ಹನೂರು : ತಾಲ್ಲೂಕಿನ ಸೂಳೇರಿಪಾಳ್ಯ ಗ್ರಾ. ಪಂ ವ್ಯಾಪ್ತಿಗೆ ಸೇರಿದ ಕಾಡಂಚಿನ ಪಚ್ಚೆದೊಡ್ಡಿ ಗ್ರಾಮದಲ್ಲಿ ಮಾದೇಗೌಡ ಎಂಬುವರಿಗೆ ಸೇರಿದ ಒಂದು ಹಸು ಮತ್ತು ಒಂದು ಕರು ಗಂಟು ರೋಗಕ್ಕೆ ಬಲಿಯಾಗಿದೆ.
ಕಳೆದ 15 ದಿನಗಳಿಂದ ಪಶುವೈದ್ಯಾಧಿಕಾರಿಗಳಿಗೆ ದೂರವಾಣಿ ಮೂಲಕ ತಿಳಿಸಿದರು ಯಾವುದೇ ಪ್ರಯೋಜನವಾಗಿಲ್ಲ ಎಂದು ಮಾದೇಗೌಡ ಆರೋಪಿಸಿದ್ದಾರೆ. ಇನ್ನು ಮುಂದಾದರೂ ಪಶು ಇಲಾಖೆಯ ಹಿರಿಯ ಅಧಿಕಾರಿಗಳು ಚರ್ಮಗಂಟು ರೋಗ ತಡೆಯುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಈ ಭಾಗದ ರೈತರು ಒತ್ತಾಯಿಸಿದ್ದಾರೆ.
ಸೂಳ್ಳೇರಿಪಾಳ್ಯ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಾಡಂಚಿನ ಗ್ರಾಮಗಳ ಎಲ್ಲಾ ಹಸುಗಳಿಗೆ ಈಗಾಗಲೇ ಮೊದಲ ಹಂತದಲ್ಲಿ ಚಿಕಿತ್ಸೆ ನೀಡಲಾಗಿದೆ. ಕೆಲವೊಂದು ಹಸುಗಳು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದೆ. ಮೃತಪಟ್ಟ ಹಸುಗಳ ಮರಣೋತ್ತರ ಪರೀಕ್ಷೆ ನಡೆಸಿ ಆದಷ್ಟು ಬೇಗ ಪರಿಹಾರ ನೀಡಲಾಗುವುದು ಎಂದು ಚಾ. ನಗರದ ಪಶುಪಾಲನ ಇಲಾಖೆ ಉಪನಿರ್ದೇಶಕರು ಶಿವಣ್ಣ ತಿಳಿಸಿದ್ದಾರೆ.