ಹನೂರು : ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 610 ಕೋಟಿ 72 ಲಕ್ಷ ವೆಚ್ಚದ ಪ್ರಮುಖ ಯೋಜನೆಗಳ ಕಾಮಗಾರಿ ಪೂರ್ಣಗೊಂಡಿದ್ದು ಇದೇ ಡಿಸೆಂಬರ್ 12 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರವರು ಉದ್ಘಾಟಿಸಲಿದ್ದಾರೆ ಎಂದು ಶಾಸಕ ಆರ್ ನರೇಂದ್ರ ಮಾಹಿತಿ ನೀಡಿದರು.
ಪಟ್ಟಣದ ಲೋಕೋಪಯೋಗಿ ವಸತಿಗೃಹದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ತಿಳಿಸಿದರು.
192 ಕೋಟಿ ವೆಚ್ಚದಲ್ಲಿ 98 ಹಳ್ಳಿಗಳಿಗೆ ಮೊದಲ ಅಂತದ ಬಹುಗ್ರಾಮ ಕುಡಿಯುವ ನೀರಿನ ಯೋಜನೆ, ಸ್ವಚ್ಛ ಭಾರತ್ ಮಿಷನ್ ಯೋಜನೆ ಅಡಿ 56 ಲಕ್ಷ ವೆಚ್ಚದ ಘನ ತ್ಯಾಜ್ಯ ಘಟಕ,17.5 ಕೋಟಿ ವೆಚ್ಚದ ಇಂದಿರಾಗಾಂಧಿ ವಸತಿ ಶಾಲೆ, 27.7 ಕೋಟಿ ವೆಚ್ಚದ ಕುರಟ್ಟಿ ಹೊಸೂರು ಪರಿಶಿಷ್ಟ ಜಾತಿ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯ, ಹನೂರು ಪಟ್ಟಣದ ಪರಿಶಿಷ್ಟ ಜಾತಿ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯ, ದಾಸೋಹ ಭವನದಿಂದ ಹೆಲಿ ಪ್ಯಾಡ್ ವರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿ, 98 ಲಕ್ಷ ವೆಚ್ಚದಲ್ಲಿ ಮಲೆ ಮಾದೇಶ್ವರ ಬೆಟ್ಟದಲ್ಲಿ ನಿರ್ಮಾಣ ಮಾಡಿರುವ ಪೊಲೀಸ್ ವಸತಿಗೃಹ, ಭಕ್ತಾದಿಗಳಿಗೆ ನಿರ್ಮಿಸಿರುವ ಡಾರ್ಮೆಟ್ರಿ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ.
268 ಕೋಟಿ ವೆಚ್ಚದ 193 ಜನ ವಸತಿ ಪ್ರದೇಶಗಳಿಗೆ ಎರಡನೇ ಹಂತದ ಬಹುಗ್ರಾಮ ಕುಡಿಯುವ ನೀರು ಸರಬರಾಜು, ಮಲೆ ಮಾದೇಶ್ವರ ಬೆಟ್ಟದ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು 13 ಕೋಟಿ ವೆಚ್ಚದಲ್ಲಿ ಸಮುದಾಯ ಆರೋಗ್ಯ ಕೇಂದ್ರ ಮೇಲ್ದರ್ಜೆಗೆಸಿರುವ ಕಾಮಗಾರಿ ಪಾಳ್ಯ ಮತ್ತು ದೊಡ್ಡಿಂದುವಾಡಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮೇಲ್ದರ್ಜೆಗೇರಿಸುವ ಕಾಮಗಾರಿ, ಲೊಕ್ಕನಹಳ್ಳಿ ಗ್ರಾಮದಲ್ಲಿ ಗ್ರಾಮೀಣ ಸಂಖ್ಯೆ ಯೋಜನೆಯಲ್ಲಿ ಹಳ್ಳಿ ಮಾರುಕಟ್ಟೆ, ಶೌಚಾಲಯ, ಕ್ಯಾಂಟೀನ್, ನೀರಿನ ಟ್ಯಾಂಕ್ ನಿರ್ಮಾಣ, ಮಲೆ ಮಹದೇಶ್ವರ ಬೆಟ್ಟದಲ್ಲಿ ನಿರ್ಮಾಣ ಮಾಡಲಾಗುತ್ತಿರುವ 66/11 ವಿದ್ಯುತ್ ಉಪಕೇಂದ್ರದ ನಿರ್ಮಾಣ ಕಾಮಗಾರಿಗೆ ಶಂಕು ಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಮಾಹಿತಿ ನೀಡಿದರು
ನೀರಾವರಿ ಯೋಜನೆ ಅನುಷ್ಠಾನಗೊಳಿಸಿ : ಹನೂರುವಿಧಾನಸಭಾ ಕ್ಷೇತ್ರ ವ್ಯಾಪ್ತಿಯು ಮಳೆಯಶ್ರೀತ ಪ್ರದೇಶವಾಗಿರುವುದರಿಂದ ಅಂತರ್ಜಲ ಹೆಚ್ಚಿಸುವ ನಿಟ್ಟಿನಲ್ಲಿ ತಾಲೂಕಿನ ಪ್ರಮುಖ 80 ಕೆರೆಗಳಿಗೆ 220 ಕೋಟಿ ವೆಚ್ಚದಲ್ಲಿ ನೀರು ತುಂಬಿಸುವುದು, ಕೀರೆ ಪಾತಿ ಜಲಾಶಯಕ್ಕೆ 40 ಕೋಟಿ, ಹುಬ್ಬೆ ಹುಣಸೆ ಜಲಾಶಯದಿಂದ ಉಡುತೊರೆ ಜಲಾಶಯಕ್ಕೆ ಜಲಾಶಯಕ್ಕೆ ನೀರು ತುಂಬಿಸುವ ಯೋಜನೆಗೆ 135 ಕೋಟಿ ವೆಚ್ಚದ ಕಾಮಗಾರಿಗೆ ಡಿಪಿಯರ್ ಸಿದ್ದಪಡಿಸಿ ಅನುಮೋದನೆಗಾಗಿ ಈಗಾಗಲೇ ವರದಿ ಸಲ್ಲಿಸಲಾಗಿದೆ. ಮುಖ್ಯಮಂತ್ರಿಗಳು ಈ ಯೋಜನೆಗಳನ್ನು ಘೋಷಣೆ ಮಾಡಲಿದ್ದಾರೆ ಎಂಬ ಭರವಸೆ ಇದೆ. ಈ ಪ್ರಮುಖ ಯೋಜನೆಗಳು ಅನುಷ್ಠಾನಗೊಂಡರೆ ಕ್ಷೇತ್ರದಲ್ಲಿ ಅಂತರ್ಜಲ ಹೆಚ್ಚಿ ನೀರಿನ ಕೊರತೆ ನಿವಾರಣೆಯಾಗಲಿದೆ ಎಂದು ತಿಳಿಸಿದರು.
ಪಟ್ಟಣದ ಕೇಂದ್ರಸ್ಥಾನದಲ್ಲಿ ತಾಲೂಕು ಆಸ್ಪತ್ರೆ ನಿರ್ಮಾಣ ಮಾಡಲು 48 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲು ಡಿಪಿಆರ್ ಸಿದ್ದಪಡಿಸಿ ಒಂದು ವರ್ಷಗಳ ಹಿಂದೆ ವರದಿ ಸಲ್ಲಿಸಲಾಗಿದೆ. ನಮ್ಮ ತಾಲೂಕು ಹೆಚ್ಚು ವಿಸ್ತೀರ್ಣ ಹೊಂದಿರುವುದರಿಂದ ಅಪಘಾತ ಹಾಗೂ ಇನ್ನಿತರ ಸಂದರ್ಭದಲ್ಲಿ ರೋಗಿಗಳಿಗೆ ತೀವ್ರ ತೊಂದರೆಯಾಗುತ್ತಿದೆ ಆದ್ದರಿಂದ ಶೀಘ್ರವೇ ಸೂಕ್ತ ಕ್ರಮ ಕೈಗೊಳ್ಳಬೇಕು. ಕ್ಷೇತ್ರದ 85 ಜನರಿಗೆ ಡಯಾಲಿಸಿಸ್ ಅವಶ್ಯಕತೆ ಇರುವುದರಿಂದ ರಾಮಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಡಯಾಲಿಸಿಸ್ ಕೇಂದ್ರ ತೆರೆಯುವಂತೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.42 ಗ್ರಾಮಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಗ್ರಾಮಗಳಿಗೆ ಜಲಜೀವನ್ ಮಿಷನ್ ಅಡಿ ನಳ ಸಂಪರ್ಕ ನೀಡಿ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದೆ. ಮ,ಬೆಟ್ಟ, ಪೊನ್ನಾಚಿ ಗೋಪಿನಾಥಮ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆಲವು ಗ್ರಾಮಗಳಿಗೆ ಜಲ್ ಜೀವನ್ ಮಿಷನ್ ಯೋಜನೆಯಡಿ ನೀರು ಪೂರೈಕೆ ಮಾಡಲು ಸಾಧ್ಯವಿಲ್ಲ ಈ ಗ್ರಾಮಗಳಲ್ಲಿ ಹೆಚ್ಚು ಬೋರ್ವೆಲ್ ಗಳನ್ನು ಕೊರೆಸಿ ಪ್ರತಿ ಮನೆಗಳಿಗೂ ಕುಡಿಯುವ ನೀರು ಪೂರೈಕೆ ಮಾಡಲು ಕ್ರಮ ವಹಿಸಲಾಗಿದೆ ಎಂದರು.
ಈ ಸಂದರ್ಭದಲ್ಲಿ ಪಪಂ ಉಪಾಧ್ಯಕ್ಷ ಗಿರೀಶ್, ಮುಖಂಡರುಗಳಾದ ಚಿಕ್ಕ ತಮ್ಮಯ್ಯ, ರಮೇಶ್ ನಾಯ್ಡು ಹಾಜರಿದ್ದರು.
ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…
ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…
ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಚಿಕ್ಕ…
ಲಕ್ನೋ: ಆಕರ್ಷಣೀಯ ಪ್ರವಾಸಿತಾಣಗಳ ಪಟ್ಟಿಯಲ್ಲಿ ಅಯೋಧ್ಯೆ ರಾಮಮಂದಿರವು ತಾಜ್‌ಮಹಲನ್ನು ಹಿಂದಿಕ್ಕಿ ನಂಬರ್ ಒನ್ ಪಟ್ಟ ಪಡೆದಿದೆ. ಈ ಮೂಲಕ ಈಗ…
ಚಿಕ್ಕಬಳ್ಳಾಪುರ: ನಂದಿಗಿರಿಧಾಮದಲ್ಲಿ ಹೊ ವರ್ಷಾಚರಣೆಗೆ ಬ್ರೇಕ್ ನೀಡಲಾಗಿದ್ದು, ಪ್ರವಾಸಿಗರಿಗೆ ಬಿಗ್ ಶಾಕ್ ಎದುರಾಗಿದೆ. ಪ್ರಕೃತಿ ಮಡಿಲಿನಲ್ಲಿ ಕುಣಿಸು ಕುಪ್ಪಳಿಸಿ ಹೊಸ…
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಕನ್ನಡ ಸಾಹಿತ್ಯ…