ಮಂಡ್ಯ: ತಲೆಸೀಮಿಯಾ ಕಾಯಿಲೆಯಿಂದ ಬಳಲುತ್ತಿರುವ ಮಗುವಿನ ಚಿಕಿತ್ಸೆಗಾಗಿ ಸಹಾಯ ಮಾಡುವಂತೆ ಪೋಷಕರು ಮನವಿ ಮಾಡಿಕೊಂಡಿದ್ದಾರೆ.
ಮದ್ದೂರು ತಾಲ್ಲೂಕು ಬಿದರಕೋಟೆಯ ಪ್ರಸನ್ನಕುಮಾರ್ ಹಾಗೂ ರಮ್ಯಾ ಅವರ 5 ವರ್ಷದ ಗಂಡು ಮಗು ಅಚ್ಚುತ್‌ಕುಮಾರ್ ಕಳೆದ ಒಂದೂವರೆ ವರ್ಷದಿಂದ ತಲೆಸೀಮಿಯಾ ಕಾಯಿಲೆಯಿಂದ ಬಳಲುತ್ತಿದ್ದಾನೆ. ಈಗಾಗಲೇ ಲಕ್ಷಾಂತರ ರೂ. ಚಿಕಿತ್ಸೆಗಾಗಿ ಖರ್ಚಾಗಿದೆ. ದಾನಿಗಳು ಮಗುವಿನ ಚಿಕಿತ್ಸೆಗೆ ಸಹಾಯ ಮಾಡಬೇಕು ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಪೋಷಕರು ಮನವಿ ಮಾಡಿದರು.
ಅಚ್ಚುತ್ ಕುಮಾರ್ ಮೂರೂವರೆ ವರ್ಷದವನಿದ್ದಾಗ ಜ್ವರ ಬಂದಿತ್ತು. ಮಗುವನ್ನು ಆಸ್ಪತ್ರೆಗೆ ಕರೆದೊಯ್ಯವಾಗ ಅನಿಮಿಯಾ ಎಂದು ಹೇಳಿದ್ದರು. ನಂತರದ ದಿನಗಳಲ್ಲಿ ಮಗುವಿನ ಆರೋಗ್ಯ ಕ್ಷೀಣಿಸುತ್ತಾ ಬಂತು. ನಾವು ಬೇರೆ ಬೇರೆ ಆಸ್ಪತ್ರೆಗಳಿಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದೆವು. ಆದರೂ ಗುಣಮುಖವಾಗಲಿಲ್ಲ. ಬಳಿಕ ನಾರಾಯಣ ಆಸ್ಪತ್ರೆಯಲ್ಲಿ ತೋರಿಸಿದಾಗ ಮಗು ತಲೆಸೀಮಿಯಾ ಕಾಯಿಲೆಯಿಂದ ಬಳಲುತ್ತಿದೆ ಎಂದು ತಿಳಿದುಬಂತು. ಇದರಿಂದ ಗಾಬರಿಗೊಂಡ ನಾವು ಎಲ್ಲ ರೀತಿಯ ಚಿಕಿತ್ಸೆಯನ್ನೂ ಕೊಡಿಸಿದ್ದೆವು. ಆದರೂ ಗುಣವಾಗಲಿಲ್ಲ ಎಂದು ತಮ್ಮ ಅಳಲು ತೋಡಿಕೊಂಡರು.
ಶಸ್ತ್ರ ಚಿಕಿತ್ಸೆ ಮಾಡಿಸಲು ಸುಮಾರು 20 ಲಕ್ಷ ಹಾಗೂ ಒಂದು ವರ್ಷದ ಚಿಕಿತ್ಸೆ 10 ಲಕ್ಷ, ಒಟ್ಟಾರೆ 30 ಲಕ್ಷ ರೂ.ಗಳ ವೆಚ್ಚ ತಗುಲುತ್ತದೆ ಎಂದು ವೈದ್ಯರು ತಿಳಿಸಿದ್ದಾರೆ. ಇಷ್ಟು ದೊಡ್ಡ ಮೊತ್ತದ ಹಣ ನಮ್ಮಲ್ಲಿ ಇಲ್ಲ. ನಾವು ಇರುವ ತುಂಡು ಭೂಮಿಯಲ್ಲಿ ಕೃಷಿ ಚಟುವಟಿಕೆ ಮಾಡಿಕೊಂಡು ಬದುಕುತ್ತಿದ್ದೇವೆ. ಕೂಲಿ ನಾಲಿ ಮಾಡಿಕೊಂಡು ಜೀವನ ನಡೆಸುತ್ತಿದ್ದೇವೆ. ದಯವಿಟ್ಟು ದಾನಿಗಳು ಮಗುವಿನ ಚಿಕಿತ್ಸೆಗೆ ಸಹಾಯ ಮಾಡಬೇಕು ಎಂದು ಕೋರಿದರು.
ಮಗುವಿನ ಬ್ಯಾಂಕ್ ಆಫ್ ಬರೋಡಾ ಬಿದರಕೋಟೆ ಶಾಖೆಯಲ್ಲಿ ಖಾತೆ ತೆರೆಯಲಾಗಿದೆ. ಉಳಿತಾಯ ಖಾತೆ ಸಂಖ್ಯೆ 73540100002158 ಸಂಖ್ಯೆಗೆ ಹಣ ಕಳುಹಿಸಬಹುದು ಎಂದು ಅವರು ಹೇಳಿದರು. ಪತ್ನಿ ರಮ್ಯಾ ಹಾಗೂ ಮಗ ಅಚ್ಚುತ್ ಕುಮಾರ್ ಗೋಷ್ಠಿಯಲ್ಲಿದ್ದರು.
ಬೆಂಗಳೂರು: ನಾಳೆ ರಾಜ್ಯ ಬಜೆಟ್ ಮಂಡನೆಯಾಗಲಿದ್ದು, ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ಮಂಡನೆ ಮಾಡಲಿದ್ದಾರೆ. ರಾಜ್ಯ ಬಜೆಟ್ ಮಂಡನೆಯ…
ಹನೂರು: ಬೈಕ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿ ತೀವ್ರ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಖಾಸಗಿ ಆಸ್ಪತ್ರೆಯಲ್ಲಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವನ್ಯಜೀವಿಗಳ ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಕೊಳ್ಳೇಗಾಲ…
ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಎಐಸಿಸಿ ಮಹತ್ವದ ಜವಾಬ್ದಾರಿ ಕೊಟ್ಟಿದೆ. ಈ…
ಮಂಡ್ಯ: ಕೃಷಿ ಕ್ಷೇತ್ರದಲ್ಲಿ ಯಾಂತ್ರೀಕರಣದ ಮಹತ್ವವನ್ನು ರೈತರಿಗೆ ಪರಿಚಯಿಸುವ ಉದ್ದೇಶದಿಂದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಮಂಡ್ಯ ವತಿಯಿಂದ “ಕೃಷಿ ಯಂತ್ರೋಪಕರಣ…
ಮಂಡ್ಯ: ಹಳೆಯ ಬೀದಿ ದೀಪಗಳನ್ನು ಎಲ್‌ಇಡಿ ದೀಪಗಳಾಗ ಬದಲಾಯಿಸುವುದು ಶಕ್ತಿ ಉಳಿತಾಯ, ಕಡಿಮೆ ನಿರ್ವಹಣಾ ವೆಚ್ಚ ಮತ್ತು ದೀರ್ಘಾವಧಿಯ ಬಾಳಿಕೆಗೆ…