ಮಂಡ್ಯ: ಮಂಡ್ಯ ನಗರದ ರೈಲ್ವೆ ನಿಲ್ದಾಣದ ಮುಂಭಾಗ ಬೆಂಗಳೂರು-ಮೈಸೂರು ಹೆದ್ದಾರಿಯ ಬಾಟ(BATA) ಶೋರೂಮ್ ಬಳಿ ಕ್ಯಾಂಟರ್ ಬೈಕ್ ಗೆ ಹಿಂಬದಿಯಿಂದ ಗುದ್ದಿದ ಪರಿಣಾಮ ವ್ಯಕ್ತಿಯೊಬ್ಬ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಮಂಡ್ಯ ನಗರದ ರಾಜ್ ಕುಮಾರ್ ಬಡಾವಣೆಯ ಆಂಟೋನಿಯವರ ಪುತ್ರ ಜಾರ್ಜ್ ವಿಜಯ್ ಕುಮಾರ್ ಪಿ.ಎ(54) ಎಂಬುವರೇ ಮೃತಪಟ್ಟವರು.
ಬಾಟ ಶೋರೂಂ ಬಳಿ ಇಂದು ರಾತ್ರಿ ಏಳು ಗಂಟೆ ಸುಮಾರಿಗೆ ಲಾರಿಯೊಂದು ಕ್ಯಾಂಟರ್ ಹಿಂಬದಿಗೆ ಗುದ್ದಿದ ಪರಿಣಾಮ ಕ್ಯಾಂಟರ್ ಬೈಕ್ ನಲ್ಲಿದ್ದ ಜಾರ್ಜ್ ವಿಜಯ್ ಕುಮಾರ್ ಅವರಿಗೆ ಗುದ್ದಿದೆ.ಕ್ಯಾಂಟರ್ ಗುದ್ದಿದ ರಭಸಕ್ಕೆ ಜಾರ್ಜ್ ವಿಜಯ್ ಕುಮಾರ್ ಸ್ಥಳದಲ್ಲಿಯೇ ಪ್ರಾಣ ಬಿಟ್ಟಿದ್ದಾರೆ.
ನಿನ್ನೆಯಷ್ಟೇ ಕಾರೆಮನೆ ಗೇಟ್ ಬಳಿ ರಸ್ತೆ ಗುಂಡಿಗೆ ನಿವೃತ್ತ ಯೋಧ ಕುಮಾರ್ ದುರ್ಮರಣಕ್ಕೀಡಾಗಿದ್ದರು. ಈ ಬೆನ್ನಲ್ಲೇ ಇಂದು ಈ ಅವಘಡ ನಡೆದಿರುವುದು ಆಘಾತ ಉಂಟು ಮಾಡಿದೆ.
ಮೃತ ವ್ಯಕ್ತಿಗೆ ಇಬ್ಬರು ಹೆಣ್ಣು ಮಕ್ಕಳಿದ್ದು, ಮಧ್ಯಮ ವರ್ಗದ ಕುಟುಂಬದವರಾದ ಇವರು ಮೆಕ್ಯಾನಿಕ್ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.
ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ…
ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…
ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…
ಟೆಹ್ರಾನ್ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್‌ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…
ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…
ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…