ಜಿಲ್ಲೆಗಳು

800 ವರ್ಷದ ಪುರಾತನ ಶಿವನ ದೇಗುಲ ಪತ್ತೆ!

ಐತಿಹಾಸಿಕ ದೇವಾಲಯ ಅಭಿವೃದ್ಧಿಗೆ ಮುಂದಾದ ಬೆಳ್ಳುಮಾಡು ಗ್ರಾಮಸ್ಥರು

-ಕಿಶೋರ್ ಕುವಾರ್ ಶೆಟ್ಟಿ
ವಿರಾಜಪೇಟೆ: ಪುರಾತನ ಕಾಲದಲ್ಲಿ ಸಾಕಷ್ಟು ದೇವಾಲಯಗಳು ನಿರ್ಮಾಣವಾಗಿದೆ. ಅವುಗಳಲ್ಲಿ ಕೆಲವು ದೇವಾಲಯಗಳು ವಿವಿಧ ಕಾರಣಗಳಿಂದ ಕಣ್ಮರೆಯಾಗುವೆ.. ಹೀಗೆ ಕಣ್ಮರೆಯಾಗಿದ್ದ ಪುರಾತನ ದೇವಾಲಯವೊಂದು ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಬೆಳ್ಳುಮಾಡು ಗ್ರಾಮದಲ್ಲಿ ೨೦೦೯ರಲ್ಲಿ ಪತ್ತೆಯಾಗಿದ್ದು, ೧೩ನೇ ಶತಮಾನದಲ್ಲಿ ನೆಲೆ ಕಂಡಿದ್ದ ಶ್ರೀ ಮಾದೇವರಪ್ಪ ದೇವರ ನೆಲೆಯ ಜೀರ್ಣೋದ್ಧಾರಕ್ಕೆ ಗ್ರಾಮಸ್ಥರು ಮುಂದಾಗಿದ್ದಾರೆ.
ಕಾಕೋಟುಪರಂಬು ಗ್ರಾ.ಪಂ. ವ್ಯಾಪ್ತಿಯ ಬೆಳ್ಳುಮಾಡು ಗ್ರಾಮದ ಸರ್ವೇ ನಂ. ೭೬/೧೦ರಲ್ಲಿ ಬೆಳ್ಳುಮಾಡು ದವಸ ಭಂಡಾರ ಸಹಕಾರ ಸಂಘದ ಕಟ್ಟಡದ ಹಿಂಭಾಗ ದೇವಾಲಯ ಪತ್ತೆಯಾಗಿದೆ.. ದೇಗುಲವು ಕಾಡು ಪಾಲಾಗಿದ್ದು, ಸಂಪೂರ್ಣ ಶಿಥಿಲಾವಸ್ಥೆಯಿಂದ ಕೂಡಿದೆ.

ದೇವಾಲಯ ಪತ್ತೆಯಾಗಿದ್ದು ಹೇಗೆ?: ೨೦೦೯ರ ಅಕ್ಟೋಬರ್ ತಿಂಗಳಲ್ಲಿ ಗ್ರಾಮದ ಶ್ರೀ ಅಯ್ಯಪ್ಪ ಶಾಸ್ತ ದೇಗುಲದ ಜೀರ್ಣೋದ್ಧಾರ ಮಾಡುವ ಸಲುವಾಗಿ ದೇವಾಲಯದ ಆವರಣದಲ್ಲಿ ಪ್ರಶ್ನಾರ್ಥ ಕಾರ್ಯ ನಡೆಸಲಾಗಿತ್ತು. ಈ ವೇಳೆ ಪುರಾತನ ದೇವಾಲಯ ಒಂದು ಶಿಥಿಲಾವಸ್ಥೆಯಲ್ಲಿದೆ, ದೇಗುಲವನ್ನು ಪುನರ್ ನಿರ್ಮಾಣ ಮಾಡಿದಲ್ಲಿ ಮಾತ್ರ ಗ್ರಾಮವು ಅಭಿವೃದ್ಧಿ ಹೊಂದುತ್ತದೆ ಎಂದು ತಿಳಿದು ಬಂದಿತ್ತು. ವಿಮರ್ಶಕರು ನುಡಿದಂತೆ ದೇಗುಲದ ಕುರುಹುಗಳನ್ನು ಹುಡುಕುವ ಸಂದರ್ಭದಲ್ಲಿ ದಟ್ಟ ಕಾಡಿನ ನಡುವೆ ಭಗ್ನಗೊಂಡ ದೇವಾಲಯ ಪತ್ತೆಯಾಯಿತು ಎಂದು ಹೇಳಲಾಗಿದೆ.
ದೇಗುಲ ಪುನರ್ ನಿರ್ಮಾಣಕ್ಕೆ  ಶ್ರಮದಾನ: ದೇಗುಲದ ಆವರಣವನ್ನು ಶುಚಿಗೊಳಿಸಲು ಗ್ರಾಮಸ್ಥರು ಮುಂದಾಗಿದ್ದು, ಗಿಡ-ಗಂಟಿಗಳನ್ನು ಶ್ರಮದಾನದ ಮೂಲಕ ಕಡಿದು ಶುಚಿಗೊಳಿಸಿದ್ದರು. ದೇಗುಲದ ಆವರಣದಲ್ಲಿ ಪ್ರಶ್ನೆಗಳ ವಿಧಿಗಳ ಮೂಲಕ ಗ್ರಾಮಸ್ಥರು ದೇಗುಲದ ಇತಿಹಾಸ ತಿಳಿಯಲು ಮುಂದಾದಾಗ ಅಚ್ಚರಿ ಕಾದಿತ್ತು.
ಪಾಳುಬಿದ್ದ ಬಾವಿಯಲ್ಲಿ ಪತ್ತೆಯಾದ ವಿಗ್ರಹ: ಪಾಳು ಬಾವಿಯ ಬಗ್ಗೆ ವಾಹಿತಿ ನೀಡಿ ಅಗೆಯಲು ಶುರುಮಾಡಿದಾಗ ಶಿವಲಿಂಗದ ಮೇಲ್ಭಾಗ, ಪಂಚಲೋಹದ ಗಣಪತಿ ವಿಗ್ರಹ, ಸಾಲಿಗ್ರಾಮ, ಗಂಟೆಯ ಮಣಿಗಳು, ದೇವರ ಕತ್ತಿ (ಕಡ್ತಲೆ) ಮತ್ತಿತರ ವಸ್ತುಗಳು ಪತ್ತೆಯಾಗಿದ್ದವು. ಅನತಿ ದೂರದಲ್ಲಿ ಲಿಂಗದ ಪಾಣಿಪೀಠ, ದೇಗುಲದ ಮುಖ ಮಂಟಪ, ಪ್ರಾಂಗಣ, ಕೆಂಪು ಕಲ್ಲಿನಿಂದ ನಿರ್ಮಿತವಾದ ಬಲಿಪೀಠ ಮುಂತಾದವುಗಳು ಪತ್ತೆಯಾಗಿವೆ.. ದೇಗುಲದ ಆವರಣಕ್ಕೆ ಹೊಂದಿಕೊಂಡಿರುವ ಕಾಫಿ ತೋಟದಲ್ಲಿ ಜೋಡಿ ನಾಗದೇವರ ನಾಗಕಲ್ಲು, ದೇಗುಲದ ಗರ್ಭಗುಡಿಗೆ ಅಳವಡಿಸುವ ಕುಂಬಕಳಸ ಕೂಡ ಪತ್ತೆಯಾಗಿದೆ.
ದೇಗುಲದ ಅಭಿವೃದ್ಧಿಗೆ ಪಣ: ದೇಗುಳ ಪಾಳು ಬಿದ್ದಿರುವುದರಿಂದ ಗ್ರಾಮದಲ್ಲಿ ಅಭಿವೃದ್ಧಿ ಕುಂಠಿತವಾಗಿದೆ ಎಂದು ಹೇಳಲಾಗಿರುವ ಹಿನ್ನೆಲೆಯಲ್ಲಿ ಮಾತಂಡ ಕುಟುಂಬಸ್ಥರ ಮುಂದಾಳತ್ವದಲ್ಲಿ ಜೀರ್ಣೋದ್ಧಾರ ಕಾರ್ಯ ಆರಂಭಿಸಲಾಗಿದೆ. ಜೊತೆಗೆ ದೇವಾಲಯದ ಇತಿಹಾಸ ಅರಿಯಲು ಪ್ರಾಚ್ಯವಸ್ತು ಮತ್ತು ಪುರಾತತ್ವ ಇಲಾಖೆ ನಿವೃತ್ತ ಅಧಿಕಾರಿಗಳಾಗಿರುವ ಮೂಲತಃ ಪಾರಾಣೆ ನಿವಾಸಿ ನಾಯಕಂಡ ಪ್ರಕಾಶ್ ಮುತ್ತಣ್ಣ ಅವರನ್ನು ಗ್ರಾಮಸ್ಥರು ಸಂಪರ್ಕಿಸಿದ್ದಾರೆ. ಇತ್ತೀಚೆಗೆ ದೇಗುಲವಿರುವ ಸ್ಥಳಕ್ಕೆ ಆಗಮಿಸಿ ಶೋಧ ಕಾರ್ಯ ಕೂಡ ನಡೆಸಲಾಗಿದೆ.

ದೇಗುಲವು ಸುಮಾರು ೭೦೦-೮೦೦ ವರ್ಷ ಇತಿಹಾಸ ಹೊಂದಿರಬಹುದು ಎಂದು ಊಹಿಸಬಹುದಾಗಿದೆ. ಗರ್ಭದೊಳಗೆ ಶಿವಲಿಂಗಯನಿಪೀಠ ಮತ್ತು ರುದ್ರ ಭಾಗವು ದೊರೆತಿರುವುದರಿಂದ ಈಶ್ವರ ದೇವಾಲಯವೆಂದು ಗುರುತಿಸಲಾಗಿದೆ. ದೇಗುಲದ ಇನ್ನಷ್ಟು ಅನ್ವೇಷಣೆ ಮಾಡಿದಲ್ಲಿ ಇತಿಹಾಸ ಅರಿಯಲು ಸಾಧ್ಯವಾಗುತ್ತದೆ. ಗ್ರಾಮಸ್ಥರು ಸಹಕಾರ ನೀಡಿದಲ್ಲಿ ಆದಷ್ಟು ಬೇಗ ವರದಿ ಸಿದ್ಧಪಡಿಸಿ ನೀಡಬಹುದು.
ನಾಯಕಂಡ ಪ್ರಕಾಶ್ ಮುತ್ತಣ್ಣ, ನಿವೃತ್ತ ಅಧಿಕಾರಿ, ಪುರಾತತ್ವ ಇಲಾಖೆ


ಗ್ರಾಮದ ಅಭಿವೃದ್ಧಿಗಾಗಿ ದೇವಾಲಯವನ್ನು ಅಭಿವೃದ್ಧಿಗೊಳಿಸಲು ನಿರ್ಧರಿಸಲಾಗಿದೆ. ದೇವಾಲಯಕ್ಕೆ ತೆರಳಲು ಮಾರ್ಗದ ಸಮಸ್ಯೆ ಇದ್ದ ಹಿನ್ನೆಲೆಯಲ್ಲಿ ಕೆಲಸ ತಡವಾಗಿದೆ. ಈಗ ದೇವಾಲಯ ಆವರಣಕ್ಕೆ ತೆರಳಲು ಪ್ರಕಾಶ್ ಎಂಬವರು ತಾತ್ಕಾಲಿಕವಾಗಿ ದಾರಿ ನೀಡಿದ್ದು, ಜೀರ್ಣೋದ್ಧಾರ ಕಾರ್ಯ ಸುಗಮವಾಗಲಿದೆ. ದೇವಾಲಯ ಪುನರ್ ನಿರ್ಮಾಣ ಕಾರ್ಯಕ್ಕೆ ಗ್ರಾಮಸ್ಥರು, ಸಂಘ-ಸಂಸ್ಥೆಗಳು, ದಾನಿಗಳು ಅಗತ್ಯ ಸಹಕಾರ ನೀಡಬೇಕು.
ಮಾತಂಡ ನಟೇಶ್ ಕಾಳಪ್ಪ, ಗ್ರಾಮಸ್ಥರು

andolanait

Recent Posts

ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ

ಮದ್ದೂರು : ತಾಲ್ಲೂಕಿನ ನಿಡಘಟ್ಟದ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕಾರು ಸುಟ್ಟುಹೋಗಿದ್ದು, ಅದೃಷ್ಟವಶಾತ್…

7 hours ago

ಮೈಸೂರಿನಲ್ಲಿ ನಾಳೆ ಇಂದ ಮೂರು ದಿನ ದೇಸಿ ಎಣ್ಣೆ ಮೇಳ : ಮೇಳೈಸಲಿದೆ ಸಾಂಪ್ರದಾಯಿಕ ಎಣ್ಣೆ

ಮೈಸೂರು : ಇತ್ತೀಚಿನ ದಿನಗಳಲ್ಲಿ ಸಾಂಪ್ರದಾಯಿಕ ಅಡುಗೆ ಎಣ್ಣೆಗಳು, ಅವುಗಳ ಆರೋಗ್ಯ ಲಾಭಗಳ ಕಾರಣದಿಂದ ಮತ್ತೆ ಹೆಚ್ಚಿನ ಮಹತ್ವ ಪಡೆದುಕೊಳ್ಳುತ್ತಿವೆ.…

9 hours ago

ಬಿ-ಖಾತಾಗಳಿಗೂ ʼಎ-ಖಾತಾʼ ಭಾಗ್ಯ ; ಸಂಪುಟ ಸಭೆಯಲ್ಲಿ ನಿರ್ಣಯ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು (ಜ.8) ನಡೆದ 2026ನೇ ಸಾಲಿನ 2ನೇ ಸಚಿವ ಸಂಪುಟದ ಸಭೆಯಲ್ಲಿ…

10 hours ago

ಮಂಡ್ಯದಲ್ಲಿ ಕೆಂಪೇಗೌಡರ ಬೃಹತ್‌ ಪ್ರತಿಮೆ : ಶಿಲ್ಪಿ ಅರುಣ್‌ ಯೋಗಿರಾಜ್‌ಗೆ ಕೆತ್ತನೆ ಜವಾಬ್ದಾರಿ

ಮಂಡ್ಯ : ನಗರಕ್ಕೆ ಹೈಟೆಕ್ ಸ್ಪರ್ಶ ನೀಡಲು ಮುಂದಾಗಿರುವ ಶಾಸಕ ಪಿ. ರವಿಕುಮಾರಗೌಡ ಅವರು, ಒಕ್ಕಲಿಗ ಜನಾಂಗದ ಹಲವು ವರ್ಷಗಳ…

10 hours ago

ಬೀದಿಬದಿ ವ್ಯಾಪಾರಿಗಳ ವಲಯ ನಿರ್ಮಿಸಲು ಚಿಂತನೆ : ಸಂಸದ ಯದುವೀರ್‌

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನ ಸ್ವಚ್ಛತೆಯನ್ನು ಕಾಪಾಡುವ ನಿಟ್ಟಿನಲ್ಲಿ ನಗರದಲ್ಲಿ ಬೀದಿಬದಿ ವ್ಯಾಪಾರಿಗಳ ವಲಯ ನಿರ್ಮಿಸಲು ಆದ್ಯತೆ ನೀಡಲಾಗುವುದು…

11 hours ago

ಗೃಹಲಕ್ಷ್ಮಿ ಹಣ ಶೀಘ್ರ ಸಂದಾಯ : ಸಚಿವೆ ಹೆಬ್ಬಾಳಕರ್‌

ಬೆಂಗಳೂರು : ಹಣಕಾಸು ಇಲಾಖೆ ಅನುಮತಿ ನೀಡಿದ ತಕ್ಷಣವೇ 2025ರ ಫೆಬ್ರವರಿ ಹಾಗೂ ಮಾರ್ಚ್‌ ತಿಂಗಳ ಗೃಹಲಕ್ಷ್ಮೀ ಯೋಜನೆಯ ಹಣವನ್ನು…

11 hours ago