Mysore
31
scattered clouds

Social Media

ಮಂಗಳವಾರ, 31 ಮಾರ್ಚ್ 2026
Light
Dark

ʼನಾ ನಾಯಕಿʼ ಸಮಾವೇಶಕ್ಕೆ ಆಗಮಿಸಲು ಮನವಿ

ಹನೂರು: ಜ.16ಕ್ಕೆ ರಾಷ್ಟ್ರೀಯ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಬೆಂಗಳೂರಿಗೆ ಆಗಮಿಸಲಿದ್ದು, ನಾನಾಯಕಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಿದ್ದಾರೆ. ಆದ್ದರಿಂದ ಹನೂರು ಕ್ಷೇತ್ರದಿಂದ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಆಗಮಿಸಬೇಕು ಎಂದು ಶಾಸಕ ಆರ್.ನರೇಂದ್ರ ತಿಳಿಸಿದರು.

ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಆಯೋಜಿಸಿದ್ಧ ಕಾರ್ಯಕರ್ತರು ಹಾಗೂ ಮುಖಂಡರ ಸಭೆಯಲ್ಲಿ ಅವರು ಮಾತನಾಡಿ, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಪಂಚಾಯತ್ ರಾಜ್ ಕಾಯ್ದೆಯನ್ನು ತಿದ್ದುಪಡಿ ತರುವುದರ ಮೂಲಕ ಮಹಿಳೆಯರಿಗೆ ಸ್ಥಳೀಯ ಸಂಸ್ಥೆಗಳಲ್ಲಿ ಮೀಸಲಾತಿಯನ್ನು ಕಲ್ಪಿಸಿದ್ದು, ಆಡಳಿತದ ಅವಕಾಶವನ್ನು ಒದಗಿಸಿದೆ. ಇದು ಕಾಂಗ್ರೆಸ್ ಪಕ್ಷಕ್ಕೆ ಸಂದ ಗೌರವ. ಈ ದಿಸೆಯಲ್ಲಿ ಇಂದು ಮಹಿಳೆಯರು ಸಂಘಟಿತರಾಗುತ್ತಿರುವುದು ಮೆಚ್ಚುಗೆಯ ಸಂಗತಿ. ಈ ದಿಸೆಯಲ್ಲಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಅವರು ಜ.16 ರಂದು ಬೆಂಗಳೂರಿಗೆ ಆಗಮಿಸುತ್ತಿದ್ದು, ನಾನಾಯಕಿ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಹಾಗಾಗಿ ಹನೂರು ಕ್ಷೇತ್ರದಿಂದ ಮಹಿಳಾ ಕಾರ್ಯಕರ್ತರು ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಸಮಾವೇಶದಲ್ಲಿ ಭಾಗವಹಿಸುವುದರ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ತಿಳಿಸಿದರು.

ಈ ಹಿಂದೆ ಕಾಂಗ್ರೆಸ್ ಸರ್ಕಾರ ಬಡವರಿಗೆ ಭಾಗ್ಯಲಕ್ಷ್ಮೀ ಯೋಜನೆಯ ಮೂಲಕ ಉಚಿತ ವಿದ್ಯುತ್ ಕಲ್ಪಿಸಲಾಗಿತ್ತು. ಆದರೆ ಇದೀಗ ಬಿಜೆಪಿ ಸರ್ಕಾರ ಭಾಗ್ಯಲಕ್ಷ್ಮೀ ಯೋಜನೆಯಡಿ ಸಂಪರ್ಕ ಪಡೆದಿರುವವರು ವಿದ್ಯುತ್ ಬಿಲ್ ಪಾವತಿಸಬೇಕು ಎಂದು ಸೂಚಿಸಿ ಬಡ ಜನರನ್ನು ಕಷ್ಟಕ್ಕೆ ನೂಕಿದೆ. ರಾಜ್ಯದಲ್ಲಿ ವಿದ್ಯುತ್ ಹೆಚ್ಚು ಉತ್ಪಾದನೆ ಹೆಚ್ಚಾಗುತ್ತಿದ್ದು, ಇತರೆ ರಾಜ್ಯಗಳಿಗೂ ಪೂರೈಕೆ ಮಾಡಲಾಗುತ್ತಿದೆ. ಅಂತಹದರಲ್ಲಿ ರೈತರ ಕೃಷಿ ಪಂಪ್‍ಸೆಟ್‍ಗಳಿಗೆ ಸಮರ್ಪಕ ವಿದ್ಯುತ್ ನೀಡುತ್ತಿಲ್ಲ. ಜತೆಗೆ ಕಳೆದ 3 ವರ್ಷದ ಅವಧಿಯಲ್ಲಿ ಬಿಜೆಪಿ ಸರ್ಕಾರ ಕ್ಷೇತ್ರದ ಅಭಿವೃದ್ಧಿಗೆ ಯಾವುದೇ ಅನುದಾನವನ್ನು ನೀಡಿಲ್ಲ. ಬದಲಾಗಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕ್ಷೇತ್ರಕ್ಕೆ 3.5 ಸಾವಿರ ಕೋಟಿ ರೂ ಅನುದಾನ ಲಭಿಸಿದ್ದು, ಹಲವು ಅಭಿವೃದ್ಧಿ ಕಾರ್ಯಗಳು ಇಮದಿಗೂ ನಡೆಯುತ್ತಿದೆ. ಆದ್ದರಿಂದ ಪ್ರತಿಯೊಬ್ಬರೂ ಪಕ್ಷದ ಸಂಘಟನೆಗೆ ಹೆಚ್ಚಿನ ಒತ್ತು ನೀಡಬೇಕು ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಕಳೆದ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ಧ ಪ್ರದೀಪ್‍ಕುಮಾರ್ ಅವರು ಶಾಸಕ ಆರ್.ನರೇಂದ್ರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.

ಈ ಸಂದರ್ಭದಲ್ಲಿ ಜಿಪಂ ಮಾಜಿ ಅಧ್ಯಕ್ಷೆ ಶಿವಮ್ಮ, ಮಾಜಿ ಉಪಾಧ್ಯಕ್ಷ ಬಸವರಾಜು, ತಾಪಂ ಮಾಜಿ ಸದಸ್ಯ ಜವಾದ್ ಅಹಮದ್, ಪಪಂ ಉಪಾಧ್ಯಕ್ಷ ಗಿರೀಶ್, ಸದಸ್ಯರಾದ ಸೋಮಶೇಖರ್, ಸಂಪತ್‍ಕುಮಾರ್, ಚಾಮುಲ್ ನಿರ್ದೇಶಕ ಶಾಹುಲ್ ಅಹಮದ್, ಸೂಳೆರಿ ಪಾಳ್ಯ ಗ್ರಾಪಂ ಅಧ್ಯಕ್ಷ ಸುಧಾ, ಮುಖಂಡರಾದ ಮದುವನಹಳ್ಳಿ ಶಿವಕುಮಾರ್, ಸಿದ್ದರಾಜು, ಪೆದ್ದನಪಾಳ್ಯ ಮಣಿ, ಅಜ್ಜಿಪುರ ನಾಗರಾಜು, ಶಾಗ್ಯ ಮಲ್ಲೇಶ್, ಪಾಳ್ಯ ಕೃಷ್ಣ, ನಟರಾಜು ಹಾಗೂ ಇತರರು ಉಪಸ್ಥಿತರಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!