧೀಕ್ಷಕ ಅಭಿಯಂತರ ಚನ್ನಕೇಶವಯ್ಯ, ಮುಖಂಡರಾದ ಮಂಜುನಾಥ್, ರವಿಕುಮಾರ್ ಇನ್ನಿತರರು ಹಾಜರಿದ್ದರು.

 

andolanait

Recent Posts

ಡಿ.ಕೆ.ಶಿವಕುಮಾರ್‌ ಅತ್ಯಂತ ಯಶಸ್ವಿ ಅಧ್ಯಕ್ಷ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಇವತ್ತಿಗೆ ಆರು ವರ್ಷಗಳಾಗಿದ್ದು, ಅತ್ಯಂತ ಯಶಸ್ವಿ ಅಧ್ಯಕ್ಷ ಎನಿಸಿಕೊಂಡಿದ್ದಾರೆ ಎಂದು ಸಚಿವೆ…

8 mins ago

ಸ್ಮೃತಿ ಇರಾನಿ ಕಾಣುತ್ತಿಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ವ್ಯಂಗ್ಯ

ಬೆಂಗಳೂರು: ಅಡುಗೆ ಅನಿಲದ ಬೆಲೆ ಏರಿಕೆ ಮಾಡುವ ಮೂಲಕ ಮಹಿಳೆಯರಿಗೆ ಉಡುಗೊರೆ ನೀಡಿರುವ ಕೇಂದ್ರ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಲು ಬಯಸುವೆ.…

15 mins ago

ಮೃಗಾಲಯದ ಆನೆ ಅಭಿ ಮತ್ತಿಗೋಡಿನಲ್ಲಿ ಕೊನೆಯುಸಿರು

ಮೈಸೂರು: ನಾಗರಹೊಳೆ ವ್ಯಾಪ್ತಿಯ ಮತ್ತಿಗೋಡು ಆನೆ ಶಿಬಿರದಲ್ಲಿದ್ದ 23 ವರ್ಷದ ಜೂನಿಯರ್ ಅಭಿ ಆನೆ ಅನಾರೋಗ್ಯದಿಂದ ಮೃತಪಟ್ಟಿದೆ.‌ ನಾಗರಹೊಳೆ ರಾಷ್ಟ್ರೀಯ…

24 mins ago

ರಾಜ್ಯದ ಹಲವೆಡೆ ತಾಪಮಾನ ಹೆಚ್ಚಳ: ಹೀಟ್‌ ಸ್ಟ್ರೋಕ್‌ ಭೀತಿ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಬಿಸಿಲ ಝಳ ಹೆಚ್ಚುತ್ತಿದ್ದು, ಹೀಟ್‌ ಸ್ಟ್ರೋಕ್‌ ಭೀತಿ ಎದುರಾಗಿದೆ. ಹಲವೆಡೆ…

32 mins ago

ಚಾಮರಾಜನಗರ ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಬೆಂಕಿ ಅವಘಡ

ಚಾಮರಾಜನಗರ: ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ನಡೆದಿದೆ. ಶಾರ್ಟ್‌ ಸರ್ಕ್ಯೂಟ್‌ನಿಂದಾಗಿ ಚಾಮರಾಜನಗರ ವೃತ್ತ ನಿರೀಕ್ಷಕರ ಕಚೇರಿಯಲ್ಲಿ…

1 hour ago

ಓದುಗರ ಪತ್ರ: ಅನಿಲ ಸಿಲಿಂಡರ್ ಬೆಲೆ ಏರಿಕೆ ತರವಲ್ಲ

ಪಶ್ಚಿಮ ಏಷ್ಯಾದ ಯುದ್ಧದ ಹಿನ್ನೆಲೆಯಲ್ಲಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾಗಿದ್ದು, ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ದರ ರೂ.೬೦…

2 hours ago